ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಲ್‌.ಎಸ್‌. ಶೇಷಗಿರಿರಾವ್‌ಗೆ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ

By Staff
|
Google Oneindia Kannada News

ನವದೆಹಲಿ: ಹಿರಿಯ ವಿಮರ್ಶಕ, ಲೇಖಕ ಎಲ್‌.ಎಸ್‌. ಶೇಷಗಿರಿರಾವ್‌ ಅವರ ‘ಇಂಗ್ಲಿಷ್‌ ಸಾಹಿತ್ಯ ಚರಿತ್ರೆ’ ಕೃತಿಗೆ ಈ ಸಾಲಿನ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಲಭಿಸಿದೆ. ಮೂವರು ಸದಸ್ಯರ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ 22 ಮಂದಿ ಲೇಖಕರಿಗೆ ಕೇಂದ್ರ ಸಾಹಿತ್ಯ ಅಕಾಡಮಿ ಶನಿವಾರ ಪ್ರಶಸ್ತಿ ಪ್ರಕಟಿಸಿದೆ.

ಈ ಪೈಕಿ ಆರನೇ ಶತಮಾನದಿಂದ 20ನೇ ಶತಮಾನದ ಮಧ್ಯ ಭಾಗದವರೆಗೂ ಇಂಗ್ಲಿಷ್‌ ಸಾಹಿತ್ಯ ಹರಿದುಬಂದ ದಾರಿಯನ್ನು ಅತ್ಯಂತ ಸೂಕ್ಷ್ಮವಾಗಿ ಅವಲೋಕಿಸಿ, ಎಲ್‌.ಎಸ್‌.ಎಸ್‌. ರಚಿಸಿರುವ ಈ ಕೃತಿಗೆ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿಯು 25 ಸಾವಿರ ರುಪಾಯಿ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

2002ರ ಫೆಬ್ರವರಿಯಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರೊ. ಎಲ್‌.ಎಸ್‌. ಶೇಷಗಿರಿರಾಯರಿಗೆ ಈ ಪ್ರಶಸ್ತಿಯನ್ನು ನೀಡಲಾಗುವುದು.

ಬೆಂಗಳೂರು ವರದಿ: ಶೇಕ್‌ಸ್ಪಿಯರ್‌ ನಾಟಕವೂ ಸೇರಿದಂತೆ 20ನೇ ಶತಮಾನದ ಇಂಗ್ಲಿಷ್‌ ಸಾಹಿತ್ಯದ ಬಗ್ಗೆ ಬರೆಯುವಾಗ ಖುಷಿಯಾಯಿತು ಎಂದು ಹೇಳಿರುವ ಪ್ರೊ. ಎಲ್‌.ಎಸ್‌.ಎಸ್‌. ಕೇಂದ್ರ ಸಾಹಿತ್ಯ ಅಕಾಡಮಿ ಗೌರವ ಬಂದಿರುವ ಬಗ್ಗೆ ಅತೀವ ಹರ್ಷ ವ್ಯಕ್ತಪಡಿಸಿದ್ದಾರೆ.

(ಪಿ.ಟಿ.ಐ/ಇನ್‌ಫೋ ವಾರ್ತೆ)

ಮುಖಪುಟ / ಸಾಹಿತ್ಯ ಸೊಗಡು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X