• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಶಿವರಾಮ ಕಾರಂತರು ಸತ್ಯ ಸಾಕ್ಷಾತ್ಕಾರದ ಪ್ರವಾದಿ: ವೀರಪ್ಪಮೊಯಿಲಿ

By Staff
|

ಬೆಂಗಳೂರು : ಜೀವನ ಎಲ್ಲಕ್ಕಿಂತ ದೊಡ್ಡದು ಎಂದು ನಂಬಿದ ಸಾಹಿತಿಗಳ ಪೈಕಿ ಅಗ್ರಗಣ್ಯರಾಗಿ, ಜಗತ್ತಿನ ಜ್ಞಾನಭಂಡಾರವನ್ನೇ ತೆರೆದಿಟ್ಟು, ಮಕ್ಕಳ ಸಾಹಿತ್ಯದಿಂದ ಹಿಡಿದು ವಿಶ್ವಕೋಶದವರೆಗೆ ನಾನಾ ಪ್ರಕಾರಗಳಲ್ಲಿ ಸಾಹಿತ್ಯ ರಚಿಸಿದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕೋಟಾ ಶಿವರಾಮ ಕಾರಂತರ ಜನ್ಮ ಶತಮಾನೋತ್ಸವ ಸೋಮವಾರ ಬೆಂಗಳೂರಿನಲ್ಲಿ ಜರುಗಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶತಮಾನೋತ್ಸವದ ಅಂಗವಾಗಿ ಪ್ರಕಟಿಸಿರುವ ಡಾ. ಕೋಟಾ ಶಿವರಾಮ ಕಾರಂತರ ಸಮಗ್ರ ಸಾಹಿತ್ಯ ಶ್ರೇಣಿಯ ಒಂಬತ್ತು ಸಂಪುಟಗಳನ್ನು ಕನ್ನಡ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಯಿತು.

ಕಾರಂತರ ಜನ್ಮಶತಮಾನೋತ್ಸವದ ಸಂದರ್ಭದಲ್ಲಿ ಶಿವರಾಮ ಕಾರಂತರ ಪ್ರತಿಷ್ಠಾನದ ಉದ್ಘಾಟನೆಯೂ ನೆರವೇರಿತು. ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವೆ ರಾಣಿ ಸತೀಶ್‌ ಪ್ರತಿಷ್ಠಾನವನ್ನು ಉದ್ಘಾಟಿಸಿದರೆ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು, ಸಾಹಿತ್ಯ ಶ್ರೇಣಿಯ 9 ಸಂಪುಟಗಳನ್ನು ಬಿಡುಗಡೆ ಮಾಡಿದರು.

ಕೃತಿ ಶ್ರೇಣಿಯ 9 ಸಂಪುಟ ಬಿಡುಗಡೆ ಮಾಡಿ ಮಾತನಾಡಿದ ಸ್ವತಃ ಸಾಹಿತಿಗಳೂ ಆದ ವೀರಪ್ಪಮೊಯ್ಲಿ ಅವರು, ಶಿವರಾಮಕಾರಂತರು ಸತ್ಯ ಸಾಕ್ಷಾತ್ಕಾರದ ಪ್ರವಾದಿ. ಮೂಢನಂಬಿಕೆಗಳ ವಿರುದ್ಧ ಧೈರ್ಯವಾಗಿ ದನಿಎತ್ತಿ ಹೋರಾಡಿದ ಧೀಮಂತ. ಸಾಹಿತ್ಯ ಕ್ಷೇತ್ರದಲ್ಲಿ ಹಿಮಾಲಯದೆತ್ತರ ಬೆಳೆದ ಕಾರಂತರದು ಅಪೂರ್ವ ವ್ಯಕ್ತಿತ್ವ ಎಂದು ಬಣ್ಣಿಸಿದರು.

ಸರಕಾರ, ವಿಶ್ವವಿದ್ಯಾಲಯ, ಸಾಹಿತ್ಯ, ಸಾಂಸ್ಕೃತಿಕ ಅಕಾಡಮಿಗಳು ಕಾರಂತರ ಸಾಹಿತ್ಯದ ಸಮಗ್ರ ಅಧ್ಯಯನಕ್ಕೆ ಅವಕಾಶ ಕಲ್ಪಿಸಬೇಕು ಎಂದ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಇಲಾಖೆಯ ಕಾರ್ಯದರ್ಶಿ ಸಿ.ಎಸ್‌. ಕೇದಾರ್‌, ನಿರ್ದೇಶಕ ಸಿ. ಸೋಮಶೇಖರ್‌, ಹಿರಿಯ ಸಾಹಿತಿಗಳಾದ ಪ್ರೊ.ಜಿ.ಎಸ್‌. ಸಿದ್ಧಲಿಂಗಯ್ಯ, ಪ್ರೊ. ಜಿ. ವೆಂಕಟಸುಬ್ಬಯ್ಯ, ಹರಿಕೃಷ್ಣ ಪುನರೂರು ಮೊದಲಾದವರು ಪಾಲ್ಗೊಂಡಿದ್ದರು.

(ಇನ್‌ಫೋವಾರ್ತೆ)

ಮುಖಪುಟ / ಸಾಹಿತ್ಯ ಸೊಗಡು

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more