ನಫೀಸಾ ಫಜಲ್, ಯಡಿಯೂರಪ್ಪ ವಿಧಾನ ಪರಿಷತ್ತಿಗೆ ಅವಿರೋಧ ಆಯ್ಕೆ
ಬೆಂಗಳೂರು : ವೈದ್ಯಕೀಯ ಶಿಕ್ಷಣ ಸಚಿವೆ ನಫೀಸಾ ಫಜಲ್, ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಒಟ್ಟು 11 ಸದಸ್ಯರು ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಾಟಾಳ್ ನಾಗರಾಜ್ ಅವರ ನಾಮಪತ್ರವನ್ನು ಶುಕ್ರವಾರ ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದರಿಂದ, ಕಣದಲ್ಲಿ ಉಳಿದ ಎಲ್ಲಾ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿತ್ತು . ನಾಮಪತ್ರ ವಾಪಸ್ಸು ಪಡೆಯುವ ಗಡುವು ಇಂದು(ಶನಿವಾರ) ಕೊನೆಗೊಂಡ ಕಾರಣ, ಕಾಂಗ್ರೆಸ್ಸಿನ 8, ಬಿಜೆಪಿಯ 2 ಮತ್ತು ಸಂಯುಕ್ತ ಜನತಾದಳದ ಓರ್ವ ಸದಸ್ಯರ ಆಯ್ಕೆಯನ್ನು ಚುನಾವಣಾಧಿಕಾರಿ ಎಚ್.ಸಿ. ರುದ್ರಪ್ಪ ಪ್ರಕಟಿಸಿದರು.
ಸಚಿವೆ ನಫೀಸಾ ಫಜಲ್, ರಾಜಶೇಖರನ್, ಮಾಜಿ ಸಂಸದ ಮಾರುತಿರಾವ್ ಮಾಲೆ, ಲೇಔಟ್ ಕೃಷ್ಣಪ್ಪ , ಕರಿಯಣ್ಣ ಸಂಗಟಿ, ವಿ.ಆರ್. ಸುದರ್ಶನ್, ವಿನ್ಫ್ರೆಡ್ ಡಿಸೋಜಾ ಮತ್ತು ಜಲಜಾ ನಾಯಕ್ ಕಾಂಗ್ರೆಸ್ ಪಕ್ಷದಿಂದ ಪರಿಷತ್ತಿಗೆ ಆಯ್ಕೆಯಾಗಿದ್ದಾರೆ. ಭಾರತೀಯ ಜನತಾ ಪಕ್ಷದಿಂದ ಬಿ.ಎಸ್. ಯಡಿಯೂರಪ್ಪ ಮತ್ತು ವಿಮಲಾ ಗೌಡ ಆಯ್ಕೆಯಾಗಿದ್ದರೆ, ಸಂಯುಕ್ತ ಜನತಾದಳದಿಂದ ಮಾಜಿ ಮಂತ್ರಿ ಎಂ.ಪಿ. ಪ್ರಕಾಶ್ ಚುನಾಯಿತರಾಗಿದ್ದಾರೆ.
ಹೊಸ ಸದಸ್ಯರ ಸೇರ್ಪಡೆಯಿಂದಾಗಿ ಪರಿಷತ್ತಿನಲ್ಲಿ ಪಕ್ಷಗಳ ಬಲಾಬಲ ಹೀಗಿದೆ : ಕಾಂಗ್ರೆಸ್- 22, ಜಾತ್ಯತೀತ ಜನತಾದಳ- 17, ಭಾರತೀಯ ಜನತಾ ಪಕ್ಷ - 12, ಸಂಯುಕ್ತ ಜನತಾದಳ- 7, ಮೂಲ ಜನತಾದಳ- 5, ಪ್ರತ್ಯೇಕ ಗುಂಪು-4, ಸ್ವತಂತ್ರರು- 3, ಅಧ್ಯಕ್ಷ- 1, ಖಾಲಿ ಸ್ಥಾನಗಳು - 4 . ಸದನದ ಒಟ್ಟು ಸ್ಥಾನಗಳ ಸಂಖ್ಯೆ 75.(ಯುಎನ್ಐ)
-
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Language Row: ಉತ್ತರ ಭಾರತದಲ್ಲಿ ಯಾಕೆ ತಮಿಳು - ಕನ್ನಡ ಇಲ್ಲ ಎಂದ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್












Click it and Unblock the Notifications