ಹೊಸ ಕತೆಗಾರರಿಗೆ ಛಂದ ಪುಸ್ತಕ ಆಹ್ವಾನ

ಇದುವರೆಗೂ ಒಂದೂ ಕಥಾಸಂಕಲನ ಹೊರತಂದಿರದ ಲೇಖಕರಿಗೆ ಮಾತ್ರ ಅವಕಾಶ. ಸಾಹಿತ್ಯದ ಇತರ ಪ್ರಕಾರಗಳಲ್ಲಿ ಒಂದೆರಡು ಪುಸ್ತಕಗಳು ಪ್ರಕಟವಾಗಿದ್ದರೆ ಪರವಾಯಿಲ್ಲ. ತಮಗೆ ಉತ್ತಮವೆನಿಸಿದ ಸುಮಾರು 10 ಪ್ರಕಟಿತ/ಅಪ್ರಕಟಿತ ಸ್ವಂತ ಕತೆಗಳನ್ನು ಡಿಟಿಪಿ ಮಾಡಿಸಿ ಇಲ್ಲವೇ ಸ್ಫುಟವಾದ ಕೈಬರಹದಲ್ಲಿ ಬರೆದು ಕಳುಹಿಸಬೇಕು. ಹಸ್ತಪ್ರತಿ ಹಿಂತಿರುಗಿಸಲಾಗುವದಿಲ್ಲ. ಜುಲೈ 10ರೊಳಗೆ ಹಸ್ತಪ್ರತಿಗಳನ್ನು ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಆಯ್ಕೆಯಾದ ಕತೆಗಾರರಿಗೆ ಹತ್ತು ಸಾವಿರ ರೂಪಾಯಿ ಬಹುಮಾನ ಕೊಟ್ಟು, ಅವರ ಕಥಾ ಸಂಕಲನವನ್ನು ಛಂದ ಪುಸ್ತಕ ಪ್ರಕಟಿಸುತ್ತದೆ. ಈ ಪುಸ್ತಕವನ್ನು 2010ರ ನವೆಂಬರ್ ತಿಂಗಳ ಕೊನೆಯಲ್ಲಿ ಬೆಂಗಳೂರಿನಲ್ಲಿ ನಡೆಯವ ಸಮಾರಂಭದಲ್ಲಿ ಬಿಡುಗಡೆ ಮಾಡಲಾಗುವುದು. ಪುಸ್ತಕದ ಆಯ್ಕೆ ಮತ್ತು ಪ್ರಕಟಣೆಯಲ್ಲಿ ಪ್ರಕಾಶಕರದೇ ಅಂತಿಮ ನಿರ್ಧಾರ.
ಕತೆಗಳನ್ನು ಕಳಿಸಬೇಕಾದ ವಿಳಾಸ:
ಛಂದ ಪುಸ್ತಕ, c/o ವಸುಧೇಂದ್ರ, ಐ-004, ಮಂತ್ರಿ ಪ್ಯಾರಡೈಸ್, ಬನ್ನೇರುಘಟ್ಟ ರಸ್ತೆ, ಬೆಂಗಳೂರು - 560 076 (ದೂ. 98444 22782)
ಕೊನೆಯ ದಿನಾಂಕ: ಜುಲೈ 10, 2010
ವಿವರಗಳಿಗೆ: [email protected]











Click it and Unblock the Notifications