ಚಂಬಲ್ ಕಣಿವೆಯಲ್ಲಿ ಅಡಗಿದ್ದ ಅಪಹರಣಕಾರನ ಬಂಧನ
ಬೆಂಗಳೂರು : ಬೆಂಗಳೂರಿನಲ್ಲಿ ಮೂರು ವರ್ಷದ ಮಗುವೊಂದನ್ನು ಅಪಹರಿಸಿ, ಚಂಬಲ್ ಕಣಿವೆಯಲ್ಲಿ ಅಡಗಿಕುಳಿತಿದ್ದ ಅಪಹರಣಕಾರನೊಬ್ಬನನ್ನು ಬಂಧಿಸಿ ಪೊಲೀಸರು ಶುಕ್ರವಾರ ನಗರಕ್ಕೆ ಕರೆತಂದಿದ್ದಾರೆ.
ಪ್ರಹ್ಲಾದ್ ಅಲಿಯಾಸ್ ಪೆಲ್ಲಾದ್ ಎಂಬುವಾತನೆ ಬಂಧಿತ ಆರೋಪಿ. ಈತ ಜನವರಿ 24ರಂದು ಮನೆಯ ಮುಂದೆ ಆಟವಾಡುತ್ತಿದ್ದ ಮಗುವನ್ನು ಅಪಹರಿಸಿ, ಜನವರಿ 29ರಂದು ಮಗುವನ್ನು ಬಿಡಲು 3 ಲಕ್ಷ ರುಪಾಯಿಗಳ ಬೇಡಿಕೆ ಇಟ್ಟಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
ಮಗುವಿನ ತಂದೆ ಕಲ್ಯಾಣ್ ಎಂಬುವವರು ನೀಡಿದ ದೂರಿನ ಮೇರೆಗೆ ಕಾರ್ಯ ಪ್ರವೃತ್ತರಾದ ನಗರ ಪೊಲೀಸರು ವಿಶೇಷ ತಂಡವೊಂದನ್ನು ರಚಿಸಿ, ಅಪಹರಣಕಾರನ ಶೋಧದಲ್ಲಿ ತೊಡಗಿದರು. ಹಲವು ಬಾರಿ ಆರೋಪಿಯ ಊರಾದ ಮಧ್ಯಪ್ರದೇಶದ ಗೋಪಾಲಪುರಕ್ಕೆ ಹೋಗಿ ಬಂದ ಪೊಲೀಸರು ಅಂತಿಮವಾಗಿ ಚಂಬಲ್ ಕಣಿವೆಯಲ್ಲಿ ಅಡಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದರು.
ಮಗುವನ್ನು ಅಪಹರಿಸಿದ್ದ ಆರೋಪಿ ಪ್ರಹ್ಲಾದನ ತಂದೆ ಫೆಬ್ರವರಿ 17ರಂದೇ ಮಗುವನ್ನು ಅದರ ಪಾಲಕರಿಗೆ ತಂದೊಪ್ಪಿಸಿದ್ದರು. ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications