ದ.ಒಳನಾಡಿನಲ್ಲಿ ತೀವ್ರಗೊಂಡ ಮುಂಗಾರು
ಬೆಂಗಳೂರು : ಕಳೆದ 24 ಗಂಟೆಗಳ ಅವಧಿಯಲ್ಲಿ ಮುಂಗಾರು ದಕ್ಷಿಣ ಒಳನಾಡಿನಲ್ಲಿ ತೀವ್ರಗೊಂಡಿದೆ. ಕರಾವಳಿ ಪ್ರದೇಶದಲ್ಲಿ ಚುರುಕಾಗಿದೆ. ಮಳೆಯ ಅಟ್ಟಹಾಸ ಮತ್ತೆ ಹೆಚ್ಚಿದೆ. ಮೋಡಗಳ ಸಂಘರ್ಷದಿಂದ ಗುಡುಗಿನ ಆರ್ಭಟವೂ ಮೊರೆಯುತ್ತಿದೆ. ಬಾನಿನಲ್ಲಿ ಕೋಲ್ಮಿಂಚು ಕಾಣಿಸಿಕೊಳ್ಳುತ್ತಿದೆ.
ಉತ್ತರ ಒಳನಾಡಿನ ಕೆಲವೆಡೆಯೂ ಮಳೆ ಆಗಿದೆ. ತೀರ್ಥಹಳ್ಳಿಯಲ್ಲಿ 18, ತಾಳಗುಪ್ಪದಲ್ಲಿ 17, ಕಳಸದಲ್ಲಿ 14, ಕಮ್ಮರಡಿಯಲ್ಲಿ 13 ಸೆಂಟಿ ಮೀಟರ್ಗಳಷ್ಟು ಭಾರಿ ಮಳೆ ಆಗಿದೆ. ಕೆರೆ, ಕಟ್ಟೆ, ಹಳ್ಳ - ಕೊಳ್ಳಗಳು ತುಂಬಿ ಹರಿಯುತ್ತಿವೆ. ತಗ್ಗು ಪ್ರದೇಶವೆಲ್ಲಾ ಜಲಾವೃತವಾಗಿದೆ. ಕೊಪ್ಪ, ಶೃಂಗೇರಿಗಳಲ್ಲಿ 11 ಸೆಂಟಿ ಮೀಟರ್, ಸುಬ್ರಹ್ಮಣ್ಯದಲ್ಲಿ 10, ಮಡಿಕೇರಿ, ಸೋಮವಾರಪೇಟೆಗಳಲ್ಲಿ 8 ಸೆಂಟಿ ಮೀಟರ್, ಸಿದ್ದಾಪರದಲ್ಲಿ 7, ಮಂಕಿ, ಬಾಳೆಹೊನ್ನೂರು, ವೀರರಾಜಪೇಟೆಗಳಲ್ಲಿ ತಲಾ 6, ಆನಂದಾಪುರ, ಕುಮಟಾಗಳಲ್ಲಿ 5, ಪೊನ್ನಂಪೇಟೆ ಮತ್ತಿತರ ಕಡೆಗಳಲ್ಲಿ 4 ಸೆಂಟಿ ಮೀಟರ್ ಮಳೆ ಬಿದ್ದಿದೆ.
ಮುಂದಿನ 48 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಅನೇಕ ಕಡೆಗಳಲ್ಲಿ ಮಳೆ ಅಥವಾ ಭಾರಿ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ. ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆಗಳೇನೂ ಕಂಡುಬರುವುದಿಲ್ಲ. ಸ್ಥಳೀಯ ಹವಾಮಾನದಂತೆ ಬೆಂಗಳೂರು ಹಾಗೂ ಸುತ್ತ ಮುತ್ತಲ ಪ್ರದೇಶಗಳಲ್ಲಿ ಹೆಚ್ಚಾಗಿ ಮೋಡ ಮುಸುಕಿದ ವಾತಾವರಣ ಇದ್ದು, ಒಂದೆರಡು ಬಾರಿ ಮಳೆ ಬೀಳುವ ನಿರೀಕ್ಷೆ ಇದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications