• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಲೇಖಕಿ ಡಾ.ನಿರುಪಮಾಗೆ ಲೇಖಕಿಯರ ಸಂಘದ ಅನುಪಮಾ ಪುರಸ್ಕಾರ

By Staff
|

ಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘ ಪ್ರತಿವರ್ಷ ನೀಡುತ್ತಿರುವ ಪ್ರತಿಷ್ಟಿತ ಅನುಪಮಾ ಪ್ರಶಸ್ತಿಗೆ ಈ ಬಾರಿ ಲೇಖಕಿ ಡಾ. ನಿರುಪಮಾ ಆಯ್ಕೆಯಾಗಿದ್ದಾರೆ.

ಸಾಹಿತ್ಯ ಕ್ಷೇತ್ರಕ್ಕೆ ಡಾ. ನಿರುಪಮಾ ಅವರು ಕಳೆದ ಹತ್ತು ವರ್ಷಗಳಲ್ಲಿ ನೀಡಿದ ಕೊಡುಗೆಯನ್ನು ಗಮನಿಸಿ ಹಾಗೂ ಧರ್ಮ ಶಾಸ್ತ್ರಗಳು-ಸ್ತ್ರೀ ಶೋಷಣೆ ಎಂಬ ಕೃತಿಯಲ್ಲಿ ಅವರು ನಡೆಸಿದ ತೌಲನಿಕ ಅಧ್ಯಯನಕ್ಕಾಗಿ ಅವರಿಗೆ ಈ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ.

ಪ್ರಶಸ್ತಿಯು 10 ಸಾವಿರ ರೂಪಾಯಿ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಮೇ 25ರಂದು ನಗರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ನಿರುಪಮಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸಂಘದ ದತ್ತಿ ನಿಧಿ ಬಹುಮಾನಗಳನ್ನೂ ಪ್ರಕಟಿಸಲಾಗಿದ್ದು, ಗೀತಾ ದೇಸಾಯಿ ದತ್ತಿನಿಧಿ ಬಹುಮಾನಕ್ಕೆ ತುಮಕೂರಿನ ಬಾ.ಹ.ರಮಾಕುಮಾರಿ ಅವರ ಕನಸಿನಾಳದ ಕಣ್ಣು ಪುಸ್ತಕವನ್ನು ಆಯ್ಕೆ ಮಾಡಲಾಗಿದೆ. ಪ್ರೇಮಾಭಟ್‌ ದತ್ತಿನಿಧಿ ಬಹುಮಾನಕ್ಕೆ ಸುಮತಿ ಕೆ.ಸಿ. ಭಟ್‌ ಅವರ ತ್ಯಕ್ತೆ ಎಂಬ ಕಥೆಯನ್ನು ಆರಿಸಲಾಗಿದೆ.

(ಇನ್ಫೋ ವಾರ್ತೆ)

ಮುಖಪುಟ / ಸಾಹಿತ್ಯ ಸೊಗಡು

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more