3ನೇ ಸುತ್ತಿನ ಸಂಧಾನಕ್ಕೆ 28 ರಂದು ಗೋಪಾಲ್ ಮತ್ತೆ ಕಾಡಿಗೆ
ಚೆನ್ನೈ : ಎರಡನೇ ಸುತ್ತಿನ ಸಂಧಾನ ಮುಗಿಸಿ ಕಾಡಿನಿಂದ ಮರಳಿದ ಸಂಧಾನಕಾರ ಗೋಪಾಲ್ ಮತ್ತೆ ಸೋಮವಾರ ಮೂರನೇ ಸುತ್ತಿನ ಮಾತುಕತೆಗಾಗಿ ತೆರಳುತ್ತಿದ್ದಾರೆ ಎಂದು ತಮಿಳುನಾಡಿನ ಮುಖ್ಯಮಂತ್ರಿ ಕರುಣಾನಿಧಿ ತಿಳಿಸಿದ್ದಾರೆ.
ರಾಜ್‌ಕುಮಾರ್ ಬಿಡುಗಡೆ ಸಂಬಂಧ ವೀರಪ್ಪನ್ ಅಡಗುತಾಣದಿಂದ ಗುರುವಾರ ಹಿಂತಿರುಗಿದ ಗೋಪಾಲ್ ಅವರು ತಂದಿರುವ ಎರಡು ವಿಡಿಯೋ ಕ್ಯಾಸೆಟ್ ಹಾಗೂ ಒಂದು ಆಡಿಯೋ ಕ್ಯಾಸೆಟ್‌ನಲ್ಲಿರುವ ವಿಷಯಗಳ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಕರುಣಾನಿಧಿ ಈ ವಿಷಯ ತಿಳಿಸಿದರು.
ಇದಕ್ಕೂ ಮುನ್ನ ಇಂದು ಬೆಳಗ್ಗೆ ಚೆನ್ನೈತಲುಪಿದ ಕೃಷ್ಣ ಅವರು ನೇರವಾಗಿ ಕರುಣಾನಿಧಿ ಅವರ ಕಚೇರಿಗೆ ತೆರಳಿದರು. ಕೃಷ್ಣ ಅವರೊಂದಿಗೆ ರಾಜ್ಯ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಮುಖ್ಯಕಾರ್ಯದರ್ಶಿ ಭಟ್ಟಾಚಾರ್ಯ ಹಾಗೂ ಇನ್ನಿತರ ಉನ್ನತ ಅಧಿಕಾರಿಗಳು ಇದ್ದು, ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಿದರು.
ಪತ್ರಕರ್ತರೊಂದಿಗೆ ಮಾತನಾಡಿದ ಕರುಣಾನಿಧಿ ಅವರು, ಮೈಸೂರು ನ್ಯಾಯಾಲಯದ ಮುಂದೆ ವೀರಪ್ಪನ್ ಸಹಚರರ ಜಾಮೀನು ಅರ್ಜಿ ಸೋಮವಾರ ಬರಲಿದ್ದು, ಯಾವುದೇ ತೊಂದರೆ ಆಗುವ ಸಾಧ್ಯತೆ ಇಲ್ಲ. ಆದರೆ, ತಮಿಳುನಾಡಿನ ಸೆರೆಮನೆಯಲ್ಲಿರುವ ಐವರು ಉಗ್ರರ ಬಿಡುಗಡೆಗೆ ಕಾನೂನಿನ ತೊಡಕುಗಳಿರುವುದರಿಂದ ವಿಳಂಬವಾಗುತ್ತಿದೆ ಎಂದು ಹೇಳಿದರು.
ಸುಪ್ರೀಂ ಕೋರ್ಟ್‌ನಲ್ಲಿ ಯಾವುದೇ ಅರ್ಜಿ ಸಲ್ಲಿಸಿಲ್ಲ
ಬೆಂಗಳೂರು ವರದಿ : ಮೈಸೂರಿನ ನ್ಯಾಯಾಲಯ 51 ಟಾಡಾ ಆರೋಪಿಗಳ ವಿರುದ್ಧದ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲು ರಾಜ್ಯ ಸರಕಾರಕ್ಕೆ ಅವಕಾಶ ನೀಡಿರುವುದನ್ನು ಪ್ರಶ್ನಿಸಿ ಸರ್ವೋಚ್ಚ ನ್ಯಾಯಾಲಯದಲ್ಲಿ ಯಾವುದೇ ಮೇಲ್ಮನವಿ ಸಲ್ಲಿಸಲಾಗಿಲ್ಲ ಎಂದು ರಾಜ್ಯ ಕಾನೂನು ಸಚಿವ ಡಿ.ಬಿ. ಚಂದ್ರೇಗೌಡ ಶುಕ್ರವಾರ ಇಲ್ಲಿ ತಿಳಿಸಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications