ಇಂಗ್ಲಿಷ್ ಶಾಲೆಗಳ ಬಗ್ಗೆ ಕನ್ನಡಿಗರು ಏನನ್ನುತ್ತಾರೆ?

ರಾಜ್ಯ ಸರ್ಕಾರವು ಕಲಿಕೆಯ ವಿಷಯದಲ್ಲಿ ಮೊದಲಿನಿಂದಲೂ ಕನ್ನಡ ವಿರೋಧಿಯನ್ನು ಧೋರಣೆಯನ್ನು ತೋರಿಸುತ್ತಿರುವ ಅನುಮಾನವಿದೆ. ಎರಡು ವರ್ಷಗಳ ಹಿಂದೆ ಬಿಬಿಎಂಪಿ ವ್ಯಾಪ್ತಿಯ ಸರ್ಕಾರಿ ಶಾಲೆಯನ್ನು ಭಾರತೀಯ ವಿದ್ಯಾಭವನ ಎನ್ನುವ ಖಾಸಗಿ ಸಂಸ್ಥೆಗೆ ಕೇಂದ್ರೀಯ ಪಠ್ಯಕ್ರಮದ ಆಂಗ್ಲ ಮಾಧ್ಯಮ ಶಾಲೆಯನ್ನು ನಡೆಸಲು ಒಪ್ಪಿಸಿಬಿಟ್ಟಿತು. ಆ ಮೂಲಕ ರಾಜ್ಯ ಸರ್ಕಾರದ ಪಠ್ಯಕ್ರಮದಲ್ಲಿ ತನಗೆ ನಂಬಿಕೆ ಇಲ್ಲವೆಂಬುದನ್ನು ತೋರಿಸಿಕೊಂಡಿತ್ತು. ಹೀಗೆ ನಡೆದುಕೊಳ್ಳಲು "ಬಡಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕು" ಎನ್ನುವ ಕಾರಣವನ್ನು ನೀಡಿತ್ತು. ಇದಾದ ಕೆಲದಿನಗಳಲ್ಲೇ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಎಂದು ಸುಮಾರು ಮೂರು ಸಾವಿರ ಕನ್ನಡ ಪ್ರಾಥಮಿಕ ಶಾಲೆಗಳನ್ನು ಮುಚ್ಚಲು ಮುಂದಾಯಿತು. ಈ ಬಗ್ಗೆ ಜನರಿಂದ ವಿರೋಧ ಬಂದಾಗ "ಮುಚ್ಚುವಿಕೆ ಅಲ್ಲಾ... ಹತ್ತಿರದ ಶಾಲೆಯೊಂದಿಗೆ ವಿಲೀನ" ಎಂದಿತು.
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಯಾಕೆ ಕಡಿಮೆ? ಎನ್ನುವುದಕ್ಕೆ "ಹಳ್ಳಿಗಳಿಂದ ನಗರಗಳಿಗೆ ಜನರು ವಲಸೆ ಹೋಗುತ್ತಿದ್ದಾರೆ" ಎಂದಿತು. "ಹಾಗಾದರೆ ಹಳ್ಳಿಗಾಡಿನ ಖಾಸಗಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೇಗೆ ಹೆಚ್ಚುತ್ತಿದೆ?" ಎನ್ನುವ ಪ್ರಶ್ನೆಗೆ ಉತ್ತರವಿಲ್ಲ. ಸರ್ಕಾರಿ ಶಾಲೆಗಳನ್ನು ಮುಚ್ಚಲು ಮಕ್ಕಳ ಸಂಖ್ಯೆ ಐದಕ್ಕಿಂತಾ ಕಡಿಮೆಯಿದೆ ಎನ್ನುವ ಕಾರಣ ನೀಡುತ್ತಾ "ಇದು ಕೇಂದ್ರ ಸರ್ಕಾರದ ಆದೇಶ, ನಮ್ಮ ತಪ್ಪೇನೂ ಇಲ್ಲಾ" ಎಂದು ತಿಪ್ಪೆ ಸಾರಿಸಲಾಯಿತು. ಇಷ್ಟೇ ಅಲ್ಲದೆ ಕೇಂದ್ರೀಯ ಪಠ್ಯಕ್ರಮದ ಶಾಲೆಗಳನ್ನು ಆರಂಭಿಸಲು ಇರುವ ಕಟ್ಟುಪಾಡುಗಳನ್ನೆಲ್ಲಾ ಗಾಳಿಗೆ ತೂರಿ ನಿರಾಕ್ಷೇಪಣಾ ಪತ್ರಗಳನ್ನು ನೀಡುವುದನ್ನು ಮುಂದುವರೆಸಲಾಯಿತು, ಇದು ಬೀದಿಗೊಂದು ಕೇಂದ್ರ ಪಠ್ಯಕ್ರಮದ ಶಾಲೆ ಆರಂಭವಾಗಲು ಕಾರಣವಾಯಿತು. ಇವಿಷ್ಟೂ ಒಂದು ಹಂತದ ಕಥೆಯಾದರೆ ಈಗಿನದ್ದು ಮತ್ತೊಂದು.
ಈಗ ರಾಜ್ಯ ಸರ್ಕಾರದ 341 ಶಾಲೆಗಳಲ್ಲಿ ಆಂಗ್ಲ ಮಾಧ್ಯಮವನ್ನು ಶುರುಮಾಡಲು ಮುಂದಾಗಿದೆ. "ಇದಕ್ಕೆ ಜನರಿಂದ ಬೇಡಿಕೆಯಿದೆ, ಬಡಮಕ್ಕಳು ಖಾಸಗಿ ಶಾಲೆಗಳನ್ನು ಸೇರಲಾಗದ ಕಾರಣದಿಂದ ಆಂಗ್ಲ ಮಾಧ್ಯಮದಲ್ಲಿ ಕಲಿಯುವುದರಿಂದ ವಂಚಿತರಾಗಬಾರದು, ಇದು ರಾಜ್ಯ ಸರ್ಕಾರದ ಭಾಷಾ ನೀತಿಯನ್ನು ಉಲ್ಲಂಘಿಸುತ್ತಿಲ್ಲ" ಇತ್ಯಾದಿ ಕಾರಣಗಳನ್ನು ಕೊಡಲಾಗುತ್ತಿದೆ. ಕರ್ನಾಟಕದ ಭಾಷಾ ನೀತಿ ಕನ್ನಡ ಮಾಧ್ಯಮದಲ್ಲಿನ ಕಲಿಕೆಯನ್ನು 5ನೇ ತರಗತಿಯವರೆಗೆ ಕಡ್ಡಾಯ ಮಾಡಿರುವುದನ್ನು "ಕನಿಷ್ಠ 5ನೇ ತರಗತಿಯವರೆಗೆ" ಎಂದು ಪರಿಗಣಿಸದೇ "ಗರಿಷ್ಠ 5ನೇ ತರಗತಿಯವರೆಗೆ" ಎಂದು ಸರ್ಕಾರ ಪರಿಗಣಿಸಿದಂತಿದೆ.
ಇದೆಲ್ಲದರ ಅರ್ಥವು ನೇರವೂ ಸರಳವೂ ಆಗಿದೆ. ಕನ್ನಡನಾಡಿನ ಭವಿಷ್ಯ ರೂಪಿಸಲು ಅಗತ್ಯವಾಗಿರುವ 'ಕನ್ನಡಿಗರ ಕಲಿಕೆ'ಗೆ 'ಕನ್ನಡ ನುಡಿ' ಯೋಗ್ಯವಾಗಿದೆ ಎನ್ನುವ ನಂಬಿಕೆಯೇ ಸರ್ಕಾರಕ್ಕಿಲ್ಲ. ಈಗಿರುವ ಕಲಿಕೆ ಏರ್ಪಾಟಿನಲ್ಲಿರುವ ಕುಂದುಕೊರತೆಗಳನ್ನು ನೀಗಿಸಿಕೊಂಡು "ಅತ್ಯುತ್ತಮವಾಗಿ ನಿರ್ವಹಿಸಲಾಗುತ್ತಿರುವ, ಅತ್ಯುತ್ತಮ ಗುಣಮಟ್ಟದ ಶಿಕ್ಷಣ ವ್ಯವಸ್ಥೆ"ಯನ್ನು ಕಟ್ಟಬೇಕೆಂಬ ಸಣ್ಣ ಹಂಬಲವೂ ಸರ್ಕಾರಕ್ಕಿರುವಂತೆ ತೋರುತ್ತಿಲ್ಲ. ಬದಲಾಗಿ ಕನ್ನಡಕ್ಕೆ ಕಲಿಕಾ ಮಾಧ್ಯಮವಾಗುವ ಯೋಗ್ಯತೆಯಿಲ್ಲಾ ಎಂದೂ, ಕನ್ನಡಿಗರಿಗೆ ಆಂಗ್ಲ ಮಾಧ್ಯಮದಲ್ಲಿನ ಕಲಿಕೆಯೇ ಒಳಿತೆಂದೂ ತಿಳಿದಿರುವಂತಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications