ನಿತ್ಯೋತ್ಸವ
- ಕೆ.ಎಸ್.ನಿಸಾರ್ ಅಹಮದ್
ಸಹ್ಯಾದ್ರಿಯ ಲೋಹದದಿರ ಉತ್ತುಂಗದ ನಿಲುಕಿನಲ್ಲಿ ,
ನಿತ್ಯ ಹರಿದ್ವರ್ಣ ವನದ ತೇಗ ಗಂಧ ತರುಗಳಲ್ಲಿ -
, ತಾಯಿ, ನಿನಗೆ...
ಇತಿಹಾಸದ ಹಿಮದಲ್ಲಿನ ಸಿಂಹಾಸನ ಮಾಲೆಯಲ್ಲಿ,
ಗತ ಸಾಹಸ ಸಾರುತಿರುವ ಶಾಸನಗಳ ಸಾಲಿನಲ್ಲಿ,
ಓಲೆಗರಿಯ ಸಿರಿಗಳಲ್ಲಿ, ದೇಗುಲಗಳ ಭಿತ್ತಿಗಳಲಿ -
, ತಾಯಿ, ನಿನಗೆ...
ಹಲವೆನ್ನದ ಹಿರಿಮೆಯೆ, ಕುಲವೆನ್ನದ ಗರಿಮೆಯೆ,
ಸದ್ವಿಕಾಸಶೀಲ ನುಡಿಯ ಲೋಕಾವೃತ ಸೀಮೆಯೆ,
ಈ ವತ್ಸರ ನಿರ್ಮತ್ಸರ ಮನದುದಾರ ಮಹಿಮೆಯೆ -
, ತಾಯಿ, ನಿನಗೆ...











Click it and Unblock the Notifications