Get Updates
Get notified of breaking news, exclusive insights, and must-see stories!

ಯಲ್ಲಾಪುರದ ಪದ್ಮನಾಭಗೆ ಛಂದ ಪುಸ್ತಕ ಬಹುಮಾನ

ಈ ಸಾಲಿನ ಛಂದ ಪುಸ್ತಕ ಬಹುಮಾನವನ್ನು ಪದ್ಮನಾಭ ಭಟ್ ಶೇವ್ಕಾರ ಅವರು ತಮ್ಮ ಕಥಾ ಸಂಕಲನದ ಹಸ್ತಪ್ರತಿಗೆ ಪಡೆದುಕೊಂಡಿದ್ದಾರೆ. 23 ವರ್ಷದ ಪದ್ಮನಾಭ ಭಟ್ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದವರು. ಸದ್ಯ ಬೆಂಗಳೂರಿನ ಪ್ರಮುಖ ದಿನಪತ್ರಿಕೆಯಲ್ಲಿ ಉಪಸಂಪಾದಕರಾಗಿ ತರಬೇತಿ ಪಡೆಯುತ್ತಿದ್ದಾರೆ.

ಈ ಸಾಲಿನ ಬಹುಮಾನದ ನಿರ್ಣಯವನ್ನು ಹಿರಿಯ ವಿಮರ್ಶಕಿ ಎಂ.ಎಸ್. ಆಶಾದೇವಿ ಮಾಡಿದ್ದಾರೆ. ನಾಡಿನ ಯುವ ಕತೆಗಾರರನ್ನು ಗುರುತಿಸುವ ಈ ಸ್ಪರ್ಧೆಗೆ ಕರ್ನಾಟಕದ ಎಲ್ಲೆಡೆಯಿಂದ ಸುಮಾರು 48 ಹಸ್ತಪ್ರತಿಗಳು ಪ್ರವೇಶ ಕೋರಿ ಬಂದಿದ್ದವು. ಅವುಗಳ ಮೊದಲ ಸುತ್ತಿನ ಆಯ್ಕೆಯನ್ನು ಖ್ಯಾತ ಕತೆಗಾರ್ತಿ ಸುಮಂಗಲಾ ಮಾಡಿದ್ದರು. ಎಲ್ಲರಿಗೂ ಛಂದಪುಸ್ತಕವು ಧನ್ಯವಾದಗಳನ್ನು ಅರ್ಪಿಸುತ್ತದೆ.

ಛಂದ ಪುಸ್ತಕವು ಈ ಪುಸ್ತಕವನ್ನು ಪ್ರಕಟಿಸಿ, ಪ್ರತಿಭಾನ್ವಿತ ಕತೆಗಾರರಿಗೆ ಹದಿನೈದು ಸಾವಿರ ರೂಪಾಯಿ ಬಹುಮಾನ, ಪ್ರಶಸ್ತಿ ಪತ್ರ ಮತ್ತು ಪಾರಿತೋಷಕವನ್ನು ನೀಡುತ್ತದೆ. ಈ ಪರಿಪಾಠವನ್ನು ಪ್ರತಿವರ್ಷ ಪಾಲಿಸಿಕೊಂಡು ಬಂದಿದೆ ಛಂದ ಪುಸ್ತಕ. ಇದೇ ಜೂನ್ ತಿಂಗಳಿನಲ್ಲಿ ಪುಸ್ತಕ ಬಿಡುಗಡೆ ಸಮಾರಂಭವನ್ನು ಬೆಂಗಳೂರಿನಲ್ಲಿ ನಡೆಸಲಾಗುತ್ತದೆ. [ಛಂದ ಪುಸ್ತಕ ಬಹುಮಾನ 2010]

Chandra Pustaka award to Padmanabha of Yellapur

ವಸುಧೇಂದ್ರ [ನಮ್ಮ ನಡುವಿನ ಅಪರೂಪದ ಕತೆಗಾರ ವಸುಧೇಂದ್ರ]
(ಛಂದ ಪುಸ್ತಕ)
ಐ-004, ಮಂತ್ರಿ ಪ್ಯಾರಡೈಸ್
ಬನ್ನೇರುಘಟ್ಟ ರಸ್ತೆ
ಬೆಂಗಳೂರೂ 560076
ದೂ. 98444 22782
More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+