ಕರ್ನಾಟಕ ಸಾಹಿತ್ಯಅಕಾಡೆಮಿ ಪ್ರಶಸ್ತಿಗಳಿಗೆ ಕೃತಿ ಆಹ್ವಾನ

2002 ನೇ ಇಸವಿಯ ಪುಸ್ತಕ ಪ್ರಶಸ್ತಿಗಳಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ವಿವಿಧ ಪ್ರಕಾರದ ಕನ್ನಡ ಪುಸ್ತಕಗಳನ್ನು ಆಹ್ವಾನಿಸಿದೆ.

ಮರು ಮುದ್ರಣದ ಪುಸ್ತಕಗಳು, ಜಾನಪದ ಕೃತಿಗಳು, ಪದವಿಗಾಗಿ ಸಿದ್ಧಪಡಿಸಿದ ಪುಸ್ತಕಗಳು ಹಾಗೂ ಪಠ್ಯ ಪುಸ್ತಕಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ .

ಪ್ರಶಸ್ತಿಗೆ ಪುಸ್ತಕಗಳನ್ನು ಕಳುಹಿಸಬಯಸುವವರು ಕೆಳಗಿನ ಅಂಶಗಳನ್ನು ಗಮನಿಸಿ :

  • ಕತೆ, ಕವಿತೆ, ಕಾದಂಬರಿ, ವಿಮರ್ಶೆ, ಪ್ರಬಂಧ, ಅನುವಾದ ಸೇರಿದಂತೆ ಸಾಹಿತ್ಯದ ವಿವಿಧ ಪ್ರಕಾರಗಳಿಗೆ ಪ್ರಶಸ್ತಿ ನೀಡಲಾಗುವುದು.
  • ಪ್ರಥಮ ಆವೃತ್ತಿಯಾಗಿ ಪ್ರಕಟವಾದ ಪುಸ್ತಕಗಳನ್ನು ಮಾತ್ರ ಸ್ಪರ್ಧೆಗೆ ಕಳುಹಿಸಬೇಕು.
  • ಬಹುಮಾನ ಪಡೆದ ಪ್ರತಿ ಕೃತಿಗೆ 5 ಸಾವಿರ ರುಪಾಯಿ ನಗದು ಬಹುಮಾನ ನೀಡಿ ಗೌರವಿಸಲಾಗುವುದು.
  • ಆಸಕ್ತರು ತಮ್ಮ ಕೃತಿಯ 1 ಪ್ರತಿ ಕಳುಹಿಸಬೇಕು.
  • ಪುಸ್ತಕ ಕಳುಹಿಸಲು ಕೊನೆಯ ದಿನಾಂಕ ಏಪ್ರಿಲ್‌ 30, 2003.
  • ಪುಸ್ತಕಗಳನ್ನು ಕೊರಿಯರ್‌ ಅಥವಾ ನೋಂದಾಯಿತ ಅಂಚೆ ಮೂಲಕ ಕಳಿಸಬೇಕು.
  • ಲೇಖಕರ ಮೊದಲ ಕೃತಿಗೆ (1 ಪುಸ್ತಕಕ್ಕೆ) ವಿಶೇಷ ಬಹುಮಾನ ಉಂಟು.
ಪುಸ್ತಕಗಳುನ್ನು ಕಳುಹಿಸಬೇಕಾದ/ಹೆಚ್ಚಿನ ವಿವರಗಳಿಗೆ ಸಂಪರ್ಕಿಸಬೇಕಾದ ವಿಳಾಸ : ರಿಜಿಸ್ಟ್ರಾರ್‌, ಕರ್ನಾಟಕ ಸಾಹಿತ್ಯ ಅಕಾಡೆಮಿ, ಎರಡನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ , ಬೆಂಗಳೂರು- 560 002.

(ಇನ್ಫೋ ವಾರ್ತೆ)

ಮುಖಪುಟ / ಸಾಹಿತ್ಯ ಸೊಗಡು


Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+