ರಾಜ್ಯದೆಲ್ಲೆಡೆ ಮಳೆಯ ಮುನ್ಸೂಚನೆ
ಬೆಂಗಳೂರು : ಒಳನಾಡಿನಲ್ಲಿ ಮುಂಗಾರು ದುರ್ಬಲವಾಗಿದೆ. ಕರಾವಳಿ ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆಗಳಲ್ಲಿ ಚದುರಿದಂತೆ ಮಳೆಯಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಕೋಟಾದಲ್ಲಿ 5 ಸೆಂಟಿ ಮೀಟರ್, ಬೆಳ್ತಂಗಡಿ, ಸುಬ್ರಹ್ಮಣ್ಯ, ಮೂಡಿಬಿದರೆ, ಕುಂದಾಪುರಗಳಲ್ಲಿ ತಲಾ 4 ಸೆಂಟಿ ಮೀಟರ್, ಬಾಗಮಂಡಲ, ಪುತ್ತೂರು, ಮಂಕಿ, ಶಿರಾಲಿಗಳಲ್ಲಿ ತಲಾ 3, ಬಂಟ್ವಾಳ, ಅಂಕೋಲ, ಶಿರಸಿ, ಬನವಾಸಿ, ಕಾರವಾರ, ಪಣಂಬೂರು, ಹಂಗಲ್, ಶಿರಾಳಕೊಪ್ಪಗಳಲ್ಲಿ ತಲಾ 2 ಸೆಂಟಿಮೀಟರ್ ಮಳೆ ಆಗಿದೆ. ಬೆಂಗಳೂರು ಹಾಗೂ ಸುತ್ತ ಮುತ್ತಲ ಪ್ರದೇಶದಲ್ಲಿ ಕೂಡ ಚದುರಿದಂತೆ ಹಗುರವಾಗಿ ಮಳೆ ಆಗಿದೆ.
ಭಾನುವಾರದವರೆಗಿನ ಮುನ್ಸೂಚನೆಯಂತೆ ಮಳೆ ಅಥವಾ ಗುಡುಗಿನಿಂದ ಕೂಡಿದ ಸುರಿ ಮಳೆ ಕರಾವಳಿಯಲ್ಲಿ ಬೀಳಲಿದೆ. ಒಳನಾಡಿನಲ್ಲೂ ಮಳೆಯ ನಿರೀಕ್ಷೆ ಇದೆ. ಕರಾವಳಿ ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಮಳೆ ಬೀಳುವ ಸಂಭವ ಇದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳೂ ಇದಕ್ಕೆ ಹೊರತಾಗಿಲ್ಲ. ಅಂದರೆ ರಾಜ್ಯದೆಲ್ಲೆಡೆ ಮಳೆಯಾಗುವ ಮುನ್ಸೂಚನೆ ದೊರೆತಂತಾಗಿದೆ.
ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣ ಇದ್ದು, ಒಂದೆರಡು ವರಸೆ ಮಳೆ ಆಗಲಿದೆ.
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್











Click it and Unblock the Notifications