ಅನ್ಯ ಮಾರ್ಗವಿಲ್ಲದ ಸರ್ಕಾರದಿಂದ ಕರೀಂ ಮನವೊಲಿಕೆ ಯತ್ನ?
ಬೆಂಗಳೂರು : ಮೈಸೂರು ನ್ಯಾಯಾಲಯ ವೀರಪ್ಪನ್ ಸಹಚರರರಾದ 51 ಮಂದಿ ಟಾಡಾ ಆರೋಪಿಗಳಿಗೆ ಷರತ್ತಿನ ಜಾಮೀನು ಮಂಜೂರು ಮಾಡಿ 24 ಗಂಟೆ ಕಳೆಯುವ ಮೊದಲೇ ಸರ್ವೋಚ್ಚ ನ್ಯಾಯಾಲಯ ನೀಡಿದ ತಡೆಯಾಜ್ಞೆ ರಾಜ್ಯ ಸರಕಾರವನ್ನು ಮತ್ತೊಮ್ಮೆ ಪೇಚಿಗೆ ಸಿಲುಕಿಸಿದೆ.
ವೀರಪ್ಪನ್ ತನ್ನ ಬೇಡಿಕೆ ಈಡೇರದೆ ರಾಜ್‌ಕುಮಾರ್ ಹಾಗೂ ಮತ್ತಿತರ ಮೂವರು ಒತ್ತೆಯಾಳುಗಳನ್ನು ಬಿಡುವುದು ಸದ್ಯದ ಪರಿಸ್ಥಿತಿಯಲ್ಲಿ ಕಷ್ಟಸಾಧ್ಯವೇ ಸರಿ. ವೀರಪ್ಪನ್ ತನ್ನ ಯಾವುದೇ ಬೇಡಿಕೆಗಳಿಗೆ ಸಂಬಂಧಿಸಿದಂತೆ ರಾಜಿಗೆ ಸಿದ್ಧನಿಲ್ಲ . ಅಡಕತ್ತರಿಯಲ್ಲಿ ಸಿಲುಕಿರುವ ಸರಕಾರ ವೀರಪ್ಪನ್‌ನನ್ನು ಸಮಾಧಾನಪಡಿಸುವ ಸ್ಥಿತಿಯಲ್ಲೂ ಇಲ್ಲ. ಸರ್ವೋಚ್ಚ ನ್ಯಾಯಾಲಯ ಏನು ತೀರ್ಪು ನೀಡುತ್ತದೆ ಎಂದು ಊಹಿಸಲೂ ಸಾಧ್ಯವಿಲ್ಲ. ಹೀಗಾಗಿ ಸರಕಾರದ ಪಾಲಿಗೆ ಈಗ ಉಳಿದಿರುವುದು ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲು ಹತ್ತಿರುವ ಅಬ್ದುಲ್ ಕರೀಂ ಅವರ ಮನವೊಲಿಕೆ ಯತ್ನ ಮಾತ್ರ. ಸರಕಾರ ಈಗ ವೀರಪ್ಪನ್ ಸಹಚರರಿಂದ ಹತ್ಯೆಗೀಡಾದ ಪೊಲೀಸ್ ಅಧಿಕಾರಿ ಶಕೀಲ್ ಅಹ್ಮದ್ ಅವರ ತಂದೆ ಕರೀಂ ಅವರ ಮನವೊಲಿಸಿ, ಅವರು ಸಲ್ಲಿಸಿರುವ ವಿಶೇಷ ತೆರವು ಅರ್ಜಿಯನ್ನು ವಾಪಸು ತೆಗೆಸುವ ಪ್ರಯತ್ನ ನಡೆಸಿದೆ.
ಇಂಡಿಯಾ ಅಬ್ರಾಡ್ ಪ್ರತಿನಿಧಿಗೆ ಈ ವಿಷಯ ತಿಳಿಸಿರುವ ರಾಜ್ಯದ ಉನ್ನತ ಅಧಿಕಾರಿಯಾಬ್ಬರು, ಸರಕಾರ ವಿಶೇಷ ತೆರವು ಅರ್ಜಿ ವಾಪಸು ತೆಗೆಸಲು, ಅಬ್ದುಲ್ ಕರೀಂ ಅವರು ಯಾವುದೇ ಬೇಡಿಕೆ ಮಂಡಿಸಿದರೂ ಅದನ್ನು ಈಡೇರಿಸಲು ಸಿದ್ಧವಿದೆ ಎಂದು ತಿಳಿಸಿದ್ದಾರೆ.
ಈಗ ಸರಕಾರ ರಾಜ್‌ಕುಮಾರ್ ಅವರನ್ನು ವೀರಪ್ಪನ್ ವಶದಿಂದ ಬಿಡಿಸಿಕೊಳ್ಳಲು ಕರೀಂ ಅವರ ಸಹಕಾರ ಕೇಳುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿವೆ ಎಂದು ಮೂಲಗಳು ಹೇಳಿವೆ. ಸರ್ವೋಚ್ಚ ನ್ಯಾಯಾಲಯದ ಈ ತಡೆಯಾಜ್ಞೆಯಿಂದಾಗಿ ರಾಜ್ಯ ಹೊಸ ಬಿಕ್ಕಟ್ಟನ್ನು ಎದುರಿಸುವಂತಾಗಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications