ಇನ್ನು ಮುಂದೆ ವಾರ್ನ್ ಉಪ ನಾಯಕ ಅಲ್ಲ
ಸಿಡ್ನಿ : ಲೆಗ್ಸ್ಪಿನ್ನರ್ ಶೇನ್ ವಾರ್ನ್ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಉಪ ನಾಯಕ ಪಟ್ಟ ಕಳೆದುಕೊಂಡಿದ್ದು, ವಿಕೆಟ್ ಕೀಪರ್ ಆ್ಯಡಮ್ ಗಿಲ್ಕ್ರಿಸ್ಟ್ ಈ ಜಾಗವನ್ನು ತುಂಬಲಿದ್ದಾರೆ.
ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಶುಕ್ರವಾರ ಈ ವಿಷಯವನ್ನು ಪ್ರಕಟಿಸಿದೆ. ಇತ್ತೀಚೆಗೆ ಬ್ರಿಟಿಷ್ ನರ್ಸ್ ಜೊತೆ ದೂರವಾಣಿಯಲ್ಲಿ ಲೈಂಗಿಕ ವಿಚಾರಗಳ ಕುರಿತು ತಾವು ಹರಟೆ ಹೊಡೆದಿದ್ದರೆಂಬುದನ್ನು ವಾರ್ನ್ ಒಪ್ಪಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ಉಪ ನಾಯಕ ಪಟ್ಟದಿಂದ ಕೊಕ್ ನೀಡಲಾಗಿದೆ. 'ಅವರ ಖಾಸಗಿ ಜೀವನದ ವರ್ತನೆಗಳಿಂದ ನಾವು ಬೇಸತ್ತಿದ್ದೇವೆ. ಆತ ಪ್ರಾಮಾಣಿಕ ನಿಜ. ಆದರೂ ಈ ಬದಲಾವಣೆ ಅನಿವಾರ್ಯವಾಗಿದೆ" ಎಂದು ಕ್ರಿಕೆಟ್ ಮಂಡಳಿ ಅಧಿಕಾರಿಗಳು ಅಭಿಪ್ರಾಯ ಪಟ್ಟಿದ್ದಾರೆ. ಕಳೆದ ವರ್ಷ ಮಾರ್ಕ್ ಟೇಲರ್ ನಿವೃತ್ತಿ ನಂತರ ನಾಯಕರಾಗಿ ಸ್ಟೀವ್ ವಾ, ಉಪ ನಾಯಕರಾಗಿ ವಾರ್ನ್ ಆಯ್ಕೆಯಾಗಿದ್ದರು. ವಾ ಅನುಪಸ್ಥಿತಿಯಲ್ಲಿ ಶೇನ್ ವಾರ್ನ್ ಕೆಲವು ಪಂದ್ಯಗಳ ನಾಯಕತ್ವವನ್ನೂ ವಹಿಸಿದ್ದರು. ಈ ಬೆಳವಣಿಗೆಯಿಂದ ವಾರ್ನ್ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕರಾಗುವ ಸಾಧ್ಯತೆ ಬಹುತೇಕ ಇಲ್ಲವಾಗಿದೆ.
-
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ












Click it and Unblock the Notifications