ಸ್ವಾತಿ ಮಳೆಯ ಅನುಭವ
ಬೆಂಗಳೂರು : ಮೈಸೂರಿನಲ್ಲಿ ಸಾಧಾರಣ ಮಳೆ, ಹಗಲು ಹಾಗೂ ರಾತ್ರಿಯ ಉಷ್ಣಾಂಶದಲ್ಲಿ ಏರಿಳಿತ, ನೈಋತ್ಯ ದಿಕ್ಕಿನಿಂದ ಬೀಸುವ ಮಾರುತ, ಉತ್ತರ ಒಳನಾಡಿನ ಕೆಲವೆಡೆ ಹಾಗೂ ದಕ್ಷಿಣ ಒಳನಾಡಿನ ನಾನಾಕಡೆ ಮಳೆ ಇದಿಷ್ಟು ಬುಧವಾರ ದೊರೆತ ಹವಾಮಾನದ ವಿದ್ಯಮಾನ.
ರಾಜ್ಯದಲ್ಲಿ ಅಲ್ಲಲ್ಲಿ ಮಳೆ ಆಗಿದೆ. ಉತ್ತರ ಒಳನಾಡಿನಲ್ಲಿ ಮುಂಗಾರು ಮತ್ತೆ ಚುರುಕಾಗಿದೆ. ಬೆಂಗಳೂರಿನಲ್ಲಿ ಮಂಗಳವಾರ ಬೆಳಗ್ಗಿನಿಂದಲೇ ಮಳೆ ಸುರಿದಿದೆ. ಬುಧವಾರವೂ ಮೋಡ ಮುಸುಕಿದ ವಾತಾವರಣ ಸಣ್ಣನೆಯ ಸೋನೆ ಮಳೆ. ಸ್ವಾತಿ ಮಳೆಯ ಅನುಭವ ರಾಜ್ಯದ ಜನತೆಗೆ ಆಗಿದೆ.
ಕರಾವಳಿಯಲ್ಲೂ ಮಳೆ ಆಗಿದೆ, ಆಗುತ್ತಿದೆ. ದಕ್ಷಿಣ ಒಳನಾಡಿನಲ್ಲೂ ಹಗುರದಿಂದ - ಭಾರಿ ಮಳೆ ಬಿದ್ದಿದೆ. ಧರ್ಮಸ್ಥಳದಲ್ಲಿ 7 ಸೆಂಟಿ ಮೀಟರ್, ಹೊನ್ನಾವರ, ಬೆಳ್ತಂಗಡಿ, ಬಾಗೇವಾಡಿಗಳಲ್ಲಿ 6, ಉಡುಪಿ, ಬಿಜಾಪುರ, ಕೊಪ್ಪಳದಲ್ಲಿ 5 ಸೆಂಟಿ ಮೀಟರ್, ಗೌರಿಬಿದನೂರಿನಲ್ಲಿ 4, ಕೋಟ , ಅಂಕೋಲ, ಕಾರವಾರ, ಮೂಡಿಗೆರೆ, ಮಂಗಳೂರು, ಹಾಗೂ ಕೊಪ್ಪದಲ್ಲಿ 3, ಮಂಗಳೂರು ವಿಮಾನ ನಿಲ್ದಾಣ, ಯಲಬುರ್ಗ, ಕಮ್ಮರಡಿಗಳಲ್ಲಿ ತಲಾ 2 ಹೀಗೆ ಮಳೆಯ ಪಟ್ಟಿ ದೊಡ್ಡದಾಗುತ್ತಾ ಸಾಗುತ್ತಿದೆ.
ಮುಂದಿನ 48 ಗಂಟೆಗಳ ಅವಧಿಯಲ್ಲಿ ಕೂಡ ರಾಜ್ಯದ ಅನೇಕ ಕಡೆಗಳಲ್ಲಿ ಮಳೆ ಬೀಳುತ್ತದೆ ಎನ್ನುತ್ತದೆ ಹವಾಮಾನ ಇಲಾಖೆ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಎಂದಿನಂತೆ ಮೋಡ ಕವಿದ ವಾತಾವರಣ ಇದ್ದು, ಬೆಳಗ್ಗಿನಿಂದಲೇ ತುಂತುರು ಮಳೆ ಆಗುವ ನಿರೀಕ್ಷೆ ಇದೆಯಂತೆ. ರೈನ್ ಕೋಟ್, ಕೊಡೆ ಎಲ್ಲ ರೆಡಿ ಮಾಡಿಕೊಳ್ಳಿ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications