ಕರ್ನಾಟಕ ಹೆಮ್ಮೆಯ ಪ್ರಭಾತ್ ಕಲಾವಿದರು

1969ರ ನಂತರ ಪ್ರಭಾತ ಕಲಾವಿದರು ಗೋಪೀನಾಥ ದಾಸರ ನೇತೃತ್ವದಲ್ಲಿ ಬ್ಯಾಲೆ ಶೈಲಿಯ ನಾಟಕಗಳು ಪ್ರದರ್ಶಿಸಲು ತೊಡಗಿದರು. ಈ ನವ-ವಿಧಾನಗಳಿಂದ ಭಾರತೀಯ ನೃತ್ಯ ರೂಪಕಗಳು ಇತಿಹಾಸದಲ್ಲೇ ಹೆಗ್ಗಳಿಕೆಯನ್ನು ಸಾಧಿಸಿತು. ಗೋವಿನ ಕಥೆ, ಕಿಂದರ ಜೋಗಿ ಇವು ಜಾನಪದದ ಕಥೆಗಳಾದರೆ, ಧರ್ಮಭೂಮಿ, ಕರ್ನಾಟಕ ವೈಭವ ಮುಂತಾದವುಗಳು ಇತಿಹಾಸದ ಹಿನ್ನಲೆಯ ವಸ್ತುಗಳಾಗಿದ್ದವು. ಆದರೂ ಪೌರಾಣಿಕ ಕಥೆಗಳನ್ನು ಕೈ ಬಿಟ್ಟಿರಲಿಲ್ಲ. ಮೋಹಿನಿ ಭಸ್ಮಾಸುರ, ಭಗವದ್ಗೀತೆ ಮುಂತಾದ ಪುರಾಣ ವಸ್ತುಗಳ ಆಯ್ಕೆಯೂ ಇತ್ತು.
ಇವುಗಳೊಂದಿಗೆ ಪಾಶ್ಚಿಮಾತ್ಯ ಕಥಾಹಂದರವನ್ನು ಹೊಂದಿದ ಸಿಂಡ್ರೆಲಾ ನೃತ್ಯ ನಾಟಕ ಹೊಸ ರೀತಿಯಲ್ಲಿ ಪ್ರಯೋಗವಾಗಿ ನೂರಾರು ಪ್ರದರ್ಶನಗಳು ಆದವು. ಅದು ಇಂದಿಗೂ ಮುಂದುವರೆದು ಜನವರಿ 29, 2007ರಂದು 1001ನೇ ಪ್ರದರ್ಶನ ಕಂಡಿತು. ಕರ್ನಾಟಕದಲ್ಲಿ ಇದು ಒಂದು ದಾಖಲೆ ಎನ್ನುವುದನ್ನು ಮರೆಯಲಾಗದು. ರೇಷ್ಮೆ ವಸ್ತ್ರದ ಉಗಮದ ಕಥಾವಸ್ತುವನ್ನೊಳಗೊಂಡ ಕ್ರೌನ್ ಆಫ್ ಕ್ರಿಯೇಷನ್ (ದಿವ್ಯ ಸೃಷ್ಟಿ), ಪರಿಸರದ ಪ್ರಾಮುಖ್ಯತೆಯನ್ನು ಹೇಳುವ ಅಭಿಜ್ಞಾನ ಯಶಸ್ವಿಯಾಗಿ ಹೊರಬಂದ ಕಾರ್ಯಕ್ರಮಗಳು.
1982ರ ನಂತರ, ಸಂಸ್ಥೆಯ ರೂವಾರಿ ಗೋಪೀನಾಥ ದಾಸರು ದಿವಂಗತರಾದ ಮೇಲೆ, ಅವರ ಹಿರಿಯ ಮಗನಾದ ಟಿ.ಜಿ. ವೆಂಕಟೇಶಾಚಾರ್ ಮತ್ತು ಸಹೋದರರು ಓಡುತ್ತಿದ್ದ ರಥದ ಚುಕ್ಕಾಣಿ ಹಿಡಿದು ಶ್ರೀನಿವಾಸ ಕಲ್ಯಾಣ, ಶ್ರೀ ಕೃಷ್ಣ ವೈಜಯಂತಿ, ಶ್ರೀ ರಾಮ ಪ್ರತಿಕ್ಷಾ, ಮಹಿಷಾಸುರ ಮರ್ಧಿನಿ ಮುಂತಾದ ನೃತ್ಯನಾಟಕಗಳ ಯಶಸ್ವಿ ಪ್ರಯೊಗಗಳನ್ನು ಮಾಡಿದ್ದಾರೆ. ಈ ಕಾರ್ಯಕ್ರಮಗಳೆಲ್ಲಾ 5,000ಕ್ಕೂ ಮೇಲ್ಪಟ್ಟು ಪ್ರದರ್ಶನಗಳನ್ನು ಕಂಡಿವೆ.
ಪ್ರಭಾತ ಕಲಾವಿದರು ಕರ್ನಾಟಕವಲ್ಲದೆ ದೇಶಾದ್ಯಂತ ನೂರಾರು ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ. ಹಲವಾರು ಕಾರ್ಯಕ್ರಮಗಳು ಹಿಂದಿ, ಆಂಗ್ಲ, ತೆಲುಗು, ತಮಿಳು, ಸಂಸ್ಕೃತ ಭಾಷೆಗಳಿಗೂ ಭಾಷಾಂತರಗೊಂಡು ಆಯಾ ಪ್ರಾಂತ್ಯಗಳಲ್ಲಿ ಪ್ರದರ್ಶನಗಳನ್ನು ಕಂಡಿವೆ. ಇದೂ ಅಪರೂಪವಾದ ದಾಖಲೆ. ದೆಹಲಿಯಲ್ಲಿ ಪ್ರತಿ ವರ್ಷವೂ ನಡೆಯುತ್ತಿದ್ದ ಇಂಡಸ್ಟ್ರಿಯಲ್ ಟ್ರೆಂಡ್ ಫೇರ್‌ನಲ್ಲಿ ಏಳು ವರ್ಷಗಳೂ ಸತತವಾಗಿ ವಿಭಿನ್ನ ಪ್ರದರ್ಶನಗಳನ್ನು ನೀಡಲಾಗಿದೆ. ಸಿಂಗಪುರ, ಮಲೇಶಿಯಾ ದೇಶಗಳಲ್ಲಿ ಬ್ಯಾಲೆ ಪ್ರದರ್ಶನಗಳು ನಡೆದಿವೆ. 1993ರಲ್ಲಿ ಅಮೇರಿಕಾದ ಬೇರೆ ಬೇರೆ ನಗರಗಳಲ್ಲಿ ಪ್ರದರ್ಶನಗಳನ್ನು ನೀಡಿ ಜನಮನ್ನಣೆ ಪಡೆದಿದೆ. ಇದೇ ಸೆಪ್ಟೆಂಬರ್ ನಲ್ಲಿ ಅಮೆರಿಕಾದ ನ್ಯೂ ಜೆರ್ಸಿಯಲ್ಲಿ ನಡೆಯುವ 6ನೇ ಅಕ್ಕ ವಿಶ್ವ ಕನ್ನಡ ಸಮ್ಮೇಳನದಲ್ಲಿ ಪ್ರದರ್ಶನ ನೀಡಲು ಪ್ರಭಾತ ಕಲಾವಿದರ ತಂಡ ಅಮೆರಿಕಾಗೆ ತೆರಳುತ್ತಿದೆ.
ಪ್ರಭಾತ ಸಂಸ್ಥೆಯ 75 ವರ್ಷಗಳ ಕಾಲಾವಧಿಯಲ್ಲಿ, ಅದು ಸಂಪಾದಿಸಿದ ಕೀರ್ತಿಯ ಶಿಖರವನ್ನು ಒ೦ದೊಂದೇ ಹತ್ತಿ ಅದರ ಎತ್ತರ ಬಿತ್ತರವನ್ನು ಅಳೆಯುವುದು ಕಷ್ಟ. ಇಷ್ಟು ಮಾತ್ರ ಹೇಳಬಹುದು, ಈಗ ಆಗಿರುವ ಕಲಾ ಸೇವೆ ಅತ್ಯಲ್ಪ, ಇನ್ನೂ ಆಗಬೇಕಾದದ್ದು ಬೆಟ್ಟದಷ್ಟಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications