ಧಾರವಾಡ: ಜುಲೈ 13ರಂದು ರಾಷ್ಟ್ರೀಯ ಲೋಕ್ ಅದಾಲತ್, ಗುರುತಿಸಿದ ಪ್ರಕರಣಗಳು
ಧಾರವಾಡ, ಜೂನ್ 03: ಭಾರತದ ಸುಪ್ರೀಂ ಕೋರ್ಟ್ ನಲ್ಲಿರುವ ವಿವಿಧ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಕಕ್ಷಿದಾರರಿಗೆ ಉತ್ತಮ ಅವಕಾಶವನ್ನು ನೀಡಲಾಗಿದೆ. ಈ ಮೂಲಕ ಸಾರ್ವಜನಿಕರಿಗೆ ನ್ಯಾಯಾಂಗ ಅನುಕೂಲ ಒದಗಿಸಿಕೊಡಲು ತೀರ್ಮಾನಿಸಿದ್ದೇವೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶೆ ಕೆ.ಜಿ.ಶಾಂತಿ ಅವರು ತಿಳಿಸಿದರು.
ಸೋಮವಾರ ಬೆಳಗ್ಗೆ ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದರು. ಸರ್ವೋಚ್ಛ ನ್ಯಾಯಾಲಯದಲ್ಲಿ ಜುಲೈ 29 ರಿಂದ ಆಗಸ್ಟ್ 3 ರವರೆಗೆ ರಾಜಿ ಆಗದ ಪ್ರಕರಣಗಳನ್ನು ನೀವು ಧಾರವಾಡದಲ್ಲಿ ಆಯೋಜನೆಯಾಗಲಿರುವ ವಿಶೇಷ ನ್ಯಾಯಾಲಯದಲ್ಲಿ (National Lok Adalat) ಬಗೆಹರಿಸಿಕೊಳ್ಳಬಹುದು. ಈ 'ರಾಷ್ಟ್ರೀಯ ಲೋಕ್ ಅದಾಲತ್' ಅನ್ನು ಜುಲೈ 13ರಂದು ಆಯೋಜಿಸಲಾಗಿದೆ.

ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣ ಹೊಂದಿರುವ ಕಕ್ಷಿದಾರರಿಗೆ ಮಾಹಿತಿ, ನೋಟಿಸ್ ನೀಡಲು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯ ಕಾರ್ಯನಿರ್ವಾಹಕ ಅಧ್ಯಕ್ಷರಾದ ನ್ಯಾಯಮೂರ್ತಿ ಕೆ. ಸೋಮಶೇಖರ್ ಅವರು ನಿರ್ದೇಶಿಸಿದ್ದಾರೆ. ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ.
ಸುಪ್ರೀಂ ಕೋರ್ಟಿನಲ್ಲಿ ಪ್ರಕರಣ ಹೊಂದಿದವರಿಗೆ ವಿಶೇಷ ಜನತಾ ನ್ಯಾಯಾಲಯದಲ್ಲಿ ಭಾಗವಹಿಸಿ, ಇತ್ಯರ್ಥಪಡಿಸಿಕೊಳ್ಳಲು ಜಿಲ್ಲಾ ನ್ಯಾಯಾಲಯದಲ್ಲಿ ಉಚಿತವಾಗಿ ವಿಡಿಯೋ ಕಾನ್ಫರೆನ್ಸ್ ಮತ್ತು ಇತರ ಅನಕೂಲಗಳನ್ನು ಮಾಡಿಕೊಡಲಾಗುತ್ತದೆ. ಬಡ ಮತ್ತು ರಾಜಿಗೆ ಅಗತ್ಯವಿರುವ ಜಿಲ್ಲಾ ಕಕ್ಷಿದಾರರಿಗೆ ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಈ ಅದಾಲತ್ ಹೆಚ್ಚಿನ ಪ್ರಚಾರ ನೀಡಬೇಕು ಎಂದರು.
ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ
ಕಳೆದ ವರ್ಷ 2023 ಡಿಸೆಂಬರ್ 9 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿತ್ತು. ಆಗ ಬಾಕಿ ಉಳಿದಿದ್ದ ಮತ್ತು ರಾಜೀ ಆಗಬಹುದಾದ 17,581 ಪ್ರಕರಣ ಕೈಗೆತ್ತಿಕೊಳ್ಳಲಾಗಿತ್ತು. ಅಂದು ವಿವಿಧ ಪ್ರಕರಣ ಸೇರಿ ಸೇರಿ ಒಟ್ಟು 87,246 ಪ್ರಕರಣಗಳನ್ನು ರಾಜೀ ಸಂಧಾನ ಮಾಡಿಸಲಾಗಿದೆ.

ಇನ್ನೂ ಇದೇ ವರ್ಷ 2024 ಮಾರ್ಚ್ 16ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ 66,296 ಪೂರ್ವ ವಾಜ್ಯ ಪ್ರಕರಣಗಳನ್ನು ಬಗಹರಿಸಲಾಯಿತು. ನ್ಯಾಯಾಲಯದಲ್ಲಿ ಬಾಕಿ ಇದ್ದ ಪ್ರಕರಣಗಳ ಪೈಕಿ 13,284 ಪ್ರಕರಣಗಳನ್ನು ಇತ್ಯರ್ಥಗೊಂಡವು.
ಈ ಭಾರಿ ರಾಜೀಗೆ ಗುರುತಿಸಿದ ಪ್ರಕರಣಗಳು ಎಷ್ಟು?
ಮುಂದಿನ ಜುಲೈ 13 ರಂದು ಆಯೋಜಿಸಿರುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಮೇ 30 ರವರೆಗಿನ ಒಟ್ಟು 10,704 ಪ್ರಕರಣಗಳನ್ನು ರಾಜೀ ಮಾಡಿಸಲು ಗುರುತಿಸಲಾಗಿದೆ. ಈ ಕುರಿತು ಹೆಚ್ಚು ಪ್ರಚಾರ ಮಾಡಲು ಧಾರವಾಡ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರ ಸಲಹೆ, ಸೂಚನೆ, ಮಾರ್ಗದರ್ಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು, ಜಿಲ್ಲೆಯ ಎಲ್ಲ ಆಡಳಿತ ಮಂಡಳಿ ಕಾನೂನು ಬದ್ಧವಾಗಿ ಕರ್ತವ್ಯ ನಿರ್ವಹಿಸಲು ಸೂಕ್ತ ಮಾರ್ಗದರ್ಶನ ಹಾಗೂ ಸಲಹೆ ಸೂಚನೆಗಳನ್ನು ನೀಡಲಾಗುತ್ತಿದೆ ಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.
ಈ ನ್ಯಾಯ ಅದಾಲತ್ ನಲ್ಲಿ ಜಿಲ್ಲೆಯ ನ್ಯಾಯಾಲಯಗಳಲ್ಲಿ ಬಾಕಿ ಇರುವ ಸಿವಿಲ್ ದಾವೆಗಳು, ಚೆಕ್ ಬೌನ್ಸ್ ಕೇಸ್, ವಿವಾಹ ವಿಚ್ಛೇದನ ಹೊರತುಪಡಿಸಿ ಕೌಟುಂಬಿಕ ಪ್ರಕರಣಗಳು, ರಾಜಿ ಮಾಡಿಕೊಳ್ಳಬಹುದಾದ ಕ್ರಿಮಿನಲ್ ಪ್ರಕರಣಗಳು, ಎಲ್.ಎ.ಸಿ ಪ್ರಕಣಗಳು, ಅಪಘಾತ ಪರಿಹಾರ ಪ್ರಕರಣಗಳನ್ನು ರಾಜೀ ಸಂದಾನ ಮೂಲಕ ಇತ್ಯರ್ಥಪಡಿಸಲು ಪ್ರಕರಣಗಳ ಕಕ್ಷಿದಾರರು ಪಾಲ್ಗೊಳ್ಳಬಹುದಾಗಿದೆ.












Click it and Unblock the Notifications