ಬಸವನಬಾಗೇವಾಡಿಯಲ್ಲಿ ಚಾಲುಕ್ಯರ ಶಿಲಾಶಾಸನ ಪತ್ತೆ
ಶಿರಸಿ : ಬಿಜಾಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಚಬನೂರ್ನಲ್ಲಿ 11ನೇ ಶತಮಾನದ ಚಾಲುಕ್ಯರ ಕಾಲದ ಶಿಲಾಶಾಸನ ದೊರೆತಿದೆ ಎಂದು ಸಂಶೋದಕ ಡಾ. ಶುಭಾಷ್ ಚಿಂಚೋಳಿ ತಿಳಿಸಿದ್ದಾರೆ.
ಕಲ್ಲಿನ ಎರಡು ತುಂಡುಗಳಲ್ಲಿರುವ ಶಾಸನವನ್ನು ಚಬನೂರಿನ ಪಿಲಿಕವ್ವಾ ದೇವಸ್ಥಾನದ ಮೇಲ್ಚಾವಣಿಗೆ ಜೋಡಿಸಲಾಗಿದೆ. ಕರ್ನಾಟಕ ವಿಶ್ವವಿದ್ಯಾಲಯ ಹಮ್ಮಿಕೊಂಡಿದ್ದ ಸರ್ವೇಕ್ಷಣೆ ಸಮಯದಲ್ಲಿ ಈ ಶಿಲಾಶಾಸನ ಕಂಡುಬಂದಿದೆ. ಕ್ರಿ.ಶ. 960ರಲ್ಲಿ ಬಹುಧಾನ್ಯ ಸಂವತ್ಸರದ ಕಾರ್ತೀಕ ತ್ರಯೋದಶಿ, ಗುರುವಾರದಂದು ಸುಬ್ರಮಣ್ಯದ ತಮ್ಮಲ್ಕೇವಡದ ಹತ್ತಿರದ ಫಲವತ್ತಾದ ಭೂಮಿಯನ್ನು ಮನೋವಲ್ಲಬಭಾಯಿ ಅವರು ನೀಡಿದ್ದಾರೆಂದು ಈ ಶಾಸನ ತಿಳಿಸುತ್ತದೆ. ಆದರೆ ಈ ಭೂಮಿಯನ್ನು ಯಾರಿಗೆ ಏತಕ್ಕಾಗಿ ದಾನವಾಗಿ ನೀಡಲಾಗಿದೆ ಎಂಬ ಬಗ್ಗೆ ಯಾವುದೇ ಉಲ್ಲೇಖ ಇಲ್ಲ ಎಂದು ಅವರು ಹೇಳಿದ್ದಾರೆ.
27 ಸಾಲುಗಳಲ್ಲಿರುವ ಶಾಸನವನ್ನು ಒಂದೂವರೆ ಮೀಟರ್ ಎತ್ತರ ಹಾಗೂ 50 ಸೆಂಟೀಮೀಟರ್ ಅಗಲವಿರುವ ಕಲ್ಲಿನಲ್ಲಿ ಕೆತ್ತಲಾಗಿದೆ.
More From
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications