ಅಮೆರಿಕನ್ ಸಂಸ್ಥೆ ನಿರ್ದೇಶಕರಾಗಿ ಕನ್ನಡಿಗ ಡಾ. ಪುರುಷೋತ್ತಮ ಬಿಳಿಮಲೆ
ನವದೆಹಲಿ : ಭಾಷಾ ಬೋಧನೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ದೆಹಲಿಯ ಪ್ರತಿಷ್ಠಿತ ಅಮೆರಿಕನ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಸ್ಟಡೀಸ್‌ನ ನಿರ್ದೇಶಕರಾಗಿ ಪ್ರಸಿದ್ಧ ವಿದ್ವಾಂಸ ಹಾಗೂ ಕನ್ನಡಿಗ ಡಾ. ಪುರುಷೋತ್ತಮ ಬಿಳಿಮಲೆ ಅಧಿಕಾರ ಸ್ವೀಕರಿಸಿದ್ದಾರೆ.
ಈ ಮುನ್ನ ಮಂಗಳೂರು ಹಾಗೂ ಹಂಪಿಯ ಕನ್ನಡ ವಿಶ್ವ ವಿದ್ಯಾಲಯದಲ್ಲಿ ಪುರುಷೋತ್ತಮ ಬಿಳಿಮಲೆ ಸೇವೆ ಸಲ್ಲಿಸಿದ್ದಾರೆ. ಜಾನಪದ ಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಖ್ಯಾತಿ ಗಳಿಸಿರುವ ಬಿಳಿಮಲೆ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪಂಜದವರು.
ಭಾಷಾ ಬೋಧನೆ, ಪ್ರಕಟಣೆ ಹಾಗೂ ಶಿಷ್ಯ ವೇತನ ಮತ್ತಿತರ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಅಮೆರಿಕನ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಸ್ಟಡೀಸ್ ಅನ್ನು ಅಮೆರಿಕಾದ 80 ಕ್ಕೂ ಹೆಚ್ಚು ವಿಶ್ವ ವಿದ್ಯಾಲಯಗಳು ಒಟ್ಟುಗೂಡಿ ನಡೆಸುತ್ತಿವೆ.
(ಇನ್ಫೋ ವಾರ್ತೆ)
ಮುಖಪುಟ / ಸಾಹಿತ್ಯ ಸೊಗಡು











Click it and Unblock the Notifications