ಫೆ.1ರಿಂದ ತುಮಕೂರಿನಲ್ಲೇ 69ನೇ ಕನ್ನಡ ಸಾಹಿತ್ಯ ಸಮ್ಮೇಳನ
ಬೆಂಗಳೂರು : ವಿವಿಧ ಕಾರಣಗಳಿಂದ ಮುಂದೂಡಲಾಗಿದ್ದ 69ನೇ ಕನ್ನಡ ಸಾಹಿತ್ಯ ಸಮ್ಮೇಳನ ಮತ್ತೆ ತುಮಕೂರಿನಲ್ಲೇ ನಡೆಯುತ್ತಿದೆ. ಫೆ.1ರಿಂದ ಮೂರು ದಿನಗಳ ಕಾಲ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆಸಲು ತುಮಕೂರು ಜಿಲ್ಲಾ ಸಾಹಿತ್ಯಾಸಕ್ತರ ಸಭೆ ಶುಕ್ರವಾರ ತೀರ್ಮಾನಿಸಿದೆ.
ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ. ಜಯಚಂದ್ರ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹರಿಕೃಷ್ಣ ಪುನರೂರು ಸಭೆಯ ನಂತರ ಪತ್ರಕರ್ತರಿಗೆ ಈ ವಿಷಯ ತಿಳಿಸಿದ್ದಾರೆ. ಪೂರ್ವಸಿದ್ಧತೆಯ ಕೊರತೆ, ಜಿಲ್ಲಾ ರಾಜಕೀಯ ಹಾಗೂ ಗುಜರಾತ್‌ನಲ್ಲಿ ಸಂಭವಿಸಿದ ಭೀಕರ ಭೂಕಂಪದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಸಾಹಿತ್ಯ ಸಮ್ಮೇಳನ ತುಮಕೂರಿನ ಕೈತಪ್ಪುತ್ತದೆ ಎಂಬ ಶಂಕೆ ಈಗ ನಿವಾರಣೆ ಆದಂತಾಗಿದೆ.
ಫೆಬ್ರವರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು ಜಯಚಂದ್ರ ಅವರ ಅಧ್ಯಕ್ಷತೆಯಲ್ಲಿ ಸ್ವಾಗತ ಸಮಿತಿ ರಚಿಸಲಾಗಿದೆ. ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮಿಜಿ ಹಾಗೂ ಆದಿ ಚುಂಚನಗಿರಿಯ ಬಾಲಗಂಗಾದರ ನಾಥ ಸ್ವಾಮೀಜಿ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ಹಾಗೂ ಸಂಸತ್ ಸದಸ್ಯ ಬಸವರಾಜು ಅವರನ್ನು ಸ್ವಾಗತ ಸಮಿತಿ ಗೌರವಾಧ್ಯಕ್ಷರಾಗಿರುತ್ತಾರೆ.
(ಇನ್‌ಫೋ ವಾರ್ತೆ)
ವಾರ್ತಾ ಸಂಚಯ:
ಮುಖಪುಟ / ಸಾಹಿತ್ಯ ಸೊಗಡು












Click it and Unblock the Notifications