ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಉನ್ನತಶಿಕ್ಷಣದಲ್ಲಿ ಶೇ.5 ಮೀಸಲು

By Staff
|
Google Oneindia Kannada News

ಬೆಂಗಳೂರು : 10 ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳಿಗೆ ಎಲ್ಲ ವೃತ್ತಿಪರ ಪದವಿ, ಸ್ನಾತಕೋತ್ತರ ಕೋರ್ಸ್‌ಗಳಲ್ಲಿ ಶೇ.5ರಷ್ಟು ಸೀಟುಗಳ ಮೀಸಲಾತಿಯನ್ನು ವಿಸ್ತರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಶಿಫಾರಸ್ಸಿನಂತೆ ವೃತ್ತಿಪರ ಕೋರ್ಸ್‌ಗಳು ಹಾಗೂ ಸ್ನಾತಕೋತ್ತರ ಕೋರ್ಸುಗಳನ್ನು ಮೀಸಲು ವ್ಯಾಪ್ತಿಗೆ ತರಲು ಸರಕಾರ ಒಪ್ಪಿಕೊಂಡಿದೆ. 2002-03ನೇ ಶೈಕ್ಷಣಿಕ ವರ್ಷದಿಂದ ಈ ಆದೇಶ ಜಾರಿಗೆ ಬರಲಿದೆ.

2001-02ನೇ ಸಾಲಿನಿಂದ ಇಂಜಿನಿಯರಿಂಗ್‌, ವೈದ್ಯ ಹಾಗೂ ದಂತ ವಿಜ್ಞಾನ ಕೋರ್ಸಿಗೂ ಪ್ರವೇಶದಲ್ಲಿ ಶೇ.5ರಷ್ಟು ಸೀಟುಗಳನ್ನು ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳಿಗೆ ಮೀಸಲು ಇಡಲಾಗುತ್ತಿದೆ. ಇದೇ ರೀತಿ ಎಲ್ಲ ವೃತ್ತಿಪರ ಹಾಗೂ ಉನ್ನತ ಶಿಕ್ಷಣ ಕೋರ್ಸುಗಳಿಗೂ ಒಳ ಮೀಸಲು ವಿಸ್ತರಿಸುವಂತೆ ಪ್ರಾಧಿಕಾರ ಶಿಫಾರಸ್ಸು ಮಾಡಿತ್ತು.

ಪ್ರಾಧಿಕಾರದ ಶಿಫಾರಸ್ಸನ್ನು ಸರಕಾರ ಒಪ್ಪಿಕೊಂಡು, ಆದೇಶ ಹೊರಡಿಸಿರುವ ವಿಷಯವನ್ನು ಸೋಮವಾರ ಪ್ರಾಧಿಕಾರದ ಅಧ್ಯಕ್ಷ ಬರಗೂರು ರಾಮಚಂದ್ರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

(ಇನ್ಫೋ ವಾರ್ತೆ)

ಮುಖಪುಟ / ಸಾಹಿತ್ಯ ಸೊಗಡು
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X