ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನ.23ರಂದು ಹೊನ್ನಬಿತ್ತೇವು ಹೊಲಕೆಲ್ಲ ಕೃತಿ ಬಿಡುಗಡೆ

By Staff
|
Google Oneindia Kannada News

Manu Baligar
ಬೆಂಗಳೂರು, ನ. 20 : 1967ರಲ್ಲಿ ತರೀಕೆರೆಯಲ್ಲಿ ನಡೆದ ಅಖಿಲ ಭಾರತ ಪ್ರಥಮ ಜಾನಪದ ಸಾಹಿತ್ಯ ಸಮ್ಮೇಳನ ಸ್ಮರಣ ಗ್ರಂಥ 'ಹೊನ್ನಬಿತ್ತೇವು ಹೊಲಕೆಲ್ಲ' ಮರು ಮುದ್ರಿತ ಕೃತಿ ಬಿಡುಗಡೆ ಸಮಾರಂಭ ಹಾಗೂ ಜನಪದ ಕಲಾಪ್ರದರ್ಶನವನ್ನು ನವೆಂಬರ್ 23ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಹಿಂಭಾಗದ ಸಂಸ ಬಯಲುರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಬಿ.ಆರ್. ಜಯರಾಮರಾಜೇ ಅರಸು ಅವರು ಕೃತಿ ಬಿಡುಗಡೆ ಮಾಡಲಿದ್ದಾರೆ. ಕರ್ನಾಟಕ ಜಾನಪದ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ ಕಾಳೇಗೌಡ ನಾಗವಾರ ಅವರು ಕೃತಿ ಕುರಿತು ಮಾತನಾಡಲಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರ ಮನು ಬಳಿಗಾರ್ ಅವರು ಭಾಗವಹಿಸಲಿದ್ದಾರೆ. ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾದ ಗೊ.ರು. ಚನ್ನಬಸಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X