ವಾಸ್ತುವಿಗಾಗಿ ಸರಕಾರಿ ಹಣ ಖರ್ಚು ಮಾಡಿದ ಮುಖ್ಯಮಂತ್ರಿಗೆ ನೋಟೀಸ್
ಬೆಂಗಳೂರು : ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಅನುಗ್ರಹ’ದ ವಾಸ್ತು ಸರಿಪ-ಡಿ-ಸ-ಲು ಸರಕಾರದ ಬೊಕ್ಕಸದಿಂದ ಕೋಟ್ಯಂತರ ರೂಪಾಯಿ ಖರ್ಚು ಮಾಡಿದ್ದಾರೆಂದು ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಗೆ ನೋಟೀಸ್ ಜಾರಿ ಮಾಡಿದೆ.
ಸರಕಾರದ ಹಣವನ್ನು ವಾಸ್ತು ಹೆಸರಿನಲ್ಲಿ ಅವೈಜ್ಞಾನಿಕವಾಗಿ ಖರ್ಚು ಮಾಡಿರುವುದನ್ನು ಪ್ರಶ್ನಿಸಿ, ಬೆಂಗಳೂರಿನ ಜಿ.ಕೆ. ಗೋವಿಂದರಾವ್ ಮತ್ತು ದೊರೆ ಸ್ವಾಮಿ ಅವರು ಸಲ್ಲಿಸಿದ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯ ಮೂರ್ತಿ ಅಶೋಕ್ ಭಾನ್ ಮತ್ತು ನ್ಯಾಯಮೂರ್ತಿ ಗುರುರಾಜನ್ ಅವರನ್ನೊಳಗೊಂಡ ವಿಭಾಗೀಯ ಪೀಠ ಸೋಮವಾರ ವಿಚಾರಣೆಗೆ ಅಂಗೀಕರಿಸಿತು. ಕೋರ್ಟ್ , ಈ ಅರ್ಜಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಮುಖ್ಯಕಾರ್ಯದರ್ಶಿ, ಲೋಕೋಪಯೋಗಿ ಹಾಗೂ ವಾರ್ತಾ ಮತ್ತು ಪ್ರಚಾರ ಇಲಾಖೆ ಕಾರ್ಯದರ್ಶಿಗಳನ್ನು ಪ್ರತಿವಾದಿಗಳೆಂದು ಗುರುತಿಸಿದೆ.
ಅನುಗ್ರಹದ ವಾಸ್ತು ವಿನ್ಯಾಸವನ್ನು ಮುಖ್ಯ ಮಂತ್ರಿಗಳ ಆಸಕ್ತಿಗನುಗುಣವಾಗಿ ಬದಲಾಯಿಸಲಾಗಿದೆ. ಪ್ರತಿವಾದಿಗಳು ಪೂರ್ವಾಪರವಿಲ್ಲದೆ ಈ ನಿವಾಸದ ವಾಸ್ತು ಬದಲಾವಣೆಗಾಗಿ ಕಳೆದ ಹತ್ತು ವರ್ಷಗಳಲ್ಲಿ ಸುಮಾರು 1.2 ಕೋಟಿ ರೂಪಾಯಿಗಳನ್ನು ಅವೈಜ್ಞಾನಿಕವಾಗಿ ಖರ್ಚು ಮಾಡಿದ್ದಾರೆ, ವಾಸ್ತು ಹೆಸರಿನಲ್ಲಿ ಈ ವರೆಗೆ ಖರ್ಚಾದ ಹಣದ ಲೆಕ್ಕಪತ್ರವನ್ನು ಕೋರ್ಟ್ ಮುಂದೆ ಹಾಜರು ಪಡಿಸಬೇಕು ಎಂದು ಅರ್ಜಿದಾರರು ತಮ್ಮ ಅರ್ಜಿಯಲ್ಲಿ ತಿಳಿ ಸಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications