ಡಾ।ಎಸ್.ಪಿ.ಪಾಟೀಲ್ ಅವರಿಗೆ ಚಾವುಂಡರಾಯ ಪ್ರಶಸ್ತಿ
ಬೆಂಗಳೂರು : ಹಿರಿಯ ವಿದ್ವಾಂಸ ಡಾ।ಎಸ್.ಪಿ. ಪಾಟೀಲ್ ಅವರನ್ನು 2001 ನೇ ಇಸವಿಯ ಚಾವುಂಡರಾಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಜೈನ ಸಾಹಿತ್ಯ- ಸಂಸ್ಕೃತಿ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ವಿದ್ವಾಂಸರಿಗೆ ಚಾವುಂಡರಾಯ ಪ್ರಶಸ್ತಿಯನ್ನು ನೀಡಲಾಗುತ್ತದೆ. 1993 ರಲ್ಲಿ ನಡೆದ ಮಹಾ ಮಸ್ತಕಾಭಿಷೇಕದ ಸ್ಮರಣಾರ್ಥ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಚಾವುಂಡರಾಯ ಪ್ರಶಸ್ತಿಯನ್ನು ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಸ್ಥಾಪಿಸಿದ್ದರು.
ಪ್ರಶಸ್ತಿಯು 20 ಸಾವಿರ ರುಪಾಯಿ ನಗದು, ಕಂಚಿನ ಫಲಕ, ಪ್ರಶಸ್ತಿ ಪತ್ರ, ಶಾಲು ಹಾಗೂ ಫಲ ತಾಂಬೂಲ ಒಳಗೊಂಡಿದೆ. ಡಿಸೆಂಬರ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಪಾಟೀಲ್ ಅವರಿಗೆ ಪ್ರಶಸ್ತಿಯನ್ನು ವಿತರಿಸಲಾಗುವುದು.
(ಇನ್ಫೋ ವಾರ್ತೆ)
ಮುಖಪುಟ / ಸಾಹಿತ್ಯ ಸೊಗಡು











Click it and Unblock the Notifications