ಧಾರವಾಡ ಆಕಾಶವಾಣಿಯಲ್ಲೂ ಹುಸಿ ಬಾಂಬ್ ಬೆದರಿಕೆ
ಹುಬ್ಬಳ್ಳಿ : ಬೆಂಗಳೂರು, ವಾಡಿ ಹಾಗೂ ಹುಬ್ಬಳ್ಳಿಯಲ್ಲಿ ಬಾಂಬ್ ಎಂದರೇ ಜನ ಭಯಪಡುತ್ತಾರೆ. ಈ ಪ್ರದೇಶಗಳ ಚರ್ಚ್ಗಳಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಮೇಲಂತೂ ಎಲ್ಲರ ಮನದಲ್ಲೂ ಆತಂಕ ಮೂಡಿದೆ. ಮೊನ್ನೆಯಷ್ಟೇ ಬೆಂಗಳೂರಿನ ಕೆಲವು ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಹುಸಿ ದೂರವಾಣಿ ಕರೆಗಳು ಬೆಂಗಳೂರನ್ನು ತಲ್ಲಣಗೊಳಿಸಿ, ಶಾಲೆಗಳಿಗೆ ರಜೆ ಘೋಷಿಸುವಂತೆ ಮಾಡಿದವು.
ಈಗ ಧಾರವಾಡದ ಸರದಿ. ಗುರುವಾರ ಬೆಳಗ್ಗೆ ಧಾರವಾಡ ಆಕಾಶವಾಣಿ ಕೇಂದ್ರದಲ್ಲಿ ಬಾಂಬ್ ಇಡಲಾಗಿದೆ ಎಂಬ ಹುಸಿ ಬಾಂಬ್ ಕರೆ ಕೆಲ ಕಾಲ ಗಲಿಬಿಲಿ ಉಂಟು ಮಾಡಿತು. ಬೆಳಗ್ಗೆ 8 ಗಂಟೆಗೇ ಧಾರವಾಡ ಆಕಾಶವಾಣಿ ಕೇಂದ್ರಕ್ಕೆ ಬಂದ ಬಾಂಬ್ ಕರೆಯಿಂದ ಗಾಬರಿಗೊಂಡ ಆಕಾಶವಾಣಿಯ ಸಿಬ್ಬಂದಿ ತತ್ಕ್ಷಣವೇ ಪೊಲೀಸರಿಗೆ ವಿಷಯ ತಿಳಿಸಿದರು.
ಕಾರ್ಯ ಪ್ರವೃತ್ತರಾದ ಪೊಲೀಸರು ಬಾಂಬ್ ನಿಷ್ಕಿೃಯ ದಳದೊಂದಿಗೆ ಸ್ಥಳಕ್ಕೆ ಧಾವಿಸಿ ತಪಾಸಣೆ ನಡೆಸಿದರು. ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದು ತಪಾಸಣೆಯ ನಂತರ ತಿಳಿಯಿತು. ಕರೆ ಎಲ್ಲಿಂದ ಬಂತು ಎಂಬುದು ಮಾತ್ರ ಪತ್ತೆಯಾಗಲಿಲ್ಲ. ಆದರೆ, ಸಿಬ್ಬಂದಿ ಹಾಗೂ ಕಾರ್ಯಕ್ರಮ ನಿಮಿತ್ತ ಬಂದ ಕಲಾವಿದರು ಬಾಗಿಲಲ್ಲೇ ನಿಲ್ಲುವಂತಾಯಿತು.
ಮುಖಪುಟ / ಊರು ಕೇರಿ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications