• search

ಕನ್ನಡ ಮಾಧ್ಯಮ ಶಿಕ್ಷಣ :ಬರಗೂರು -ಬಿಕೆಸಿ ನಡುವೆ ಭಿನ್ನಾಭಿಪ್ರಾಯ

By oneindia staff
Subscribe to Oneindia Kannada
For Quick Alerts
ALLOW NOTIFICATIONS
For Daily Alerts

    ಬೆಂಗಳೂರು: ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಮಾಧ್ಯಮ ಬೇಕೇ ಬೇಡವೇ...? ಶಿಕ್ಷಣ ಸಚಿವ ಪ್ರೊ. ಬಿ.ಕೆ. ಚಂದ್ರಶೇಖರ್‌ ಅವರ ಪ್ರಕಾರ, ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಮಾಧ್ಯಮ ಎಲ್ಲಿಯವರೆಗೆ ಮುಂದುವರೆಯಬೇಕು ಎಂಬ ಬಗ್ಗೆ ಇನ್ನಷ್ಟು ಚರ್ಚೆಯಾಗಬೇಕು.

    ಸಚಿವರು ಹೀಗೆ ಅಭಿಪ್ರಾಯಪಟ್ಟಿದ್ದು ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ. ಕಾರ್ಯಕ್ರಮದಲ್ಲಿ ಕನ್ನಡ ಅಭಿವದ್ಧಿ ಪ್ರಾಧಿಕಾರದ ಅಧ್ಯಕ್ಷ ಬರಗೂರು ರಾಮಚಂದ್ರಪ್ಪ ಅವರೂ ಮುಖ್ಯಅತಿಥಿಗಳಾಗಿದ್ದರು. ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಮಾಧ್ಯಮವನ್ನು ಕಡ್ಡಾಯ ಮಾಡಬೇಕು ಎಂದು ನಿರಂತರ ಸರಕಾರವನ್ನು ಒತ್ತಾಯಿಸುತ್ತಲೇ ಇರುವ ಬರಗೂರು ಅವರಿಗೆ ಸಚಿವರ ಮಾತು ಸರಿಬರಲಿಲ್ಲ.

    ಬಿಕೆಸಿ ಅವರು ತಂತ್ರಜ್ಞಾನ, ಪಠ್ಯ ಕ್ರಮ ಕಾಲ ಕಾಲಕ್ಕೆ ಬದಲಾಗುತ್ತಾ ಸಾಗಿದಂತೆ ನಿತ್ಯ ಜೀವನಕ್ಕೆ ಮಾತೃಭಾಷೆ ಕಡ್ಡಾಯವಾಗಬೇಕೇ ಅಥವಾ ಐಚ್ಛಿಕವಾಗಬೇಕೇ ಎಂಬ ವಿಚಾರದ ಬಗ್ಗೆ ಇನ್ನಷ್ಟು ಚರ್ಚೆ ನಡೆಯಬೇಕು ಎಂದು ಹೇಳಿದರು.

    ಆದರೆ, ಈ ವಿಷಯದ ಬಗ್ಗೆ ಚರ್ಚೆ ಅನಗತ್ಯವಾದುದು ಎಂಬುದು ಬರಗೂರು ಅಭಿಪ್ರಾಯ. ಪ್ರಾಥಮಿಕ ಶಿಕ್ಷಣದಲ್ಲಿ ಮಾತೃಭಾಷೆ ಕಡ್ಡಾಯವಾಗಬೇಕೇ ಎಂಬ ಬಗ್ಗೆ ಹಲವು ದಶಕಗಳ ಕಾಲ ಸುದೀರ್ಘ ಚರ್ಚೆ ನಡೆದಿದೆ. ಅಲ್ಲದೆ ರಾಜ್ಯ ಸರಕಾರ 1994ರಲ್ಲಿ ಹೊರಡಿಸಿದ ಆದೇಶವನ್ನು ಸುಪ್ರಿಂ ಕೋರ್ಟ್‌ ಎತ್ತಿ ಹಿಡಿದಿದೆ. ಇನ್ನು 10 ಪೀಳಿಗೆಗಳ ವರೆಗೆ ಚರ್ಚೆ ಮುಂದುವರೆಸಿದರೂ ಭಿನ್ನಾಭಿಪ್ರಾಯಗಳು ಕೇಳಿ ಬರುತ್ತಲೇ ಇರುತ್ತವೆ. ಅದು ಸಹಜ. ಆದರೆ ಮಾತೃಭಾಷೆಯಲ್ಲಿ ಶಿಕ್ಷಣ ನೀಡುವುದನ್ನು ನ್ಯಾಯಾಂಗವೇ ಎತ್ತಿ ಹಿಡಿದಿರುವಾಗ ಇನ್ನೂ ಚರ್ಚೆ ನಡೆಸುವ ಅಗತ್ಯ ಏನಿದೆ....? ಎಂದು ಬರಗೂರು ಅವರು ಬಿಕೆಸಿ ಅವರಿಗೆ ಮರುಪ್ರಶ್ನೆ ಹಾಕಿದರು.

    ಶಿಕ್ಷಣದಲ್ಲಿ ಸಮಾನತೆ ತರುವ ಉದ್ದೇಶದಿಂದಲಾದರೂ ಸರಕಾರ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡುವ ಪದ್ಧತಿ ಜಾರಿಗೆ ತರಬೇಕು ಎಂದು ಬರಗೂರು ಸರಕಾರಕ್ಕೆ ಸಲಹೆ ಮಾಡಿದರು.

    (ಇನ್ಫೋ ವಾರ್ತೆ)

    ಮುಖಪುಟ / ಸಾಹಿತ್ಯ ಸೊಗಡು

    ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

    Oneindia ಬ್ರೇಕಿಂಗ್ ನ್ಯೂಸ್,
    ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

    X
    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more