ಜನವರಿ 6ರಿಂದ ಗುಲ್ಬರ್ಗಾ ಜಿಲ್ಲಾ ಆರನೇ ಸಾಹಿತ್ಯ ಸಮ್ಮೇಳನ
ಗುಲ್ಬರ್ಗಾ : ಶನಿವಾರ (ಜ.6) ದಿಂದ ಶಹಾಬಾದ್‌ನಲ್ಲಿ ಗುಲ್ಬರ್ಗಾ ಜಿಲ್ಲಾ ಆರನೇ ಸಾಹಿತ್ಯ ಸಮ್ಮೇಳನ ಜರುಗಲಿದೆ. ಈ ವಿಷಯವನ್ನು ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಸಚಿವ ಬಾಬು ರಾವ್ ಚವಾಣ್ ಬುಧವಾರ ಇಲ್ಲಿ ತಿಳಿಸಿದರು.
ಸಾಹಿತ್ಯ ಕ್ಷೇತ್ರದ ಸುಮಾರು 500ಕ್ಕೂ ಹೆಚ್ಚು ಗಣ್ಯರು ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರೂ ಆಗಿರುವ ಚವಾಣ್ ತಿಳಿಸಿದರು. ಎರಡು ದಿನಗಳ ಕಾಲ ನಡೆಯುವ ಈ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಸಾಹಿತ್ಯ ಕುರಿತ ಐದು ಗೋಷ್ಠಿಗಳು ನಡೆಯಲಿವೆ. ಡಾ. ಚನ್ನಣ್ಣ ವಾಲೀಕರ್ ಅವರು ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದೂ ಅವರು ಹೇಳಿದರು.
ರಾಜ್ಯ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಲೋಕೋಪಯೋಗಿ ಸಚಿವ ಧರಮ್ ಸಿಂಗ್ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆ ಎಂದೂ ಅವರು ವಿವರ ನೀಡಿದರು. (ಯು.ಎನ್.ಐ)
ಮುಖಪುಟ / ಸಾಹಿತ್ಯ ಸೊಗಡು











Click it and Unblock the Notifications