ಸರ್ಕಾರದ ಪ್ರತಿಕ್ರಿಯೆಯಾಂದಿಗೆ ನಕ್ಕೀರನ್ ದೂತ ಕಾಡಿಗೆ
ನ್ನೈ : ವೀರಪ್ಪನ್ ಬೇಡಿಕೆಗಳ ಬಗೆಗಿನಸರ್ಕಾರದ ಪ್ರತಿಕ್ರಿಯೆಯನ್ನು ನಕ್ಕೀರನ್ ಪತ್ರಿಕೆಯ ಬಳಗದ ದೂತನೊಬ್ಬ ವೀರಪ್ಪನ್‌ಗೆ ತಲುಪಿಸುತ್ತಾನೆ. ದೂತ ಭಾನುವಾರ ರಾತ್ರಿ ವೀರಪ್ಪನ್ ಅಡಗುದಾಣಕ್ಕೆ ತೆರಳುತ್ತಾನೆ. ಈ ವಿಷಯವನ್ನು ಬಾನುಲಿ ಮೂಲಕ ಬಿತ್ತರಿಸಲಾಗುವುದು ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಂ. ಕರುಣಾನಿಧಿ ತಿಳಿಸಿದ್ದಾರೆ.
ಭಾನುವಾರ ಮಧ್ಯಾಹ್ನ ಸುಮಾರು ಎರಡೂವರೆ ಗಂಟೆಗಳ ಕಾಲ ನಡೆದ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ವೀರಪ್ಪನ್ ಬೇಡಿಕೆಗಳು ತಮಿಳುನಾಡು ಬಗೆಗೆ ಅವನಿಗಿರುವ ಸಹಾನುಭೂತಿಯನ್ನು ಸ್ಪಷ್ಟಪಡಿಸುತ್ತದೆ. ಇದೇ ಸಹಾನುಭೂತಿಯನ್ನು ಕನ್ನಡಿಗರ ಬಗೆಗೂ ತೋರುತ್ತಾನೆನ್ನುವ ವಿಶ್ವಾಸವಿದೆ ಎಂದರು.
ಪ್ರಕರಣದ ವಿಷಯದಲ್ಲಿ ಸರ್ಕಾರ ಪಾರದರ್ಶಕವಾಗಿಲ್ಲ ಎನ್ನುವ ಸುದ್ದಿಗಾರರ ಪ್ರಶ್ನೆಗೆ, ಇಡೀ ಪ್ರಕರಣ ಕಾಡಿನಲ್ಲಿ ನಡೆಯುತ್ತಿರುವಾಗ ಪಾರದರ್ಶಕತೆ ಎಲ್ಲಿ ಸಾಧ್ಯ ? ಎಂದು ಕರುಣಾನಿಧಿ ಮರು ಪ್ರಶ್ನೆ ಹಾಕಿದರು. ಪ್ರಕರಣದಲ್ಲಿ ಉಭಯ ರಾಜ್ಯಗಳ ಜನತೆಯ ಹಿತಾಸಕ್ತಿ ಅಡಗಿರುವುದರಿಂದ ಮಾಧ್ಯಮಗಳು ಸಮಸ್ಯೆಯನ್ನು ಜಟಿಲಗೊಳಿಸದಂತೆ ಅವರು ಮನವಿ ಮಾಡಿಕೊಂಡರು.
ಬೆಂಗಳೂರಿನಲ್ಲಿ ಇನ್ನೂ 150 ಜನರ ಬಂಧನ : ಬೇಡಿಕೆಗಳನ್ನೊಳಗೊಂಡ ಕ್ಯಾಸೆಟ್ಟನ್ನು ವೀರಪ್ಪನ್ ಕಳುಹಿಸಿದ ನಂತರ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ ಎನ್ನುವ ವದಂತಿಗಳನ್ನು ನಗರ ಪೊಲೀಸ್ ಕಮೀಷನರ್ ಟಿ. ಮಡಿಯಾಳ್ ನಿರಾಕರಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಇನ್ನೂ 150 ಜನರನ್ನು ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆ 900 ಕ್ಕೆ ಏರಿದೆ. ನಗರದಲ್ಲಿ ಶಾಂತ ಪರಿಸ್ಥಿತಿ ಇದ್ದು , ಶಾಂತಿ ಕದಡುವಂತಹ ಯಾವ ಪ್ರಕರಣಗಳೂ ವರದಿಯಾಗಿಲ್ಲ ಎಂದು ಮಡಿಯಾಳ್ ತಿಳಿಸಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications