Cholesterol: ಹೃದಯದ ಆರೋಗ್ಯ ಸ್ನೇಹಿ ಮೀನು- ಇದು ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಿಸುವುದಿಲ್ಲ
ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾಯುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಹೃದಯಾಘಾತ ಸಂಭವಿಸಲು ವಿವಿಧ ಕಾರಣಗಳಿದ್ದರೂ ಪ್ರಾಥಮಿಕ ಕಾರಣವೆಂದರೆ ಕೊಲೆಸ್ಟ್ರಾಲ್. ಕೊಲೆಸ್ಟ್ರಾಲ್ ನಮ್ಮ ದೇಹದ ಪ್ರತಿಯೊಂದು ಜೀವಕೋಶದಲ್ಲೂ ಕಂಡುಬರುವ ಕೊಬ್ಬಿನ ಪದಾರ್ಥವಾಗಿದೆ. ಕೊಲೆಸ್ಟ್ರಾಲ್‌ನಲ್ಲಿ ಎರಡು ವಿಧಗಳಿವೆ. ಅವು ಎಲ್‌ಡಿಎಲ್ (LDL) ಕೆಟ್ಟ ಕೊಲೆಸ್ಟ್ರಾಲ್ ಮತ್ತು ಹೆಚ್‌ಡಿಎಲ್ (HDL) ಒಳ್ಳೆಯ ಕೊಲೆಸ್ಟ್ರಾಲ್.
ಯಾರಾದರೂ ಅನಾರೋಗ್ಯಕರ ಜೀವನಶೈಲಿ ಮತ್ತು ಕಳಪೆ ಆಹಾರ ಪದ್ಧತಿಯನ್ನು ಹೊಂದಿದ್ದರೆ ಅಂತವರ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗುತ್ತದೆ. ಅಲ್ಲದೆ ಅಂತವರು ಕೊಲೆಸ್ಟ್ರಾಲ್ ಸಮಸ್ಯೆಗಳಿಂದ ಬಳಲುತ್ತಾರೆ. ನೀವು ಕೊಲೆಸ್ಟ್ರಾಲ್ ಸಮಸ್ಯೆಗಳನ್ನು ಹಗುರವಾಗಿ ತೆಗೆದುಕೊಂಡರೆ ಆ ಕೊಲೆಸ್ಟ್ರಾಲ್ ನಿಮ್ಮ ರಕ್ತನಾಳಗಳಲ್ಲಿ ಸಂಗ್ರಹವಾಗಬಹುದು. ನಿಮ್ಮ ರಕ್ತದೊತ್ತಡವನ್ನು ಹೆಚ್ಚಿಸಬಹುದು ಮತ್ತು ಹೃದಯಾಘಾತ ಅಥವಾ ಪಾರ್ಶ್ವವಾಯುವಿನ ಅಪಾಯವನ್ನು ಹೆಚ್ಚಿಸಬಹುದು.

ಇದನ್ನು ತಪ್ಪಿಸಲು ಪ್ರತಿದಿನ ವ್ಯಾಯಾಮ ಮಾಡಬೇಕು ಮತ್ತು ಕೊಲೆಸ್ಟ್ರಾಲ್ ಕಡಿಮೆ ಇರುವ ಆಹಾರವನ್ನು ಸೇವಿಸಬೇಕು. ಅಲ್ಲದೆ ಮಾಂಸಾಹಾರಿಗಳು ಮಟನ್ ಖರೀದಿಸಿ ತಿನ್ನುವುದನ್ನು ತಪ್ಪಿಸಬೇಕು. ಏಕೆಂದರೆ ಇದು ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ವೇಗವಾಗಿ ಹೆಚ್ಚಿಸುತ್ತದೆ. ಇದರ ಬದಲು ಕೋಳಿ ಮತ್ತು ಮೀನುಗಳನ್ನು ತಿನ್ನಬಹುದು.
ಮೀನುಗಳಲ್ಲಿ ಹಲವು ವಿಧಗಳಿವೆ. ಎಲ್ಲಾ ಮೀನುಗಳು ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುವುದಿಲ್ಲ. ಕೆಲವು ರೀತಿಯ ಮೀನುಗಳು ಮಾತ್ರ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತವೆ. ಹಾಗಾದರೆ ಯಾವ ಮೀನುಗಳು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಿ ಹೃದಯಾಘಾತವನ್ನು ತಡೆಯಲು ಸಹಾಯ ಮಾಡುತ್ತವೆ ಎಂದು ಈಗ ತಿಳಿಯೋಣ.
1. ಟ್ಯೂನ ಮೀನು (Tuna Fish): ಟ್ಯೂನ ಮೀನುಗಳಲ್ಲಿ ಒಮೆಗಾ-3 ಕೊಬ್ಬಿನಾಮ್ಲಗಳು ಅಧಿಕವಾಗಿವೆ. ಈ ರೀತಿಯ ಕೊಬ್ಬಿನಾಮ್ಲಗಳು ರಕ್ತನಾಳಗಳಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಲ್ಲದೆ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ.
2. ಮ್ಯಾಕೆರೆಲ್ ಮೀನು (Mackerel Fish): ಮ್ಯಾಕೆರೆಲ್ ಅತ್ಯಂತ ರುಚಿಕರವಾದ ಮೀನುಗಳಲ್ಲಿ ಒಂದಾಗಿದೆ. ಒಮೆಗಾ-3 ಕೊಬ್ಬಿನಾಮ್ಲಗಳಿಂದ ಸಮೃದ್ಧವಾಗಿದೆ. ಈ ಕೊಬ್ಬಿನಾಮ್ಲಗಳು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಬಹಳ ಸಹಾಯ ಮಾಡುತ್ತವೆ.
3. ಟ್ರೌಟ್ ಮೀನು (Trout Fish): ಟ್ರೌಟ್ ಮೀನುಗಳು ಒಮೆಗಾ-3 ಕೊಬ್ಬಿನಾಮ್ಲಗಳಲ್ಲಿ ಸಮೃದ್ಧವಾಗಿವೆ. ನಿಮ್ಮ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಬಾರದು ಅಂತ ನೀವು ಬಯಸಿದರೆ, ಈ ಟ್ರೌಟ್ ಮೀನನ್ನು ಆಗಾಗ್ಗೆ ಖರೀದಿಸಿ ತಿನ್ನಿರಿ. ಇದರಿಂದ ಹೃದಯದ ಆರೋಗ್ಯ ಸುಧಾರಿಸಬಹುದು.
4. ಹೆರಿಂಗ್ ಮೀನು (Herring Fish): ಹೆರಿಂಗ್ ಇತರ ಮೀನುಗಳಿಗಿಂತ ಎರಡು ಅಗತ್ಯ ಕೊಬ್ಬಿನಾಮ್ಲಗಳಾದ EPA ಮತ್ತು DHA ಗಳನ್ನು ಹೆಚ್ಚು ಹೊಂದಿರುತ್ತದೆ. ಇವು ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಮುಖ್ಯವಾಗಿ ಈ ಮೀನಿನಲ್ಲಿ ವಿಟಮಿನ್ ಡಿ ಕೂಡ ಸಮೃದ್ಧವಾಗಿದೆ.
5. ಸಾರ್ಡೀನ್‌ಗಳು (Sardines): ಸಾರ್ಡೀನ್‌ಗಳು ಅತ್ಯಂತ ಪೌಷ್ಟಿಕ ಮೀನುಗಳಲ್ಲಿ ಸೇರಿವೆ. ಈ ಮೀನು ಒಮೆಗಾ-3 ಕೊಬ್ಬಿನಾಮ್ಲಗಳಿಂದ ಸಮೃದ್ಧವಾಗಿರುವುದಲ್ಲದೆ, ರಂಜಕ, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಕಬ್ಬಿಣ ಹಾಗೂ ಸೆಲೆನಿಯಂನಂತಹ ಖನಿಜಗಳಿಂದ ಕೂಡ ಸಮೃದ್ಧವಾಗಿದೆ. ಆದ್ದರಿಂದ ನಿಯಮಿತವಾಗಿ ಸಾರ್ಡೀನ್‌ಗಳನ್ನು ತಿನ್ನುವುದರಿಂದ ಹೃದಯದ ಆರೋಗ್ಯ ಸುಧಾರಿಸುತ್ತದೆ, ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆಯಾಗುತ್ತದೆ. ಜೊತೆಗೆ ನಿಮ್ಮ ಒಟ್ಟಾರೆ ದೇಹವನ್ನು ಆರೋಗ್ಯವಾಗಿಡುತ್ತದೆ.
(ಗಮನಿಸಿ: ಮೇಲೆ ನೀಡಲಾದ ಮಾಹಿತಿ ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಯಾವುದೇ ಮಾಹಿತಿ ಅನುಷ್ಠಾನಕ್ಕೆ ತರುವ ಮುನ್ನ ಸಂಬಂಧಪಟ್ಟ ವೃತ್ತಿಪರನ್ನು ಸಂಪರ್ಕಿಸಿ)
-
Vastu Tips: ವಾಸ್ತು ಪ್ರಕಾರ ನಮ್ಮ ಮನೆಯ ಸುತ್ತಮುತ್ತಲಿನ ವಿನ್ಯಾಸ ಹೇಗಿರಬೇಕು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Vastu Plants: ಮನೆಯಲ್ಲೇ ಐಶ್ವರ್ಯ ಹೆಚ್ಚಿಸಬೇಕಾ? ಈ 5 ಸಸ್ಯಗಳನ್ನು ಬೆಳೆಸಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೇಸಿಗೆಯಲ್ಲಿ ತಣ್ಣೀರಿನ ಸ್ನಾನ ಮಾಡುವ ಮೊದಲು ತಿಳಿದುಕೊಳ್ಳಬೇಕಾದ ವಿಷಯಗಳು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications