51ಟಾಡಾ ಬಂಧಿ-ಗ-ಳಲ್ಲಿ 26 ಜನರ ವಿರುದ್ಧದ ಪ್ರಕರಣಗಳ ವಜಾ
ಬೆಂಗಳೂರು: - ಮೈಸೂರಿನ ಕೇಂದ್ರ ಕಾರಾ-ಗೃ-ಹ-ದ-ಲ್ಲಿ-ರು-ವ 51 ಟಾಡಾ ಬಂಧಿ-ಗ-ಳ-ಲ್ಲಿ ಕೇವಲ 26 ಮಂದಿಯ ವಿರುದ್ಧದ ಟಾಡಾ ಪ್ರಕರಣಗಳನ್ನು ಮಾತ್ರ ನ್ಯಾಯಾಲಯ ಸೋಮವಾರ ಕೈಬಿಟ್ಟಿದೆ.
ಟಾಡಾ ಮೊಕದ್ದಮೆಯನ್ನು ಕೈಬಿಡಲಾದವರ ಜಾಮೀ-ನು ಅರ್ಜಿ-ಗ-ಳ-ನ್ನು ಅಂಗೀ-ಕ-ರಿ-ಸಿ-ರುವ ಸೆಷ-ನ್ಸ್ ನ್ಯಾಯಾ-ಲ-ಯ-ದ ನ್ಯಾಯ-ಮೂ-ರ್ತಿ -ರಾ-ಜೇಂ-ದ್ರ ಪ್ರಸಾ-ದ್, ವಿಚಾ-ರ-ಣೆ-ಯ-ನ್ನು ಆಗ-ಸ್ಟ್ 24 ಕ್ಕೆ ಮುಂದೂ-ಡಿ-ದ್ದಾ-ರೆ.
ಸುದ್ದಿಗಾರರಿಗೆ ಈ ವಿಷಯ ತಿಳಿಸಿರುವ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ, ಆರೋಪಿಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಒಂದಕ್ಕೊಂದು ಸಂಬಂಧ ಇರುವುದರಿಂದ ಒಂದೇ ಪೀಠ ವಾದಗಳನ್ನು ಆಲಿಸಬೇಕಾಗಿದೆ. ಹಾಗಾಗಿ ಸೋಮವಾರವೇ 51 ಆರೋಪಿಗಳ ಪ್ರಕರಣಗಳನ್ನು ಪರಿಶೀಲಿಸಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದ್ದ್ದಾರೆ.
ರಾಜ್ಯ ಸರಕಾರ ಈಗಾಗಲೇ ಸ್ಪಷ್ಟಪಡಿಸಿರುವಂತೆ ಆರೋಪಿಗಳ ಮೇಲಿನ ಜಾಮೀನು ಅರ್ಜಿಗಳನ್ನು ಸರಕಾರ ವಿರೋಧಿಸುವುದಿಲ್ಲ. ಮುಖ್ಯಮಂತ್ರಿಗಳ ನೇತೃತ್ವದ ಉನ್ನತ ಮಟ್ಟದ ಬಿಕ್ಕಟ್ಟು ನಿವಾರಣಾ ಸಮಿತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.
ಸಂಧಾನಕ್ಕಾಗಿ ಎರಡನೇ ಬಾರಿಗೆ ಕಾಡಿಗೆ ಹೋಗಿರುವ ಸಂಧಾನಕಾರ ಗೋಪಾಲ್ ಅವರಿಂದ ಈವರೆಗೂ ಯಾವುದೇ ಸಂದೇಶ ಬಂದಿಲ್ಲ. ಆರೋಪಿಗಳ ವಿರುದ್ಧದ ಟಾಡಾ ಪ್ರಕರಣಗಳನ್ನು ಕೈಬಿಡಬಾರದೆಂದು ಸೆಷನ್ಸ್ ನ್ಯಾಯಾಲಯದ ತೀರ್ಪಿನ ವಿರುದ್ಧ ಹೈಕೋರ್ಟ್‌ನಲ್ಲಿ , ಅಬ್ದುಲ್ ಕರೀಂ ಅವರು ಮೇಲ್ಮನವಿ ಸಲ್ಲಿಸಿರುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಈಗಾಗಲೇ ಕೇವಿಯಟ್ ಅರ್ಜಿ ಸಲ್ಲಿಸಿದೆ ಎಂದು ಖರ್ಗೆ ತಿಳಿಸಿದ್ದಾರೆ.
(ಯುಎ-ನ್-ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications