ಹೊಸ ಕತೆಗಾರರಿಗೆ 'ಛಂದ' ಪುಸ್ತಕದ ಆಹ್ವಾನ

ಇದುವರೆಗೂ ಒಂದೂ ಕಥಾಸಂಕಲನ ಹೊರತಂದಿರದ ಲೇಖಕರಿಗೆ ಮಾತ್ರ ಅವಕಾಶ. ಸಾಹಿತ್ಯದ ಇತರ ಪ್ರಕಾರಗಳಲ್ಲಿ ಒಂದೆರಡು ಪುಸ್ತಕಗಳು ಪ್ರಕಟವಾಗಿದ್ದರೆ ಪರವಾಯಿಲ್ಲ. ತಮಗೆ ಉತ್ತಮವೆನಿಸಿದ ಸುಮಾರು 10 ಪ್ರಕಟಿತ ಅಥವಾ ಅಪ್ರಕಟಿತ ಸ್ವಂತ ಕತೆಗಳನ್ನು ಡಿಟಿಪಿ ಮಾಡಿಸಿ ಕಳುಹಿಸಬೇಕು. ಹಸ್ತಪ್ರತಿಯನ್ನು ಯಾವುದೇ ಕಾರಣಕ್ಕೂ ಹಿಂತಿರುಗಿಸಲಾಗುವದಿಲ್ಲ.
ಆಯ್ಕೆಯಾದ ಕತೆಗಾರರಿಗೆ ಹದಿನೈದು ಸಾವಿರ ರೂಪಾಯಿ ಬಹುಮಾನ ಕೊಟ್ಟು, ಅವರ ಕಥಾ ಸಂಕಲನವನ್ನು ಛಂದ ಪುಸ್ತಕ ಪ್ರಕಟಿಸುತ್ತದೆ. ಈ ಪುಸ್ತಕವನ್ನು 2014ರ ಏಪ್ರಿಲ್ ತಿಂಗಳ ಕೊನೆಯಲ್ಲಿ ಬೆಂಗಳೂರಿನಲ್ಲಿ ನಡೆಯವ ಸುಂದರ ಸಮಾರಂಭದಲ್ಲಿ ಬಿಡುಗಡೆ ಮಾಡಲಾಗುವುದು. ಪುಸ್ತಕದ ಆಯ್ಕೆ ಮತ್ತು ಪ್ರಕಟಣೆಯಲ್ಲಿ ಪ್ರಕಾಶಕರದೇ ಅಂತಿಮ ನಿರ್ಧಾರ.
ಕತೆಗಳನ್ನು ಕಳಿಸಬೇಕಾದ ವಿಳಾಸ : ಛಂದ ಪುಸ್ತಕ, c/o ವಸುಧೇಂದ್ರ, ಐ-004, ಮಂತ್ರಿ ಪ್ಯಾರಡೈಸ್, ಬನ್ನೇರುಘಟ್ಟ ರಸ್ತೆ, ಬೆಂಗಳೂರು-560 0676
ಕತೆಗಳನ್ನು ಕಳುಹಿಸಲು ಕೊನೆಯ ದಿನಾಂಕ : ನವೆಂಬರ್ 30, 2013
ಹೆಚ್ಚಿನ ವಿವರಗಳಿಗೆ : [email protected]












Click it and Unblock the Notifications