ಜ.24ಕ್ಕೆ ಕುಂವೀ ''ಎನ್‌ಕೌಂಟರ್'' ಪುಸ್ತಕ ಲೋಕಾರ್ಪಣೆ
ಬೆಂಗಳೂರು, ಜನವರಿ 21: ಖ್ಯಾತ ಕಾದಂಬರಿಕಾರ ಕುಂ. ವೀರಭದ್ರಪ್ಪ ಅವರ ಹೊಚ್ಚ ಹೊಸ ಕಾದಂಬರಿ ''ಎನ್‌ಕೌಂಟರ್'' ಪುಸ್ತಕ ಜನವರಿ 24ರಂದು ಲೋಕಾರ್ಪಣೆಗೊಳ್ಳುತ್ತಿದೆ.
ಕುಖ್ಯಾತ ಕ್ರಿಮಿನಲ್ ಜೀವನ ಆಧಾರಿತ ಈ ಕೃತಿಯನ್ನು ಅಂಕಿತ ಪುಸ್ತಕ ಪ್ರಕಾಶನ ಹೊರ ತರುತ್ತಿದೆ. ಜನವರಿ 24ರಂದು ಫೇಸ್ಬುಕ್ ಲೈವ್ ಮೂಲಕ ಪುಸ್ತಕವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗುತ್ತದೆ. ನಿವೃತ್ತ ಐಪಿಎಸ್ ಅಧಿಕಾರಿ ಶಂಕರ ಮಹಾದೇವ ಬಿದರಿ ಅವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ.
ಬುಕ್ ಬ್ರಹ್ಮ ವತಿಯಿಂದ ಲೈವ್ ಕಾರ್ಯಕ್ರಮ ನಡೆಸಲಾಗುತ್ತಿದೆ ಬೆಳಗ್ಗೆ 11 ಗಂಟೆ ಪುಸ್ತಕ ಬಿಡುಗಡೆ ನಂತರ ಅಗ್ರಹಾರ ಕೃಷ್ಣಮೂರ್ತಿ ಅವರು ಕುಂ ವೀರಭದ್ರಪ್ಪ ಅವರೊಂದಿಗೆ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಅಂಕಿತ ಪ್ರಕಾಶನವಲ್ಲದೆ, ಸ್ವಪ್ನ, ನವಕರ್ನಾಟಕ ಪಬ್ಲಿಕೇಷನ್ ಮುಖಾಂತರ ಆನ್ ಲೈನ್ ನಲ್ಲೂ ಪುಸ್ತಕ ಖರೀದಿಸಬಹುದು. ಬೆಲೆ 330 ರು.

90ರ ದಶಕದಲ್ಲಿ ಎನ್‌ಕೌಂಟರ್‌ನಲ್ಲಿ ಹತ್ಯೆಗೀಡಾದ ಕ್ರಿಮಿನಲ್ ಭೀಮ್ಲಾ ನಾಯಕ್ ಬದುಕಿನ ಚಿತ್ರಣ ಇಲ್ಲಿದೆ. ಕೆಡುಕುತನದ ನಂಜು ಅವನ ದೇಹದ ತುಂಬೆಲ್ಲ ವ್ಯಾಪಿಸಿತ್ತು, ಅವನ ಮನಸ್ಸನ್ನು ಪ್ರಳಯಾಂತಕಾರಿಯಾಗಿಸಿತ್ತು, ಆದರೂ, ಅವನಲ್ಲಿ ಎಳ್ಳುಗಾತ್ರದಷ್ಟು ಒಳ್ಳೆತನವಿತ್ತು. ಆ ಒಳ್ಳೆತನದ ಪ್ರತಿಬಿಂಬ ಈ ಕೃತಿ, ಈ ಬಯೋಪಿಕ್ಕು! ಎಂದು ಬೆನ್ನುಡಿಯಲ್ಲಿ ಕುಂವೀ ಬರೆದಿದ್ದಾರೆ.

ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕೊಟ್ಟೂರಿನವರಾದ ಕುಂ ವೀರಭದ್ರಪ್ಪ ಅವರು ಗ್ರಾಮೀಣ ಬದುಕಿನ ಸಂವೇದನೆಗಳನ್ನು ತಮ್ಮ ಕೃತಿಗಳಲ್ಲಿ ಮೂಡಿಸಿದ್ದಾರೆ. ಕರ್ನಾಟಕ ಆಂಧ್ರ ಗಡಿ ಭಾಗದ ಜಿಲ್ಲೆಗಳಲ್ಲಿ ಪ್ರಾಥಮಿಕ ಶಾಲೆ ಶಿಕ್ಷಕರಾಗಿ ವೃತ್ತಿ ಜೀವನ ಕಂಡಿದ್ದಾರೆ. 19 ಕಾದಂಬರಿಗಳಲ್ಲದೆ, ಕಥಾ ಸಂಕಲನ, ಜೀವನ ಚರಿತ್ರೆ, ವಿಮರ್ಶೆ, ಕವನ, ಅನುವಾದಿತ ಕೃತಿಗಳನ್ನು ಹೊರ ತಂದಿದ್ದಾರೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications