ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದ್ವಿತೀಯ ಭಾಷೆಯಾಗಿ 3ನೇ ತರಗತಿಯಿಂದಲೇ ಇಂಗ್ಲಿಷ್‌

By Staff
|
Google Oneindia Kannada News

ಬೆಂಗಳೂರು : ಮೂರನೇ ತರಗತಿಯಿಂದಲೇ ಇಂಗ್ಲಿಷ್‌ ಭಾಷೆಯನ್ನು ದ್ವಿತೀಯ ಭಾಷೆಯಾಗಿ ಕಲಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ.ಪಿ.ಬಳಿಗಾರ್‌ ತಿಳಿಸಿದ್ದಾರೆ.

ಬರುವ ಜೂನ್‌ ತಿಂಗಳಿನಿಂದಲೇ ಇಂಗ್ಲಿಷ್‌ ಭಾಷೆಯನ್ನು ಮೂರನೇ ತರಗತಿಯಿಂದ ದ್ವಿತೀಯ ಭಾಷೆಯಾಗಿ ಕಲಿಸಲು ಅವಕಾಶ ಕಲ್ಪಿಸಲಾಗುವುದು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬರಗೂರು ರಾಮಚಂದ್ರಪ್ಪ ಅವರು ಸರ್ಕಾರಕ್ಕೆ ಸಲ್ಲಿಸಿದ ವರದಿಯ ಅನ್ವಯ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಳಿಗಾರ್‌ ಹೇಳಿದರು.

ಏಳನೇ ತರಗತಿಯವರೆಗೆ ಕನ್ನಡ ಭಾಷೆಯನ್ನು ಕಡ್ಡಾಯ ಮಾಡಬೇಕು ಹಾಗೂ ಇಂಗ್ಲಿಷನ್ನು ಮೂರನೇ ತರಗತಿಯಿಂದ ದ್ವಿತೀಯ ಭಾಷೆಯಾಗಿ ಕಲಿಸಬೇಕು ಎಂದು ಬರಗೂರು ರಾಮಚಂದ್ರಪ್ಪ ತಮ್ಮ ವರದಿಯಲ್ಲಿ ತಿಳಿಸಿದ್ದರು.

ಬರಗೂರು ಅವರ ವರದಿಯನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಲು ಸಾಧ್ಯವಾಗುತ್ತಿಲ್ಲ . ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು 1994ರಲ್ಲಿ ಹೈಕೋರ್ಟಿನ ಮೊರೆ ಹೋಗಿ ಯಥಾಸ್ಥಿತಿಯನ್ನು ಮುಂದುವರಿಸುವಂತೆ ತಡೆಯಾಜ್ಞೆ ತಂದಿವೆ. ಈ ತಡೆಯಾಜ್ಞೆಯನ್ನು ತೆರವುಗೊಳಿಸಲು ಸರ್ಕಾರ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಬಳಿಗಾರ್‌ ಹೇಳಿದರು.

(ಇನ್ಫೋ ವಾರ್ತೆ)

ಮುಖಪುಟ / ಸಾಹಿತ್ಯ ಸೊಗಡು


ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X