ಬುರುಡೆ ಶೋಧ ನೆಪದಲ್ಲಿ ಹಿಂದೂ ಧಾರ್ಮಿಕ ಕೇಂದ್ರದ ವಿರುದ್ಧ ಅಪಪ್ರಚಾರ ಸಹಿಸಲ್ಲ: ಬಿಜೆಪಿ ಶಾಸಕ ಸುನಿಲ್ ಕುಮಾರ್
Dharmasthala Case: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೃತ್ಯಗಳಿಗೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ಮುಂದುವರಿದಿದೆ. ಇಂದೂ ಸಹ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಇದೀಗ ಈ ವಿಚಾರವಾಗಿ ಬಿಜೆಪಿಯ ಶಾಸಕ ಸುನಿಲ್ ಕುಮಾರ್ ಅವರು ಮಾತನಾಡಿದ್ದಾರೆ. ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಈ ಸಂಬಂಧ ಪೋಸ್ಟ್ ಮಾಡಿದ್ದು. ಪೋಸ್ಟ್ ವೈರಲ್ ಆಗುತ್ತಿದೆ.
ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಗುರುವಾರ ಈ ವಿಚಾರವಾಗಿ ಪೋಸ್ಟ್ ಮಾಡಿರುವ ಅವರು, ನೇತ್ರಾವತಿ ತಟದಲ್ಲಿ ತನಿಖೆ, ಬುರುಡೆ ಶೋಧದ ನೆಪದಲ್ಲಿ ಹಿಂದು ಧಾರ್ಮಿಕ ಕೇಂದ್ರಗಳ ವಿರುದ್ಧ ನಡೆಯುವ ಅಪಪ್ರಚಾರವನ್ನು ಸಹಿಸುವುದಕ್ಕೆ ಸಾಧ್ಯವಿಲ್ಲ.ಹೋರಾಟ ಹಾಗೂ ತನಿಖೆ ಜನರ ನಂಬಿಕೆಯನ್ನು ಘಾಸಿಗೊಳಿಸುವಂತಿರಬಾರದು.ಸರ್ಕಾರ ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಜಾಗೃತೆಯ ಹೆಜ್ಜೆ ಇಡಲಿ. ಜನರು ಬೀದಿಗೆ ಇಳಿಯುವ ಸಂದರ್ಭ ಸೃಷ್ಟಿಯಾಗದಿರಲಿ ಎಂದು ಹೇಳಿದ್ದಾರೆ. ಈ ವಿಚಾರವಾಗಿ ಪರ - ವಿರೋಧ ಚರ್ಚೆ ಶುರುವಾಗಿದೆ. ಹಲವರು ಶಾಸಕರ ಟ್ವೀಟ್ ಅನ್ನು ವಿರೋಧಿಸಿ ಕಮೆಂಟ್ ಮಾಡಿದ್ದಾರೆ.

ಧರ್ಮಸ್ಥಳ ವಿಚಾರದಲ್ಲಿ ಸರ್ಕಾರ ಏನು ಮಾಡುತ್ತಿದೆ ? ಇದೇನು ತನಿಖೆಯೋ ? ದೊಂಬಿಯೋ ಎಂದು ಪ್ರಶ್ನೆ ಮಾಡಿರುವ ಅವರು, ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ಯೋಜಿತ ಅಪಪ್ರಚಾರದಲ್ಲಿ ಕಾಂಗ್ರೆಸ್ ಸರ್ಕಾರ ಯೂ ಟ್ಯೂಬರ್‌ಗಳು ಹಾಗೂ ಅನ್ಯಮತೀಯರ ಕೈಗೊಂಬೆಯಾಗಿ ಕುಣಿಯುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.
ನಾಡಿನ ಪ್ರಮುಖ ವಾಹಿನಿಯ ಮೇಲೆ, ಸ್ಥಳೀಯ ನಾಗರಿಕರ ಮೇಲೆ ಈ ಹೋರಾಟಗಾರರ ಸೋಗಿನ ವ್ಯಕ್ತಿಗಳು ಹಲ್ಲೆ, ಗೂಂಡಾಗಿರಿ ಮಾಡುತ್ತಿದ್ದರೂ ಪೊಲೀಸ್ ಇಲಾಖೆ ಏನು ಮಾಡುತ್ತಿದೆ ? ಸಹನೆಗೂ ಒಂದು ಮಿತಿ ಇದೆ. ಮೌನವನ್ನು ದೌರ್ಬಲ್ಯ ಎಂದು ಪರಿಗಣಿಸಬೇಡಿ ಎಂದು ಹೇಳಿದ್ದು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರಾದ ಜಿ. ಪರಮೇಶ್ವರ್ ಹಾಗೂ ಡಿ.ಕೆ ಶಿವಕುಮಾರ್ ಅವರನ್ನು ಟ್ಯಾಗ್ ಮಾಡಿದ್ದಾರೆ.
ನೇತ್ರಾವತಿ ತಟದಲ್ಲಿ ತನಿಖೆ, ಬುರುಡೆ ಶೋಧದ ನೆಪದಲ್ಲಿ ಹಿಂದು ಧಾರ್ಮಿಕ ಕೇಂದ್ರಗಳ ವಿರುದ್ಧ ನಡೆಯುವ ಅಪಪ್ರಚಾರವನ್ನು ಸಹಿಸುವುದಕ್ಕೆ ಸಾಧ್ಯವಿಲ್ಲ.ಹೋರಾಟ ಹಾಗೂ ತನಿಖೆ ಜನರ ನಂಬಿಕೆಯನ್ನು ಘಾಸಿಗೊಳಿಸುವಂತಿರಬಾರದು.ಸರ್ಕಾರ ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಜಾಗೃತೆಯ ಹೆಜ್ಜೆ ಇಡಲಿ. ಜನರು ಬೀದಿಗೆ ಇಳಿಯುವ ಸಂದರ್ಭ ಸೃಷ್ಟಿಯಾಗದಿರಲಿ.
— Sunil Kumar Karkala (@karkalasunil) August 7, 2025
ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ: ಇನ್ನು ಸುನಿಲ್ ಅವರ ಪೋಸ್ಟ್‌ಗೆ ಸೋಷಿಯಲ್ ಮೀಡಿಯಾದಲ್ಲಿ ಪರ - ವಿರೋಧ ಚರ್ಚೆಗಳು ನಡೆಯುತ್ತಿವೆ. ಬಿಜೆಪಿ ಶಾಸಕರು ಈ ವಿಚಾರದಲ್ಲಿ ಯಾಕೆ ಈ ರೀತಿ ಪೋಸ್ಟ್ ಮಾಡಿದ್ದಾರೆ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ಇನ್ನೂ ಕೆಲವರು ಹೌದು ಈ ವಿಚಾರದಲ್ಲಿ ಧರ್ಮದ ಬಗ್ಗೆ ಅಪಪ್ರಚಾರ ನಡೆಯಬಾರದು ಎಂದೂ ಅಭಿಪ್ರಾಯಪಟ್ಟಿದ್ದಾರೆ. ಈ ಪೋಸ್ಟ್‌ಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.












Click it and Unblock the Notifications