For Daily Alerts
ಚಿತ್ರದುರ್ಗ ಬೃಹ-ನ್ಮ-ಠದಲ್ಲಿ ಶರಣ ಸಂಸ್ಕೃತಿ ಉತ್ಸವ
ಚಿತ್ರದುರ್ಗ : ಇಲ್ಲಿನ ಮುರುಘರಾಜೇಂದ್ರ ಬೃಹನ್ಮಠದ ಆಶ್ರಯದಲ್ಲಿ ಅಕ್ಟೋಬರ್ 3ರಿಂದ 9ರವರೆಗೆ ಶರಣ ಸಂಸ್ಕೃತಿ ಉತ್ಸವ ನಡೆಯಲಿದೆ ಎಂದು ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.
ಅವರು ಸೋಮವಾರ, ಉತ್ಸವದ ಹಿನ್ನೆಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಉತ್ಸವದ ಉದ್ಘಾಟನೆಗೆ ರಾಜ್ಯಪಾಲೆ ವಿ.ಎಸ್. ರಮಾದೇವಿಯವರನ್ನು ಆಹ್ವಾನಿಸಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಉತ್ಸವದ ಅಂಗವಾಗಿ, ವಚನ ಕಮ್ಮಟ, ಬಸವ ಕೇಂದ್ರ ಪದಾಧಿಕಾರಿಗಳ ಸಮಾವೇಶ, ಜನಜಾಗೃತಿ ಪಾದಯಾತ್ರೆ ಮತ್ತು ಸಸಿ ನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸ್ವಾಮೀಜಿ ತಿಳಿಸಿದರು.