ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಮೊಗ್ಗ : ಧ್ವಜಾರೋಹಣ ಸಂದರ್ಭದಿ ಕಪ್ಪು ಬಾವುಟ

By Staff
|
Google Oneindia Kannada News


Entrance gate of 73rd All Indian Kannada Sahitya Sammelana ಶಿವಮೊಗ್ಗ : 73ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಗರದಲ್ಲಿ ಬುಧವಾರ ಆರಂಭಗೊಂಡಿದೆ. ಇಂದಿನಿಂದ ನಾಲ್ಕು ದಿನಗಳ ಕಾಲ ಸಾಹಿತ್ಯಚಟುವಟಿಕೆಗಳು ಗರಿಗೆದರಲಿವೆ.

ನೆಹರೂ ಕ್ರೀಡಾಗಣದಲ್ಲಿ ಉಪಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜವನ್ನು ಹಾರಿಸಲಾಯಿತು.

ಸಮ್ಮೇಳನಾಧ್ಯಕ್ಷ ಕೆ.ಎಸ್‌.ನಿಸಾರ್‌ ಅಹಮದ್‌, ಸಚಿವ ಈಶ್ವರಪ್ಪ, ಶಿವಮೊಗ್ಗ ಜಿಲ್ಲಾಧಿಕಾರಿ ಅನಿಲ್‌ ಕುಮಾರ್‌, ಕ.ಸಾ.ಪ. ರಾಜ್ಯಾಧ್ಯಕ್ಷ ಚಂದ್ರಶೇಖರ ಪಾಟೀಲ ಮತ್ತಿತರರು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಕಪ್ಪು ಬಾವುಟ : ಸಮ್ಮೇಳನಕ್ಕೆ ಮುಖ್ಯಮಂತ್ರಿಗಳ ಆಹ್ವಾನಿಸದ ಬಗೆಗೆ ಜೆಡಿಎಸ್‌ ಕಾರ್ಯಕರ್ತರು ಅಸಮಾಧಾನಗೊಂಡಿದ್ದು, ಧ್ವಜಾರೋಹಣ ಸಂದರ್ಭದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿದರು. ಚಂಪಾ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ರಾಜ್ಯದ ಮುಖ್ಯಮಂತ್ರಿಗೆ ಅಗೌರವ ತೋರಿಸುವುದು ಸಲ್ಲದು ಎಂದು ಕಾರ್ಯಕರ್ತರು ತಿಳಿಸಿದ್ದಾರೆ.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X