ಮಾಜಿ ಸಿಎಂ ಯಡಿಯೂರಪ್ಪ ಆಡಳಿತ ಮಾದರಿ ಅಳವಡಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ?

ಬೆಂಗಳೂರು, ಆ. 18: ಮಾಜಿ ಮುಖ್ಯಮಂತ್ರಿ ಬಿ.ಎಸ್. ಆಡಳಿತವನ್ನು ಕೇಂದ್ರ ಸರ್ಕಾರ ಮಾದರಿಯಾಗಿ ಇಟ್ಟುಕೊಳ್ಳಲು ಮುಂದಾಗಿದೆಯಾ?. ಹೌದು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾಗ ಮಾಜಿ ಸಿಎಂ ಯಡಿಯೂರಪ್ಪ 2008 ಮಹತ್ವದ ಯೋಜನೆಗಳನ್ನು ಘೋಷಣೆ ಮಾಡಿದ್ದರು. ಅವು ಜನಪ್ರೀಯ ಯೋಜನೆಗಳಾಗಿದ್ದರೂ ಕೇವಲ ಅದಕ್ಕಾಗಿ ಮಾಡಿದ ಯೋಜನೆಗಳಾಗಿರಲ್ಲ.

ಭಾಗ್ಯಲಕ್ಷ್ಮೀ, ರೈತರಿಗೆ ಶೂನ್ಯದರದಲ್ಲಿ ಬಡ್ಡಿ, ಶಾಲೆಗೆ ಹೋಗಲು ಮಕ್ಕಳಿಗೆ ಸೈಕಲ್ ಹೀಗೆ ಹಲವು ಯೋಜನೆಗಳನ್ನು ಮಾಜಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದರು. ಜೊತೆಗೆ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕೃಷಿ ಬಜೆಟ್ ಮಂಡನೆ ಮಾಡುವ ಮೂಲಕ ಇಡೀ ದೇಶದ ಗಮನ ಸೆಳೆದಿದ್ದರು. ಅದರ ಹೊರತಾಗಿಯೂ ಅವರಿಗೆ ತಮ್ಮ ಅಧಿಕಾರಾವಧಿಯನ್ನು ಪೂರ್ಣ ಗೊಳಿಸಲು ಆಗಲಿಲ್ಲ. ಅದಕ್ಕೆ ಬೇರೆಯ ಕಾರಣಗಳಿದ್ದವು.

ಇದೀಗ ವಯಸ್ಸಿನ ಕಾರಣ ಕೊಟ್ಟು ಮತ್ತೆ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬಿಜೆಪಿ ಹೈಕಮಾಂಡ್ ಕೆಳಗಿಳಿಸಿದೆ. ಆದರೆ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳಾಗಿದ್ದಾಗ ಯಡಿಯೂರಪ್ಪ ಜಾರಿಗೆ ತಂದಿದ್ದ ಯೋಜನೆಗಳ ಮಾದರಿಯಲ್ಲಿಯೇ ನೂತನ ಯೋಜನೆಗಳನ್ನು ಜಾರಿಗೆ ತರಲು ಪ್ರಧಾನಿ ಮೋದಿ ಮುಂದಾಗಿದ್ದಾರೆ. ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಜಾರಿಗೆ ತಂದಿದ್ದ ಯಾವ ಯೋಜನೆಯನ್ನು ಮೋದಿ ಸರ್ಕಾರ ಅಳವಡಿಸಿಕೊಳ್ಳುತ್ತಿದೆ? ಮುಂದಿದೆ ಮಾಹಿತಿ!

ಶೂನ್ಯ ಬಡ್ಡಿ ದರದಲ್ಲಿ ಸಾಲ ಯೋಜನೆ!

ಶೂನ್ಯ ಬಡ್ಡಿ ದರದಲ್ಲಿ ಸಾಲ ಯೋಜನೆ!

ರೈತರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಹಾಕಿಕೊಂಡಿದೆ. ಪ್ರಧಾನ್ ಮಂತ್ರಿ ಕಿಸಾನದ ಸಮ್ಮಾನ್ ನೀಧಿ ಯೋಜನೆ ಅವುಗಳಲ್ಲೊಂದು. ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದಾಗ ಒದಲಿಗೆ ಶೇಕಡಾ 3ರ ಬಡ್ಡಿ ದರದಲ್ಲಿ ಸಾಲ, ಆ ನಂತರ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಿದ್ದರು. ಇದೀಗ ಯಡಿಯೂರಪ್ಪ ಅವರ ಮಾದರಿಯಲ್ಲಿ ಶೂನ್ಯ ಬಡ್ಡಿ ದರದಲ್ಲಿ ಸಾಲ ಕೊಡಲು ಕೇಂದ್ರ ನರೇಂದ್ರ ಮೋದಿ ನೇತ್ರತ್ವದ ಸರ್ಕಾರ ಯೋಜನೆ ರೂಪಿಸುತ್ತಿದೆ. ಅದನ್ನು ಸ್ವತಃ ಕೇಂದ್ರ ಸಚಿವ ನಾರಾಯಣಸ್ವಾಮಿ ಪ್ರಕಟಿಸಿದ್ದಾರೆ.

ಯಡಿಯೂರಪ್ಪ ಮಾದರಿಯಲ್ಲಿ ಕೇಂದ್ರದಿಂದ ಸಾಲ ಸೌಲಭ್ಯ!

ಯಡಿಯೂರಪ್ಪ ಮಾದರಿಯಲ್ಲಿ ಕೇಂದ್ರದಿಂದ ಸಾಲ ಸೌಲಭ್ಯ!

ಜನಾಶೀರ್ವಾದ ಯಾತ್ರೆ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಬಂದಿದ್ದ ಕೇಂದ್ರ ಸಮಾಜ ಕಲ್ಯಾಣ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಮಹತ್ವದ ಘೊಷಣೆ ಮಾಡಿದ್ದಾರೆ. ದೇಶದಲ್ಲಿ ದಲಿತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಕೊಡುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ನಾರಾಯಣಸ್ವಾಮಿ ಹೇಳಿದ್ದಾರೆ. ಪ್ರಸಿದ್ಧ ವಿಶ್ವವಿದ್ಯಾನಿಲಯಗಳಲ್ಲಿ ಪ್ರತಿ ರಾಜ್ಯದಲ್ಲಿ 100 ಜನರನ್ನು ಐಎಎಎಸ್ ಮಾಡಿಸುವ ಸಂಕಲ್ಪವನ್ನು ಬಿಜೆಪಿ ಮಾಡಿದೆ. ಇದಕ್ಕಾಗಿ ಆದೇಶ ನೀಡಿದ್ದೇನೆ. ದಲಿತರಲ್ಲಿ ಶೈಕ್ಷಣಿಕ ಕ್ರಾಂತಿ ಆಗಬೇಕು. ಇದಕ್ಕಾಗಿ ರೆಸಿಡೆನ್ಶಿಯಲ್ ಸ್ಕೂಲ್ ಆರಂಭಿಸಲು ಘಟಕ ವೆಚ್ಚವನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಎಸ್‌ಸಿ, ಎಸ್‌ಟಿಗೆ ಮೋದಿ ಸಂಪುಟದಲ್ಲಿ ವಿಶೇಷ ಅವಕಾಶ!

ಎಸ್‌ಸಿ, ಎಸ್‌ಟಿಗೆ ಮೋದಿ ಸಂಪುಟದಲ್ಲಿ ವಿಶೇಷ ಅವಕಾಶ!

ದೇಶದ 84 ಲೋಕಸಭಾ ಕ್ಷೇತ್ರಗಳಲ್ಲಿ ಡಾ. ಅಂಬೇಡ್ಕರ್ ನವೋದಯ ವಸತಿ ಕಾಲೇಜುಗಳನ್ನು ಆರಂಭಿಸಲು ಸೂಚನೆ ನೀಡಿದ್ದೇನೆ. ವೃದ್ಧಾಶ್ರಮ ಮತ್ತು ಇತರ ಹೆಸರಿನಲ್ಲಿ ಅನುದಾನದ ದುರ್ಬಳಕೆ ತಪ್ಪಿಸಲು ಸೂಚಿಸಿದ್ದೇನೆ. ಇದನ್ನು ಇತರ ಇಲಾಖೆಗಳೂ ಅನುಸರಿಸಲಿವೆ ಎಂದು ಎ. ನಾರಾಯಣಸ್ವಾಮಿ ತಿಳಿಸಿದ್ದಾರೆ. ಪರಿಶಿಷ್ಟ ಜಾತಿ, ಪಂಗಡದವರಿಗೆ ಸಚಿವ ಸಂಪುಟದಲ್ಲಿ ನರೇಂದ್ರ ಮೋದಿ ವಿಶೇಷ ಅವಕಾಶ ಮಾಡಿಕೊದ್ದಾರೆ. ಐದು ದಶಕಕ್ಕೂ ಹೆಚ್ಚು ಕಾಲ ದೇಶದ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷವು ದಲಿತರಿಗೆ ಅವಕಾಶವನ್ನೇ ಕೊಡಲಿಲ್ಲ. ಆದರೆ, ಇವತ್ತು ನಾಲ್ಕು ಮಂದಿಗೆ ರಾಜ್ಯಪಾಲರನ್ನಾಗಿ ಮಾಡಿ, 14ಕ್ಕೂ ಹೆಚ್ಚು ಮಂದಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡುವುದರ ಮೂಲಕ ದಲಿತರು ಮತ್ತು ಹಿಂದುಳಿದವರ ಬಗ್ಗೆ ಬಿಜೆಪಿಗೆ ಇರುವ ಬದ್ಧತೆಯನ್ನು ಸಾಬೀತುಪಡಿಸಿದ್ದಾರೆ ಎಂದರು.

ಬಿಜೆಪಿ ಬ್ರಾಹ್ಮಣರ ಪಕ್ಷ ಎಂಬ ಆರೋಪ!

ಬಿಜೆಪಿ ಬ್ರಾಹ್ಮಣರ ಪಕ್ಷ ಎಂಬ ಆರೋಪ!

ಗರೀಬ್ ಕಲ್ಯಾಣ್, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ, ಸ್ವಚ್ಛ ಭಾರತ, ಉಜಾಲಾ, ಉಜ್ವಲ ಯೋಜನೆಗಳನ್ನು ಕೇಂದ್ರ ಜಾರಿಗೆ ತಂದಿದೆ. ಅದರಿಂದಾಗಿ ಅನೇಕ ತಾಂಡಾಗಳು, ಗೊಲ್ಲರ ಹಟ್ಟಿಗಳಿಗೆ ವಿದ್ಯುತ್, ದೇಶದಲ್ಲಿ 10 ಕೋಟಿ ಕುಟುಂಬಕ್ಕೆ ಶೌಚಾಲಯ ನೀಡಲಾಗಿದೆ. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ದೂರ ಮಾಡಲಾಗಿದೆ. ದೇಶದ ರಕ್ಷಣಾ ಕ್ಷೇತ್ರದಲ್ಲಿ ಸದೃಢತೆ ಸಾಧ್ಯವಾಗಿದೆ. ಆರ್ಥಿಕ ಸಬಲೀಕರಣಕ್ಕಾಗಿ ವಿಶೇಷ ಪ್ರಯತ್ನ ಮಾಡಲಾಗಿದೆ ಎಂದು ಎ. ನಾರಾಯಣಸ್ವಾಮಿ ವಿವರಿಸಿದ್ದಾರೆ.

ಬಿಜೆಪಿ ಬ್ರಾಹ್ಮಣರ ಪಕ್ಷ, ಗರ್ಭಗುಡಿಯ ರಾಜಕೀಯ ಮಾಡುವ ಪಕ್ಷ ಎಂಬ ಚರ್ಚೆಗಳಿದ್ದವು. 2014ರಲ್ಲಿ ದೇಶದ ಭಾವಿ ಪ್ರಧಾನಿಯಾಗಿ ನರೇಂದ್ರ ಮೋದಿ ಅವರನ್ನು ಬಿಜೆಪಿ ಪ್ರಕಟಿಸಿತು. ಬಳಿಕ ಅಭಿವೃದ್ಧಿ ಪಥದಲ್ಲಿ ದೇಶ ಮುನ್ನಡೆಯಿತು ಎಂದು ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ವಿವರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+