ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಡಾ. ಕೆವಿ ನಾರಾಯಣರಿಗೆ ಜಿಎಸ್ಸೆಸ್ ಪುರಸ್ಕಾರ
ಬೆಂಗಳೂರು: ಕನ್ನಡ ಸಾಹಿತ್ಯ ವಲಯದ ಶ್ರೇಷ್ಠ ವಿಮರ್ಶಕರಲ್ಲಿ ಒಬ್ಬರಾದ ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಡಾ. ಕೆ. ವಿ. ನಾರಾಯಣ ಅವರಿಗೆ 2001 ನೇ ವರ್ಷದ ಡಾ. ಜಿಎಸ್ಸೆಸ್ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.
ಜಿಎಸ್ಸೆಸ್ ಪ್ರಶಸ್ತಿಯು 10 ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಡಾ. ಜಿಎಸ್ಸೆಸ್ ವಿಶ್ವಸ್ತ ಮಂಡಳಿಯು ಈ ಪ್ರಶಸ್ತಿಗೆ ಕನ್ನಡ ವಿಶ್ವ ವಿದ್ಯಾಲಯದಲ್ಲಿ ಕುಲ ಸಚಿವರಾಗಿರುವ ಕೆ. ವಿ. ನಾರಾಯಣ ಅವರ ಹೆಸರನ್ನು ಆಯ್ಕೆ ಮಾಡಿದೆ .
ಫೆ. 7ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಚೇರಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಮಂಡಳಿಯ ಅಧ್ಯಕ್ಷ ಪ್ರೊ. ಕೆ. ಜಿ. ನಾಗರಾಜಪ್ಪ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
Comments
Story first published: Friday, January 10, 2003, 5:30 [IST]