ಕಂಪ್ಯೂಟರ್‌ನಲ್ಲಿ ಕನ್ನಡ ಅಳವಡಿಕೆ 6 ತಿಂಗಳಲ್ಲಿ ಪೂರ್ಣ- ಬರಗೂರು

ಕಾರವಾರ: ಕನ್ನಡ ಭಾಷೆಯನ್ನು ಕಂಪ್ಯೂಟರ್‌ನಲ್ಲಿ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದ್ದು , 6 ತಿಂಗಳಲ್ಲಿ ಈ ಪ್ರಯತ್ನ ಪೂರ್ಣಗೊಳ್ಳುವುದೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ.

ಕಾರವಾರ ತಾಲ್ಲೂಕಿನ ಬಾಡದ ಶಿವಾಜಿ ಕಲಾ ಮತ್ತು ವಾಣಿಜ್ಯ ಮಹಾ ವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಭಾಷೆ ಮತ್ತು ಕನ್ನಡಪರ ಕಾಳಜಿ ಎನ್ನುವ ವಿಷಯದ ಕುರಿತು ಮಾತನಾಡಿದ ಬರಗೂರು ರಾಮಚಂದ್ರಪ್ಪ ಕನ್ನಡ ಕಲಿಯುವವರು ಕೀಳರಿಮೆ ತೊರೆಯಬೇಕು. ಕನ್ನಡ ವಾತಾವರಣವನ್ನು ಸೃಷ್ಟಿಸಲು ಪ್ರಯತ್ನಿಸಬೇಕು ಎಂದು ಅಭಿಪ್ರಾಯ ಪಟ್ಟರು.

ಇಂಗ್ಲೀಷ್‌ ಮಾಧ್ಯಮ ಹಾಗೂ ಇಂಗ್ಲೀಷ್‌ ಪರಿಣತಿ ಬೇರೆ ಬೇರೆಯಾಗಿದ್ದು ಕನ್ನಡಿಗರು ಭಾಷೆಯಾಗಿ ಇಂಗ್ಲೀಷನ್ನು ಕಲಿಯಬೇಕಾಗಿದೆ. ಕನ್ನಡವನ್ನು ಆದರ್ಶ ಹಾಗೂ ವಿವೇಕದ ವಿಷಯವಾಗಿ ತೆಗೆದುಕೊಳ್ಳಬೇಕಿದೆ ಎಂದ ಬರಗೂರು- ಶಿಕ್ಷಣ, ಭಾಷೆ, ಸಂಸ್ಕೃತಿ ವಿಷಯಗಳಲ್ಲೂ ವ್ಯಾಪಾರಿ ಮನೋಭಾವನೆ ಕಾಣುತ್ತಿರುವ ಬಗೆಗೆ ವಿಷಾದಿಸಿದರು. ಶಿಕ್ಷಣ ತಜ್ಞರ ಜಾಗಗಳನ್ನು ಶಿಕ್ಷಣೋದ್ಯಮಿಗಳು ಆಕ್ರಮಿಸಿಕೊಂಡಿದ್ದಾರೆ ಎಂದು ಅವರು ಟೀಕಿಸಿದರು.

ಉತ್ತರ ಕನ್ನಡ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ನಾಯ್ಕ, ಉಪನ್ಯಾಸಕಿ ವಿಜಯಲಕ್ಷ್ಮಿ ನಾಯ್ಕ, ಶಿವಾಜಿ ವಿದ್ಯಾಲಯದ ಪ್ರಾಂಶುಪಾಲ ಎಸ್‌.ಆರ್‌.ನಾಯ್ಕ ಕಾರ್ಯಕ್ರಮದಲ್ಲಿ ಹಾಜರಿದ್ದರು.

(ಇನ್ಫೋ ವಾರ್ತೆ)

ಬರಗೂರು ಬರವಣಿಗೆ ಹಾಗೂ ಬದುಕು
ಮುಖಪುಟ / ಸಾಹಿತ್ಯ ಸೊಗಡು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+