ಎಫ್.ಎಂ. ರೇಡಿಯೋ ಕೇಂದ್ರ ಖಾಸಗೀಕರಣ : ವಾರ್ತಾ ಇಲಾಖೆಗೆ ಕೋರ್ಟ್ ನೋಟೀಸು
ಬೆಂಗಳೂರು : ದೇಶದಲ್ಲಿರುವ ಎಲ್ಲಾ ಎಫ್.ಎಂ. ಆಕಾಶವಾಣಿಗಳನ್ನು ಖಾಸಗಿ ಕಂಪೆನಿಗಳಿಗೆ ಹಸ್ತಾಂತರಿಸುವ ಕೇಂದ್ರದ ನಿಲುವನ್ನು ಅಕ್ಷೇಪಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಕೇಂದ್ರ ವಾರ್ತಾಮತ್ತು ಪ್ರಸಾರ ಇಲಾಖೆಗೆ ನೋಟೀಸ್ ಜಾರಿ ಮಾಡಿದೆ.
ಎಫ್. ಎಂ. ಆಕಾಶವಾಣಿ ಕೇಂದ್ರಗಳನ್ನು ಖಾಸಗಿಯವರಿಗೆ ಒಪ್ಪಿಸುವ ಕೇಂದ್ರ ಸರಕಾರದ ನಿರ್ಧಾರವನ್ನು ವಿರೋಧಿಸಿ ಬೆಂಗಳೂರು ನಿವಾಸಿ ಸಿ.ಎಲ್. ಮೋಹನ್ ಕುಮಾರ್ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಶೋಕ್ ಭಾನ್ ಮತ್ತು ನ್ಯಾಯಮೂರ್ತಿ ಗುರುರಾಜನ್ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠ , ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆಗೆ ಸೋಮವಾರದಂದು ನೋಟೀಸ್ ಜಾರಿ ಮಾಡಿದೆ.
ದೇಶದಲ್ಲಿ 40 ಎಫ್.ಎಂ. ಆಕಾಶವಾಣಿ ಕೇಂದ್ರಗಳಿವೆ. ಅವುಗಳನ್ನು ಖಾಸಗಿ ಆಡಳಿತಕ್ಕೆ ಒಳಪಡಿಸಬಾರದು. ಆಕಾಶವಾಣಿಗೆ ಸ್ವಾಯತ್ತತೆ ನೀಡುವಂತೆ 1995 ರಲ್ಲಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು. ಈಗ ಎಫ್.ಎಂ. ಆಕಾಶವಾಣಿ ಕೇಂದ್ರಗಳನ್ನು ಖಾಸಗಿಯವರಿಗೆ ಒಪ್ಪಿಸುವ ಕೇಂದ್ರದ ನಿರ್ಧಾರದಿಂದ ಸುಪ್ರೀಂ ಕೋರ್ಟ್ನ ಆದೇಶವನ್ನು ಸರ್ಕಾರ ಉಲ್ಲಂಘಿಸಿದಂತಾಗುತ್ತದೆ ಎಂದು ಮೋಹನ್ಕುಮಾರ್ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications