ಟಾಡಾ ಬಂದಿಗಳ ಬಿಡುಗಡೆ ವಿಚಾರಣೆ ಶುಕ್ರವಾರಕ್ಕೆ ಮುಂದೂಡಿಕೆ
ನವದೆಹಲಿ : ಮೈಸೂರು ನ್ಯಾಯಾಲಯ ನೀಡಿರುವ ಷರತ್ತಿನ ಜಾಮೀನಿನನ್ವಯ ಟಾಡಾ ಆರೋಪಿಗಳನ್ನು ಸೆಪ್ಟೆಂಬರ್ 1ನೇ ತಾರೀಖಿನವರೆಗೆ ಬಿಡುಗಡೆ ಮಾಡದಂತೆ ಸರ್ವೋನ್ನತ ನ್ಯಾಯಾಲಯ ಮಂಗಳವಾರ ತಡೆಯಾಜ್ಞೆ ನೀಡಿದೆ.
ಈ ಹಿನ್ನೆಲೆಯಲ್ಲಿ ಶುಕ್ರವಾರದವರೆಗೆ ರಾಜ್ಕುಮಾರ್ ಅವರ ಬಿಡುಗಡೆ ಮುಂದಕ್ಕೆ ಹೋಗುವುದು ಈಗ ನಿಶ್ಚಿತವಾಗಿದೆ. ವೀರಪ್ಪನ್ ಸಹಚರರಿಂದ ಹತರಾದ ಪೊಲೀಸ್ ಅಧಿಕಾರಿ ಶಖೀಲ್ ಅಹ್ಮದ್ ಅವರ ತಂದೆ ಅಬ್ದುಲ್ ಕರೀಂ ಅವರು ಸಲ್ಲಿಸಿರುವ ವಿಶೇಷ ತೆರವು ಅರ್ಜಿಯನ್ನು ಅಂಗೀಕರಿಸುವ ಬಗ್ಗೆ ವಾದವನ್ನು ಆಲಿಸಿದ ಸರ್ವೋನ್ನತ ನ್ಯಾಯಾಲಯ ಪ್ರಕರಣವನ್ನು ಶುಕ್ರವಾರಕ್ಕೆ ಮುಂದೂಡಿತು.
ಸರ್ವೋನ್ನತ ನ್ಯಾಯಾಲಯದ ಈ ತಡೆಯಾಜ್ಞೆಯಿಂದಾಗಿ ವೀರಪ್ಪನ್ ಸಹಚರರರಾದ 51 ಟಾಡಾ ಬಂದಿಗಳ ಬಿಡುಗಡೆ ಸೆಪ್ಟೆಂಬರ್ ಒಂದರವರೆಗೂ ಸಾಧ್ಯವಿಲ್ಲ. ಶುಕ್ರವಾರ ಸರ್ವೋನ್ನತ ನ್ಯಾಯಾಲಯ ತಳೆಯುವ ಅಭಿಪ್ರಾಯದ ಮೇಲೆ ರಾಜ್ಕುಮಾರ್ ಅವರ ಬಿಡುಗಡೆ ನಿಂತಿದೆ. ಮೈಸೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದ ಹಿನ್ನೆಲೆಯಲ್ಲಿ ಎಲ್ಲ 51 ಆರೋಪಿಗಳೂ ಮಂಗಳವಾರ ಬೆಳಗ್ಗೆಯೇ ಬಿಡುಗಡೆಯಾಗಬೇಕಾಗಿತ್ತು.
ಅಬ್ದುಲ್ ಕರೀಂ ಅವರು 51 ಜನ ಟಾಡಾ ಆರೋಪಗಳ ವಿರುದ್ಧದ ಮೊಕದ್ದಮೆಗಳನ್ನು ಕೈಬಿಡುವ ಕರ್ನಾಟಕ ಸರಕಾರದ ನಿರ್ಧಾರಕ್ಕೆ ತಡೆಯಾಜ್ಞೆ ನೀಡುವಂತೆ ಸರ್ವೋನ್ನತ ನ್ಯಾಯಾಲಯವನ್ನು ಕೋರಿದ್ದಾರೆ. ಸರಕಾರದ ನಿರ್ಧಾರವನ್ನು ಮೈಸೂರು ನ್ಯಾಯಾಲಯ ಎತ್ತಿ ಹಿಡಿದಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದಾಗಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications