ಇಂದು ಕೇಂದ್ರ ಹಜ್ ಸಮಿತಿ ವಾರ್ಷಿಕ ಸಭೆ
ನವದೆಹಲಿ : ಕೇಂದ್ರ ಹಜ್ ಸಮಿತಿಯ ವಾರ್ಷಿಕ ಸಭೆಯನ್ನು ರಾಜ್ಯ ವಿದೇಶಾಂಗ ವ್ಯವಹಾರಗಳ ಕೇಂದ್ರ ಸಚಿವ ಅಜಿತ್ ಕುಮಾರ್ ಪಾಂಜಾ ಮಂಗಳವಾರ ಉದ್ಘಾಟಿಸಲಿದ್ದಾರೆ.
ಎಲ್ಲಾ ರಾಜ್ಯಗಳ ಹಜ್ ಸಮಿತಿ ಅಧ್ಯಕ್ಷರು, 14 ಸಚಿವರು ಹಾಗೂ ಅವರ ಕಾರ್ಯದರ್ಶಿಗಳು ಸಭೆಯಲ್ಲಿ ಭಾಗವಹಿಸಲಿದ್ದು, ಈ ವರ್ಷದ ಹಜ್ ವರದಿ ಕುರಿತು ಚರ್ಚಿಸಲಾಗುವುದು ಎಂದು ಸಮಿತಿಯ ವಕ್ತಾರರು ಸೋಮವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಈ ವರ್ಷದ ಹಜ್ ಯಾತ್ರಿಗಳಿಂದ ಬಂದಿರುವ ದೂರುಗಳನ್ನು ಸಭೆಯಲ್ಲಿ ಕೇಂದ್ರ ಸಮಿತಿಯ ಗಮನಕ್ಕೆ ತರಲಾಗುವುದು. ಇದರಿಂದ ಮುಂದಿನ ವರ್ಷ ಈ ತೊಂದರೆಗಳನ್ನು ನಿವಾರಿಸುವುದರ ಕಡೆ ಗಮನ ಹರಿಸಲು ಸಾಧ್ಯವಾಗುತ್ತದೆ ಎಂದು ದೆಹಲಿ ರಾಜ್ಯ ಹಜ್ ಸಮಿತಿ ಅಧ್ಯಕ್ಷ ಏನಿಸ್ ದುರಾನಿ ಹೇಳಿದರು.
ಸೌದಿ ಅರೇಬಿಯಾದ ಭಾರತದ ರಾಯಭಾರಿ ತಲ್ಮಿಜ್ ಅಹ್ಮದ್ ಸಹ ಸಭೆಯಲ್ಲಿ ಭಾಗವಹಿಸಲಿದ್ದು, ಅವರ ಜತೆಯಲ್ಲಿ ಭಾರತದಲ್ಲಿನ ಸೌದಿ ಅರೇಬಿಯಾ ರಾಯಭಾರಿಯೂ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಸಭೆ ಈ ತಿಂಗಳ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿತ್ತು. ಡಾ. ರಾಜ್‌ಕುಮಾರ್ ಅಪಹರಣದಿಂದಾಗಿ ಶಾಂತಿ ಮತ್ತು ಸುವ್ಯವಸ್ಥೆಯಲ್ಲಿ ಏರುಪೇರಾದ ಕಾರಣ ಸಭೆಯನ್ನು ದೆಹಲಿಯಲ್ಲಿ ನಡೆಸಲು ತೀರ್ಮಾನಿಸಲಾಯಿತು.
ಜೂನ್ ತಿಂಗಳಲ್ಲಿ ಕೇಂದ್ರ ಹಜ್ ಸಮಿತಿಯ ನೂತನ ಅಧ್ಯಕ್ಷರಾಗಿ ತನ್ವೀರ್ ಅಹ್ಮದ್ ಆಯ್ಕೆಯಾದ ನಂತರದ ಮೊದಲ ಹಜ್ ಸಭೆ ಇದಾಗಿದೆ. ಸುಮಾರು 1,18000 ಭಾರತೀಯ ಮುಸ್ಲಿಮರು ಈ ವರ್ಷ ಹಜ್ ಯಾತ್ರೆ ಕೈಗೊಂ-ಡಿ-ದ್ದು, ಇಂಡೋನೇಷಿಯಾ ಬಿಟ್ಟರೆ ಅತಿ ಹೆಚ್ಚು ಮಂದಿ ಭಾರತದವರೇ ಆಗಿದ್ದರು. ಹಜ್ ಯಾತ್ರೆ ಕೈಗೊಂಡ 72 ಸಾವಿರ ಭಾರತೀಯರಿಗೆ ಸಬ್ಸಿಡಿ ದರದಲ್ಲಿ ಏರ್ ಟಿಕೆಟ್ ನೀಡಲಾಗಿದ್ದು, ಇದಕ್ಕಾಗಿ ಸರ್ಕಾರ 110 ಕೋಟಿ ಖರ್ಚು ಮಾಡಿದೆ. ಹಜ್ ಯಾತ್ರೆಗೆ ಈ ರೀತಿ ರಿಯಾಯಿತಿ ದರದಲ್ಲಿ ಏರ್ ಟಿಕೆಟ್ ಸೌಲಭ್ಯ ಕಲ್ಪಿಸುವ ಏಕ ಮಾತ್ರ ರಾಷ್ಟ್ರ ಭಾರತವಾಗಿದೆ.
(ಐಎಎನ್‌ಎಸ್)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications