ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಾಮಫಲಕಗಳಲ್ಲಿ ಕಡ್ಡಾಯ ಕನ್ನಡ : ಮತ್ತೆ ಡಿಂಡಿಮ ಬಾರಿಸಿದ ಸರ್ಕಾರ

By Staff
|
Google Oneindia Kannada News

ಬೆಂಗಳೂರು :ಅಂಗಡಿ ಮತ್ತಿತರ ವಾಣಿಜ್ಯ ಸಂಸ್ಥೆಗಳ ನಾಮಫಲಕಗಳಲ್ಲಿ ಕನ್ನಡ ಬಳಸುವುದನ್ನು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಲಹೆ ಮೇರೆಗೆ ರಾಜ್ಯ ಸರ್ಕಾರ ಈ ಸುತ್ತೋಲೆ ಹೊರಡಿಸಿದ್ದು , ನಾಮಫಲಕಗಳಲ್ಲಿ ಕನ್ನಡ ಬಳಸದಿದ್ದರೆ ಅಂಥ ಅಂಗಡಿಗಳ ಪರವಾನಗಿ ರದ್ದುಪಡಿಸುವುದಾಗಿ ಹೇಳಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬರಗೂರು ರಾಮಚಂದ್ರಪ್ಪ ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದ್ದಾರೆ.

ರಾಜ್ಯದ ಮಹಾನಗರ ಪಾಲಿಕೆಗಳ ವ್ಯಾಪ್ತಿಗೆ ಒಳಪಡುವಂತೆ ಈ ಸುತ್ತೋಲೆ ಹೊರಡಿಸಲಾಗಿದೆ. ಇದರಿಂದಾಗಿ ರಾಜ್ಯದ ಮಹಾನಗರ ಪಾಲಿಕೆಗಳು, ಪುರಸಭೆಗಳು ಹಾಗೂ ನಗರಸಭೆಗಳು ತಮ್ಮ ವ್ಯಾಪ್ತಿಯ ವಾಣಿಜ್ಯ ಸಂಸ್ಥೆಗಳು ಕನ್ನಡ ನಾಮಫಲಕ ಹೊಂದಿರದಿದ್ದಲ್ಲಿ - ಅಂಥ ಅಂಗಡಿಗಳ ಪರವಾನಗಿ ರದ್ದು ಮಾಡಬಹುದಾಗಿದೆ. ಎಲ್ಲ ಸ್ಥಳೀಯ ಸಂಸ್ಥೆಗಳಿಗೂ ಕನ್ನಡೀಕರಣಕ್ಕಾಗಿ ಕ್ರಮ ಕೈಕೊಳ್ಳಲು ಸೂಚಿಸಲಾಗಿದೆ. ನಾಮ ಫಲಕ ಸಂಪೂರ್ಣವಾಗಿ ಕನ್ನಡದಲ್ಲಿ ಇರದಿದ್ದರೂ, ಕೆಲವಾದರೂ ಕನ್ನಡ ಪದಗಳು ಇರಲೇಬೇಕು ಎಂದು ಬರಗೂರು ತಿಳಿಸಿದರು.

ಈವರೆಗೂ ನಾಮಕರಣ ಆಗಿಲ್ಲದ ರಸ್ತೆ , ವೃತ್ತ , ಉದ್ಯಾನಗಳಿಗೆ ಕನ್ನಡ ಕವಿಗಳು, ಚಿಂತಕರು ಹಾಗೂ ಸ್ಥಳೀಯ ಗಣ್ಯರ ಹೆಸರಿಡಲು ತಿಳಿಸಲಾಗಿದೆ. ಉದ್ಯಾನಗಳಲ್ಲಿ ಕನ್ನಡ ಸೂಕ್ತಿ ಫಲಕಗಳನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಹಾಕಲು ಸುತ್ತೋಲೆಯಲ್ಲಿ ತಿಳಿಸಲಾಗಿದೆ ಎಂದು ಬರಗೂರು ಹೇಳಿದರು.
(ಇನ್ಫೋ ವಾರ್ತೆ)

ಮುಖಪುಟ / ಸಾಹಿತ್ಯ ಸೊಗಡು
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X