ಕಾಡುವ ಕವಿತೆ : ಕೆಎಸ್‌ನರ ‘ಅಕ್ಕಿ ಆರಿಸುವಾಗ’ ಹಾಗೂ ‘ನಿನ್ನ ಹೆಸರು’
ಅಕ್ಕಿ ಆರಿಸುವಾಗ
ಅಕ್ಕಿ ಆರಿಸುವಾಗ ಚಿಕ್ಕ ನುಚ್ಚಿನ ನಡುವೆ
ಬಂಗಾರವಿಲ್ಲದ ಬೆರಳು;
ತಗ್ಗಿರುವ ಕೊರಳಿನ ಸುತ್ತ ಕರಿಮಣಿಯಾಂದೆ:
ಸಿಂಗಾರ ಕಾಣದಾ ಹೆರಳೂ;
ಹೆರಳಿನ ಭಾರಕ್ಕೆ ತುಂಬು ಕೆನ್ನೆಯಲಿ
ಹದಿನಾರು ವರುಷದಾ ನೆರಳು;
ದೀಪದಂತರಳಿದ ಸಿರಿಗಣ್ಣ ಸನ್ನೆಯಲಿ
ಹುಚ್ಚು ಹೊಳೆ, ಮುಂಗಾರಿನುರುಳು
ಕಲ್ಲ ಹರಳನು ಹುಡುಕಿ ಎಲ್ಲಿಗೋ ಎಸೆವಾಗ
ಝಲ್ಲೆನುವ ಬಳೆಯ ಸದ್ದು.
ಅತ್ತ ಯಾರೋ ಹೋದ, ಇತ್ತ ಯಾರೋ ಬಂದ
ಕಡೆಗೆಲ್ಲ ಕಣ್ಣು ಬಿದ್ದು
ಮನೆಗೆಲಸ ಬೆಟ್ಟದಷ್ಟಿರಲು ಸುಮ್ಮನೆ ಇವಳು
ಚಿತ್ರದಲಿ ತಂದಂತೆ ಇಹಳು
ಬೇಸಿರಿಯ ಕಿರಿಮುತ್ತು ನುಚ್ಚಿನಲಿ ಮುಚ್ಚಿರಲು
ಹುಡುಕುತಿವೆ ಆ ಹತ್ತು ಬೆರಳು!
***
ನಿನ್ನ ಹೆಸರು
ಸಿರಿಗೆರೆಯ ನೀರಲ್ಲಿ ಬಿರಿದ ತಾವರೆಯಲ್ಲಿ
ಕೆಂಪಾಗಿ ನಿನ್ನ ಹೆಸರು
ಗುಡಿಯ ಗೋಪುರದಲ್ಲಿ ಮೆರೆವ ದೀಪಗಳಲ್ಲಿ
ಬೆಳಕಾಗಿ ನಿನ್ನ ಹೆಸರು
ಜೋಯಿಸರ ಹೊಲದೊಳಗೆ ಕುಣಿವ ಕೆಂಗರುವಿನ
ಕಣ್ಣಲ್ಲಿ ನಿನ್ನ ಹೆಸರು
ತಾಯ ಮೊಲೆಯಲಿ ಕರುವು ತುಟಿಯಿಟ್ಟು ಚೆಲ್ಲಿಸಿದ
ಹಾಲಲ್ಲಿ ನಿನ್ನ ಹೆಸರು
ಹೂಬನದ ಬಿಸಿಲಲ್ಲಿ ನರ್ತಿಸುವ ನವಿಲಿನ
ದನಿಯಲ್ಲಿ ನಿನ್ನ ಹೆಸರು
ಹೊಂಬಾಳೆ ಹೂವಿನಲಿ ಹೊರಟ ಪರಿಮಳದಲ್ಲಿ
ಉಯ್ಯಾಲೆ ನಿನ್ನ ಹೆಸರು
ಮರೆತಾಗ ತುಟಿಗೆ ಬಾರದೆ ಮೋಡ ಮರೆಯಾಳಗೆ
ಬೆಳ್ದಿಂಗಳೋ ನಿನ್ನ ಹೆಸರು
ನೆನೆದಾಗ ಕಣ್ಣ ಮುಂದೆಲ್ಲ ಹುಣ್ಣಿಮೆಯಾಳಗೆ
ಹೂಬಾಣ ನಿನ್ನ ಹೆಸರು
ನೀನೆ ಎದುರಿಗೆ ಬಂದಾಗ ನಿನ್ನಲ್ಲೆ
ಕರಗುವ ಬಲು ಚಿಕ್ಕ ಹೆಸರು
ನೀನಿಲ್ಲದಾಗ ಈ ಮನೆಯಲ್ಲೆ ಮನದಲ್ಲೆ
ಹೊಳೆಗಾಳಿಯಂತಲೆವ ಹೆಸರು.
ಪೂರಕ ಓದಿಗೆ-
ಕೆಎಸ್‌ನ ಪ್ರೇಮಗೀತಗಳ ಹಲವು ನೆನಪು
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications