ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಭಿಜಾತ ಅಭಿಯಂತ ಸರ್ ಎಮ್ ವಿಶ್ವೇಶ್ವರಯ್ಯ

By Prasad
|
Google Oneindia Kannada News

ಇಂದು "ಇಂಜಿನೀಯರ್ ದಿನ", ಅದೇ ನಮ್ಮ ನೆಚ್ಚಿನ ಇಂಜನೀಯರ್-ದಿವಾನರು-ಮಹಾಮುತ್ಸದ್ಧಿ ಸರ್ ಎಮ್. ವಿಶ್ವೇಶ್ವರಯ್ಯನವರ 150ನೇ ಹುಟ್ಟುಹಬ್ಬ. ಈ ಸುದಿನದಂದು ಕೃಷ್ಣರಾಜೆಂದ್ರ ವೃತ್ತದಲ್ಲಿರುವ ಅವರ ಮೂರ್ತಿಗೆ ನಮಿಸೋಣ. ವಿಶ್ವೇಶ್ವರಯ್ಯನವರ ಈ ಮೂರ್ತಿ ಸ್ಥಾಪನೆಯಾದದ್ದು 1970ರಲ್ಲಿ.

ವಿಶ್ವೇಶ್ವರಯ್ಯನವರು ಹುಟ್ಟಿದ್ದು ಸೆಪ್ಟೆಂಬರ್ 15, 1860ರಂದು ಬೆಂಗಳೂರಿನಿಂದ 40 ಮೈಲಿ ದೂರದಲ್ಲಿರುವ ಮುದ್ದೇನಹಳ್ಳಿಯಲ್ಲಿ. ತಂದೆ ಶ್ರೀನಿವಾಸ ಶಾಸ್ತ್ರಿ, ತಾಯಿ ವೆಂಕಾಚಮ್ಮ. ವಿಶ್ವೇಶ್ವರಯ್ಯನವರ ತಂದೆ ಸಂಸ್ಕೃತ ವಿದ್ವಾಂಸರು; ಧರ್ಮ ಶಾಸ್ತ್ರಗಳನ್ನು ಆಳವಾಗಿ ಅಭ್ಯಾಸ ಮಾಡಿದ್ದರಲ್ಲದೆ ಆಯುರ್ವೇದ ತಜ್ಞರೂ ಆಗಿದ್ದರು. ವಿಶ್ವೇಶ್ವರಯ್ಯನವರ ಪ್ರಾಥಮಿಕ ಶಿಕ್ಷಣ ಚಿಕ್ಕಬಳ್ಳಾಪುರದಲ್ಲಿ ಮತ್ತು ಪ್ರೌಢ ಶಿಕ್ಷಣ ಬೆಂಗಳೂರಿನಲ್ಲಿ ನಡೆಯಿತು. 1881ರಲ್ಲಿ ಮದರಾಸು ವಿಶ್ವವಿದ್ಯಾಲಯದಿಂದ ಬಿಎ ಪದವಿಯನ್ನು ಪಡೆದು ನಂತರ ಪುಣೆಯ ವಿಜ್ಞಾನ ಕಾಲೇಜಿನಿಂದ ಸಿವಿಲ್ ಎಂಜಿನಿಯರಿಂಗ್ ಪದವಿಯನ್ನು ಪಡೆದರು. [ವಿಶ್ವೇಶ್ವರಯ್ಯ ಜನ್ಮದಿನ: ಉಸಿರಾಡುವ ಅಂಚೆಚೀಟಿ ಕಂಡ ಕನ್ನಡಿಗ]

Let's salute Sir M Visvesvaraya on engineers' day.

ಇಂಜನೀಯರಾಗಿ : ಶಿಕ್ಷಣದ ನಂತರ ಅವರು ಮುಂಬೈ ನಗರದಲ್ಲಿ ಲೋಕೋಪಯೋಗಿ ಇಲಾಖೆಯನ್ನು ಸೇರಿದರು. ಇದರ ನಂತರ ಭಾರತೀಯ ನೀರಾವರಿ ಕಮಿಷನ್ ಅನ್ನು ಸೇರಿ ದಖನ್ ಪ್ರಸ್ತಭೂಮಿಯಲ್ಲೇ ಉತ್ತಮವಾದ ನೀರಾವರಿ ವ್ಯವಸ್ಥೆಯನ್ನು ವಿಶ್ವೇಶ್ವರಯ್ಯನವರು ಪರಿಚಯಿಸಿದರು.

ಅಣೆಕಟ್ಟುಗಳಲ್ಲಿ ಉಪಯೋಗಿಸಲಾಗುವ ಸ್ವಯಂಚಾಲಿತ ಫ್ಲಡ್ ಗೇಟ್ ವಿನ್ಯಾಸವೊಂದನ್ನು ಕಂಡುಹಿಡಿದು ಅದಕ್ಕಾಗಿ ಪೇಟೆಂಟ್ ಪಡೆದರು. ಮೊದಲ ಬಾರಿಗೆ 1903ರಲ್ಲಿ ಈ ಫ್ಲಡ್ ಗೇಟ್ ಗಳು ಪುಣೆಯ ಖಡಕ್ವಾಸ್ಲಾ ಅಣೆಕಟ್ಟಿನಲ್ಲಿ ಸ್ಥಾಪಿತವಾದವು. ಇಲ್ಲಿ ಅವು ಯಶಸ್ವಿಯಾದ ನಂತರ ಗ್ವಾಲಿಯರ್ ನ ಟಿಗ್ರಾ ಅಣೆಕಟ್ಟು ಮತ್ತು ಕರ್ನಾಟಕದ ಕೃಷ್ಣರಾಜಸಾಗರ ಅಣೆಕಟ್ಟುಗಳಲ್ಲಿ ಸಹ ಉಪಯೋಗಿತವಾದವು. ಈ ಗೇಟ್ ಗಳ ಉದ್ದೇಶ ಅಣೆಕಟ್ಟೆಗೆ ಹಾನಿ ಮಾಡದೆ ಗರಿಷ್ಠ ಮಟ್ಟದ ನೀರನ್ನು ಶೇಖರಿಸಿಡುವುದೇ ಆಗಿತ್ತು. ಕೃಷ್ಣರಾಜಸಾಗರವನ್ನು ಕಟ್ಟಿದಾಗ ಅದು ಆ ಕಾಲದಲ್ಲಿ ಭಾರತದ ಅತ್ಯಂತ ದೊಡ್ಡ ಅಣೆಕಟ್ಟು.

ಹೈದರಾಬಾದ್ ನಗರವನ್ನು ಪ್ರವಾಹಗಳಿಂದ ರಕ್ಷಿಸಲು ಅವರು ಅಳವಡಿಸಿದ ಪ್ರವಾಹ ರಕ್ಷಣಾ ವ್ಯವಸ್ಥೆ ಅವರ ಪ್ರಸಿದ್ಧಿಯನ್ನು ಹೆಚ್ಚಿಸಿತ್ತು. [ಸರ್ ಎಂವಿಯನ್ನು ಕಂಡ ಈ ಕಣ್ಣುಗಳೇ ಧನ್ಯ]

Let's salute Sir M Visvesvaraya on engineers' day

ಕನ್ನಡನಾಡಿಗೆ ಸರ್ ಎಮ್.ವಿ ಕೊಡುಗೆ : ಮೈಸೂರು ರಾಜ್ಯದ ಮುಖ್ಯ ಇಂಜನೀಯರ್ ಆಗಿ, ನಂತರ ದಿವಾನರಾಗಿ, ಅದರ ನಂತರ ಹಲವಾರು ಲಾಭ-ರಹಿತ ಹುದ್ದೆಗಳಲ್ಲಿ ಕನ್ನಡ ನಾಡಿನ ಸೇವೆಗೈದ ವಿಶ್ವೇಶ್ವರಯ್ಯನವರ ಕೆಲ ಮುಖ್ಯ ಕೊಡುಗೆಗಳು:

* ಕೃಷ್ಣರಾಜಸಾಗರದ ನಿರ್ಮಾಣ.
* ಭದ್ರಾವತಿ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ ಚೇರಮನ್ನರಾಗಿ ಅದರ ಅಭಿವೃದ್ಧಿಗೆ ಕೊಡುಗೆ.
* ಮೈಸೂರು ಸಾಬೂನು ಕಾರ್ಖಾನೆಯ ಸ್ಥಾಪನೆ.
* ಮೈಸೂರು ವಿಶ್ವವಿದ್ಯಾಲಯದ ಸ್ಥಾಪನೆ.
* ಮೈಸೂರು ಬ್ಯಾಂಕ್ ಸ್ಥಾಪನೆ.
* ಮೈಸೂರು ಮತ್ತು ಬೆಂಗಳೂರಿನಲ್ಲಿ ಸಾರ್ವಜನಿಕ ಗ್ರಂಥಾಲಯಗಳ ಸ್ಥಾಪನೆ.
* ಮೈಸೂರು ಚೇಂಬರ್ ಆಫ್ ಕಾಮರ್ಸ್ ಸ್ಥಾಪನೆ.
* ಕನ್ನಡ ಸಾಹಿತ್ಯ ಪರಿಷತ್ ಸ್ಥಾಪನೆ.
* ಶ್ರೀ ಜಯಚಾಮರಾಜೇಂದ್ರ ವೃತ್ತಿಶಿಕ್ಷಣ ತರಬೇತಿ ಸಂಸ್ಥೆಯ ಸ್ಥಾಪನೆ.

ವಿಶ್ವೇಶ್ವರಯ್ಯನವರ ಪ್ರಾಮಾಣಿಕತೆ, ವೃತ್ತಿಪರತೆಗಳು ಕೂಡ ದಂತೆಕತೆಗಳಾಗಿ ಹೋಗಿವೆ. (ಕೃಪೆ : ಮೂರ್ತಿ ಪೂಜೆ)

English summary
Let's salute Sir M Visvesvaraya on engineers' day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X