ಅಪ್ಪಾಜಿ ಆದಷ್ಟು ಬೇಗ ಹಿಂತಿರುಗುತ್ತಾರೆ : ಶಿವರಾಜ್ ಕುಮಾರ್
ಬೆಂಗಳೂರು : ವೀರಪ್ಪನ್ ಅಪಹರಿಸಿರುವ ನಮ್ಮ ನಿಮ್ಮೆಲ್ಲರ ಪ್ರೀತಿಪಾತ್ರರಾದ ನಮ್ಮ ಅಪ್ಪಾಜಿ ಆದಷ್ಟು ಬೇಗ ಹಿಂತಿರುಗುತ್ತಾರೆ ಎಂದು ರಾಜ್ಕುಮಾರ್ ಅವರ ಪುತ್ರ ಶಿವರಾಜಕುಮಾರ್ ಶನಿವಾರ ಇಲ್ಲಿ ತಿಳಿಸಿದ್ದಾರೆ.
ರಾಜ್ಕುಮಾರ್ ಬಿಡುಗಡೆಗೆ ಒತ್ತಾಯಿಸಿ ಸದಾಶಿವನಗರದ ತಮ್ಮ ಮನೆಯ ಮುಂದೆ ಧರಣಿ ನಡೆಸುತ್ತಿರುವ ಕನ್ನಡ ಸಂಘಟನೆಗಳ ಕಾರ್ಯಕರ್ತರಿಗೆ ಶಿವರಾಜ್ಕುಮಾರ್ ಈ ಭರವಸೆ ನೀಡಿದ್ದಾರೆ. ಅಪ್ಪಾಜಿಯವರಿಗೆ ಯಾವುದೇ ರೀತಿಯ ಅಪಾಯ ಆಗುವುದಿಲ್ಲ, ಅವರು ಸುರಕ್ಷಿತವಾಗಿದ್ದಾರೆ ಹಾಗೂ ಆರೋಗ್ಯವಾಗಿದ್ದಾರೆ. ವೀರಪ್ಪನ್ ಅಪ್ಪಾಜಿಯವರನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾನೆ ಎಂದು ತಮಗೆ ಕಾಡಿನಿಂದ ಹಿಂತಿರುಗಿರುವ ಸಂಧಾನಕಾರ ಗೋಪಾಲ್ ತಿಳಿಸಿದರೆಂದು ಶಿವರಾಜ್ಕುಮಾರ್ ಹೇಳಿದ್ದಾರೆ.
ನಾವೆಲ್ಲ ಈಗ ತಾಳ್ಮೆಯಿಂದ ಇರಬೇಕು. ಅಪ್ಪಾಜಿಯವರೂ ನಮ್ಮೆಲ್ಲರಿಂದ ಬಯಸುವುದು ಶಾಂತಿಯನ್ನೇ. ಅವರಿಗೆ ನಮ್ಮೆಲ್ಲರ ಕ್ಷೇಮದ ಬಗ್ಗೆ ಕಾಳಜಿ ಇದೆ. ಅಪ್ಪಾಜಿಯವರ ಮನವಿಗೆ ನಾವೆಲ್ಲ ಗೌರವ ಕೊಡೋಣ, ದೇವರಿದ್ದಾನೆ ಅಪ್ಪಾಜಿ ಖಂಡಿತಾ ಸುರಕ್ಷಿತವಾಗಿ ಹಿಂತಿರುಗುತ್ತಾರೆ ಎಂದು ಶಿವರಾಜ್ಕುಮಾರ್ ಕಾರ್ಯಕರ್ತರಿಗೆ ಮನವಿ ಮಾಡಿಕೊಂಡರು.
ಈ ಮಧ್ಯೆ ಐಟಿಐ ಕನ್ನಡ ಸಂಘದ ಸದಸ್ಯರು ರಾಜ್ಕುಮಾರ್ ಅವರ ಬಿಡುಗಡೆಗೆ ಒತ್ತಾಯಿಸಿ ಶನಿವಾರ ಮಧ್ಯಾಹ್ನ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಧಿಕೃತ ನಿವಾಸದ ಎದುರು ಧರಣಿ ನಡೆಸಿದರು. ರಾಜ್ಯಾದ್ಯಂತ ನಾನಾ ಕಡೆ ರಾಜ್ಕುಮಾರ್ ಅವರ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆಗಳು ನಡೆದಿವೆ. ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯುತ್ತಲೇ ಇವೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications