ಸಾಹಿತಿ, ಶಿಕ್ಷಣತಜ್ಞ ಕು.ಶಿ. ಹರಿದಾಸ ಭಟ್ಟ ಇನ್ನಿಲ್ಲ
ನಮ್ಮ ಪ್ರತಿ-ನಿ-ಧಿ-ಯಿಂ-ದ
ಉಡುಪಿ : ಶಿಕ್ಷಣತಜ್ಞ ಹಾಗೂ ಸಾಹಿತಿ ಪ್ರೊ. ಕು.ಶಿ. ಹರಿದಾಸ ಭಟ್ಟ ಭಾನುವಾರ ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.
76 ವರ್ಷದ ಹರಿದಾಸ ಭಟ್ಟ ಪತ್ನಿ, ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ದಿವಂಗತರಿಗೆ ಸಾಹಿತ್ಯ ಹಾಗೂ ಸಂಸ್ಕೃತಿ ಕ್ಷೇತ್ರದಲ್ಲಿ ವಿವಿಧ ಪ್ರಶಸ್ತಿಗಳು ಸಂದಿವೆ. 1982ರ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 1985ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, 86ರಲ್ಲಿ ಫಿನ್ಲ್ಯಾಂಡ್ಪ್ರಶಸ್ತಿ ಹಾಗೂ 1989ರಲ್ಲಿ ಪ್ರತಿಷ್ಠಿತ ವಿಶ್ವ ಮಾನವ ಪ್ರಶಸ್ತಿ ಇವರಿಗೆ ಲಭಿಸಿತ್ತು.
ಯಕ್ಷಗಾನ ಕಲೆಯನ್ನು ಕಡಲಾಚೆಯಲ್ಲೂ ಹರಡಲು ಇವರು ರಷ್ಯಾ, ಜರ್ಮನಿ, ಬ್ರಿಟನ್ ಹಾಗೂ ಅಮೆರಿಕೆಗಳಿಗೆ ಭಾರತದ ಸಾಂಸ್ಕೃತಿಕ ಪ್ರತಿನಿಧಿಯಾಗಿ ಪ್ರವಾಸ ಮಾಡಿದ್ದರು. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳೆರಡರಲ್ಲಿಯೂ ಇವರು ಕೃತಿಗಳನ್ನು ರಚಿಸಿದ್ದಾರೆ.
ಸಂತಾಪ : ಶಾಸಕ ಯು.ಆರ್.ಸಭಾಪತಿ, ವಿಧಾನ ಪರಿಷತ್ ಸದಸ್ಯ ಡಾ. ವಿ.ಎಸ್. ಆಚಾರ್ಯ, ಶಿಕ್ಷಣ ಅಕಾಡೆಮಿಯ ರಿಜಿಸ್ಟ್ರಾರ್ ಕೆ.ಕೆ.ಪೈ ಹಾಗೂ ಪರ್ಯಾಯ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಗಣ್ಯರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications