ಟಾಡಾ ಮೊಕ-ದ್ದ-ಮೆ ಕೈಬಿಡಲು ಕೋರ್ಟ್ ಅಸ್ತು : ಸರ್ಕಾ-ರ-ಕ್ಕೆ ನಿರಾ-ಳ
ಮೈಸೂರು : ಮೈಸೂರು ಜೈಲಿನಲ್ಲಿರುವ ವಿರಪ್ಪನ್ ಸಹಚರರಾದ 51 ಟಾಡಾ ಆರೋಪಿಗಳ ವಿರುದ್ಧ ಹೂಡಲಾಗಿರುವ ಮೊಕದ್ದಮೆಗಳನ್ನು ಹಿಂತೆಗೆದುಕೊಳ್ಳಲು ಇಲ್ಲಿನ ಟಾಡಾ ವಿಶೇಷ ನ್ಯಾಯಾಲಯ ಶನಿ-ವಾ-ರ ಸರಕಾರಕ್ಕೆ ಅನುಮತಿ ನೀಡಿದೆ.
ಈ ಸಂಬಂಧ ನ್ಯಾಯಮೂರ್ತಿಗಳಾದ ರಾಜೇಂದ್ರ ಪ್ರಸಾದ್ ಅವರು 64 ಪುಟಗಳ ತೀರ್ಪು ನೀಡಿದ್ದು, ಟಾಡಾ ಕಾಯಿದೆಯ 3, 4 ಮತ್ತು 5 ನೇ ಸೆಕ್ಷನ್ ಅಡಿಯಲ್ಲಿ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅಶ್ವಿನ್ ಕುಮಾರ್ ಜೋಷಿ ಅವರಿಗೆ ಅನುಮತಿ ನೀಡಿದರು. ಮೊಕದ್ದಮೆಗಳನ್ನು ಕೈಬಿಡುವ ಸರ್ಕಾರದ ನಿರ್ಧಾರದ ವಿರುದ್ಧ ಮಂಡಿಸಲಾದ ತಕರಾರುಗಳನ್ನು ನ್ಯಾಯಮೂರ್ತಿಗಳು ಮಾನ್ಯ ಮಾಡಲಿಲ್ಲ. ವೀರಪ್ಪನ್ ಸಹಚರರಿಂದ ಹತರಾದ ಪೊಲೀಸ್ ಅಧಿಕಾರಿ ಶಖೀಲ್ ಅಹ್ಮದ್ ಅವರ ತಂದೆ ಖರೀಂ ಈ ತಕರಾರು ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿಗಳು ಮುಂದಿನ ವಿಚಾರಣೆಯನ್ನು ಆಗಸ್ಟ್ 21ಕ್ಕೆ ಮುಂದೂಡಿದ್ದಾರೆ.
ಈಗ ಆ ಮೊಕದ್ದಮೆಗಳು ಜಿಲ್ಲಾ ಮತ್ತು ಸೆಷನ್ಯ್ ನ್ಯಾಯಾಲಯದ ಮುಂದೆ ಬರಲಿದ್ದು, 51ಜನ ಟಾಡಾ ಆರೋಪಿಗಳ ಪರ ವಹಿಸಿರುವ ವಕೀಲರು ಅಲ್ಲಿ ಜಾಮೀನು ಅರ್ಜಿ ಸಲ್ಲಿಸಬಹುದಾಗಿದೆ. 7 ವರ್ಷಗಳಿಂದ ಟಾಡಾ ಮೊಕದ್ದಮೆಗಳನ್ನು ಎದುರಿಸುತ್ತಿರುವ ಈ 51 ಆರೋಪಿಗಳ ಬಿಡುಗಡೆ ಮಾಡಬೇಕೆಂಬುದು ವೀರಪ್ಪನ್‌ನ ಬೇಡಿಕೆಗಳಲ್ಲಿ ಒಂದಾಗಿದೆ.
ಉನ್ನ-ತ ಮಟ್ಟದ ಸಭೆ : 51 ಮಂದಿ ಆರೋಪಿಗಳ ವಿರುದ್ಧದ ಮೊಕದ್ದಮೆಗಳನ್ನು ಹಿಂತೆಗೆದುಕೊಳ್ಳಲು ಸರಕಾರಕ್ಕೆ ಟಾಡಾ ವಿಶೇಷ ನ್ಯಾಯಾಲಯ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಉನ್ನತ ಮಟ್ಟದ -ಸ-ಭೆ ಕರೆದು ಚರ್ಚಿಸಿದರು.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷ್ಣ , ವೀರಪ್ಪನ್ ವಿರುದ್ಧದ ಕಾರ್ಯಾಚರಣೆಯಲ್ಲಿ ಮಡಿದ ಇನ್ಸ್‌ಪೆಕ್ಟರ್ ಶಕೀಲ್ ಅಹ್ಮದ್ ಅವರ ತಂದೆ ಅಬ್ದುಲ್ ಖರೀಂ, ಟಾಡಾ ಆರೋಪಿಗಳ ಮೇಲಿನ ಮೊಕದ್ದಮೆ ಕೈಬಿಡುವ ಸರ್ಕಾರದ ನಿರ್ಧಾರದ ವಿರುದ್ಧ ತಕರಾರು ಅರ್ಜಿ ಸಲ್ಲಿಸಿದ್ದರಿಂದ ಆರೋಪಿಗಳಿಗೆ ಜಾಮೀನು ದೊರಕುವುದು ತಡವಾಗಿದೆ ಎಂದರು. ಪ್ರಸ್ತುತ, ನಕ್ಕೀರನ್ ಗೋಪಾಲ್ ಮತ್ತು ವೀರಪ್ಪನ್ ನಡುವಿನ ಮಾತುಕತೆಗಳ ಬೆಳವಣಿಗೆಯ ಕುರಿತು ತಮಿಳುನಾಡಿನಿಂದ ಮಾಹಿ-ತಿಗಾಗಿ ಸರಕಾರ ಕಾಯುತ್ತಿದೆ. ಜಪಾನ್ ಪ್ರಧಾನಿ ಯೋಷಿರೋ ಮೋರಿ ಆಗಸ್ಟ್ 21ರಂದು ಎರಡು ದಿನಗಳ ಅಧಿಕೃತ ಭೇಟಿಗಾಗಿ ಬೆಂಗಳೂರಿಗೆ ಆಗಮಿಸಲಿದ್ದು , ರಾಜ್ ಅಪಹರಣ ಈ ಭೇಟಿಯ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.
(ಯುಎ-ನ್-ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications