Lok Sabha Election 2024: ಇಂದು ರಾಜ್ಯಕ್ಕೆ ಪ್ರಧಾನಿ ಮೋದಿ, ಒಂದೇ ದಿನ ನಾಲ್ಕು ಕಡೆ ಭಾಷಣ

ಬೆಂಗಳೂರು, ಏಪ್ರಿಲ್. 28: ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿದಿದ್ದು, ಎರಡನೇ ಹಂತದ ಮತದಾನಕ್ಕೆ ಸಿದ್ಧವಾಗುತ್ತಿದೆ. ಇದೇ ವೇಳೆ ಬಿಜೆಪಿ ಮತ್ತೆ ತನ್ನ ರಾಷ್ಟ್ರೀಯ ನಾಯಕರಿಂದ ಭರದಿಂದ ಚುನಾವಣಾ ಪ್ರಚಾರ ಶುರು ಮಾಡಿಸಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬರುತ್ತಿದ್ದು, ಒಂದೇ ದಿನ ನಾಲ್ಕು ಕಡೆ ಸಾರ್ವಜನಿಕ ಸಭೆ ನಡೆಸಲಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ ಲೋಕಸಭಾ ಚುನಾವಣಾ ಪ್ರಚಾರವನ್ನು ತೀವ್ರಗೊಳಿಸಲಿದ್ದು, ಏಪ್ರಿಲ್ 28 ರ ಭಾನುವಾರ ಮತ್ತು ಸೋಮವಾರದ ಎರಡು ದಿನಗಳಲ್ಲಿ ಐದು ಬ್ಯಾಕ್ ಟು ಬ್ಯಾಕ್ ಸಾರ್ವಜನಿಕ ಸಭೆಗಳನ್ನು ನಡೆಸಿ ಮತಯಾಚಿಸಲಿದ್ದಾರೆ. ರಾಜ್ಯದಲ್ಲಿ ತನ್ನ ಸ್ಥಾನಗಳನ್ನು ಬಿಟ್ಟುಕೊಡಬಾರದೆಂಬ ಹಠದಲ್ಲಿರುವ ಬಿಜೆಪಿ ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿದೆ.

PM Narendra Modi visiting different places in the state on April 28th

ಬಿಜೆಪಿಯ ರಾಜ್ಯ ಘಟಕ ಹಂಚಿಕೊಂಡ ಮಾಹಿತಿ ಪ್ರಕಾರ ಪ್ರಧಾನಿ ಮೋದಿ ಭಾನುವಾರ ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಮತ್ತು ಹೊಸಪೇಟೆಯಲ್ಲಿ ಉತ್ತರ ಕರ್ನಾಟಕ ಪ್ರದೇಶದಲ್ಲಿ ನಾಲ್ಕು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಏಪ್ರಿಲ್ 29, ಸೋಮವಾರದಂದು ಪ್ರಧಾನಿ ಬಾಗಲಕೋಟೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಶನಿವಾರ ರಾತ್ರಿ ಕುಂದಾನಗರಿ ಬೆಳಗಾವಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಮೋದಿಯವರನ್ನು ಶೆಟ್ಟರ್ ಮತ್ತಿತರ ಗಣ್ಯರು ಸ್ವಾಗತಿಸಿದ್ದಾರೆ.


ಪ್ರಧಾನಿ ಮೋದಿಯವರ ಪ್ರವಾಸದ ಸಂಪೂರ್ಣ ವೇಳಾಪಟ್ಟಿ:

1. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಕರ್ನಾಟಕ ರಾಜ್ಯ ಸಂಯೋಜಕ ವಿ ಸುನೀಲ್ ಕುಮಾರ್ ಅವರ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಳಗ್ಗೆ ಬೆಳಗಾವಿಗೆ ಆಗಮಿಸುತ್ತಾರೆ ಮತ್ತು ಬೆಳಗ್ಗೆ 10 ಗಂಟೆಗೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

2. ನಂತರ ಪ್ರಧಾನಿ ಮೋದಿ ಅವರು ಮಧ್ಯಾಹ್ನ 12 ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲು ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ತೆರಳಲಿದ್ದಾರೆ.

3. ಬಳಿಕ ಪ್ರಧಾನಿ ಮೋದಿ ಅವರು ಬೆಣ್ಣೆ ನಗರಿ ದಾವಣಗೆರೆ ಬರಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.

4. ಇದೇ ದಿನ ಸಂಜೆ 4 ಗಂಟೆಗೆ ಹೊಸಪೇಟೆಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

5. ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಬಾಗಲಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರಧಾನಿ ಮೋದಿ ಜೊತೆ ಯಾರು ಯಾರು ಇರುತ್ತಾರೆ?

ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಸೇರಿದಂತೆ ರಾಜ್ಯದ ಹಲವು ಪ್ರಮುಖ ನಾಯಕರು, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಎಚ್‌ಡಿ ಕುಮಾರಸ್ವಾಮಿ ಸೇರಿದಂತೆ ಮೈತ್ರಿಕೂಟದ ಜೆಡಿಎಸ್ ನಾಯಕರು ಮತ್ತು ಇತರ ಗಣ್ಯರು ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಕರ್ನಾಟಕ ಲೋಕಸಭಾ ಚುನಾವಣೆ

ಶುಕ್ರವಾರ ನಡೆದ ಏಳು ಹಂತದ ಚುನಾವಣೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆದಿದೆ. ಮೇ 7 ರಂದು ಬಾಗಲಕೋಟೆ, ಬೆಳಗಾವಿ, ಬೀದರ್, ಬಿಜಾಪುರ, ಚಿಕ್ಕೋಡಿ, ದಾವಣಗೆರೆ, ಧಾರವಾಡ, ಕಲಬುರಗಿ, ಹಾವೇರಿ, ಬಳ್ಳಾರಿ, ಕೊಪ್ಪಳ, ರಾಯಚೂರು, ಶಿವಮೊಗ್ಗ, ಮತ್ತು ಉತ್ತರ ಕನ್ನಡ ಕ್ಷೇತ್ರಗಳಲ್ಲಿ 14 ಸ್ಥಾನಗಳಿಗೆ ಮತದಾನ ನಡೆಯಲಿದೆ.

--

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+